Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಂತಿನಿಕೇತನ ಯುವಕ ಸಂಘದಿಂದ 49ನೇ ವರ್ಷದ ಅದ್ಧೂರಿ ಗಣೇಶೋತ್ಸವ*
  • *ಕರ್ನಾಟಕ ಅಂಡರ್-17 ಫುಟ್ಬಾಲ್ ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳು*
  • *ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 
  • *ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*
  • *ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣಕ್ಕೆ ಹೋಮ-ಹವನ : ದಸಂಸ ಖಂಡನೆ*
  • *ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಕಾಮಗಾರಿ ವೀಕ್ಷಣೆ*
  • *ವಿರಾಜಪೇಟೆಯಲ್ಲಿ ವಿಶ್ವಛಾಯಾಗ್ರಹಣ ದಿನಾಚರಣೆ : ಮನಸ್ಸು ಕೇಂದ್ರೀಕರಿಸಿ ಉತ್ತಮ ಛಾಯಾಚಿತ್ರ ತೆಗೆಯಿರಿ : ಡಾ.ಎಸ್.ವಿ.ನರಸಿಂಹನ್ ಕರೆ*
  • *ಆ.21 ರಂದು ರೋಟರಿ ಮಿಸ್ಟಿ ಹಿಲ್ಸ್ ನಿಂದ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮ*
  • *ನಾಗರಪಂಚಮಿ ಬದಲು ಬಸವ ಪಂಚಮಿ ಆಚರಿಸಿದ ಮಾನವ ಬಂಧುತ್ವ ವೇದಿಕೆ*
  • *ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನೇರುಗಳಲೆ ಸರ್ಕಾರಿ ಶಾಲೆಯಲ್ಲಿ ಎಲ್‍ಕೆಜಿ ತರಗತಿ ಆರಂಭ : ಸ್ಪರ್ಧಾತ್ಮಕ ಯುಗದಲ್ಲಿ ಇಂಗ್ಲಿಷ್ ಜ್ಞಾನ ಅಗತ್ಯ : ಶಾಸಕ ಡಾ.ಮಂತರ್ ಗೌಡ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನೇರುಗಳಲೆ ಸರ್ಕಾರಿ ಶಾಲೆಯಲ್ಲಿ ಎಲ್‍ಕೆಜಿ ತರಗತಿ ಆರಂಭ : ಸ್ಪರ್ಧಾತ್ಮಕ ಯುಗದಲ್ಲಿ ಇಂಗ್ಲಿಷ್ ಜ್ಞಾನ ಅಗತ್ಯ : ಶಾಸಕ ಡಾ.ಮಂತರ್ ಗೌಡ*

ಸೆಪ್ಟೆಂಬರ್ 24, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಸೆ.24 NEWS DESK : ಅಂಕುರಂ ಹಿರಿಯ ವಿದ್ಯಾರ್ಥಿಗಳ ಎಜುಕೇಷನ್ ಟ್ರಸ್ಟ್, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ನೇರುಗಳಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ವತಿಯಿಂದ ಪ್ರಾರಂಭವಾಗಿರುವ ಎಲ್‍ಕೆಜಿ ತರಗತಿಯ ನೂತನ ಕೊಠಡಿಗಳನ್ನು ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಮಾತೃ ಭಾಷೆ ನಮಗೆಲ್ಲ ಅತ್ಯಾವಶ್ಯಕವಾದರೂ, ಬದುಕಿಗಾಗಿ ಆಂಗ್ಲಭಾಷೆ ಕಲಿಯಲೇಬೇಕು. ಸ್ಪರ್ಧಾತ್ಮಕ ಯುಗದಲ್ಲಿ ಇಂಗ್ಲೀಷ್ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಆಂಗ್ಲ ಮಾದ್ಯಮ ಶಾಲೆಗಳಿಗೆ ಸೇರಿಸಿ ಶಿಕ್ಷಣ ಕೊಡಿಸುತ್ತಿದ್ದಾರೆ. ಆದರೆ ಸರ್ಕಾರಿ ಶಾಲೆಗಳಲ್ಲಿಯೂ ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದು, ಪೋಷಕರು ಕಡಿಮೆ ಹಣದಲ್ಲಿ ಪ್ರಾಥಮಿಕ ಶಿಕ್ಷಣ ಕೊಡಿಸುವ ಬಗ್ಗೆ ಚಿಂತಿಸಬೇಕು ಎಂದರು. ಯಾವುದೇ ಗ್ರಾಮಗಳಲ್ಲಿ ಸ್ಥಳೀಯರ ನೆರವಿಲ್ಲದೆ, ಸರ್ಕಾರಿ ಶಾಲೆಗಳು ಮುಂದುವರೆಯಲು ಸಾಧ್ಯವಿಲ್ಲ. ಶಾಲೆಯ ಹಳೆಯ ವಿದ್ಯಾರ್ಥಿಗಳು ತಾವು ಕಲಿತ ಶಾಲೆಯನ್ನು ಉಳಿಸಲು ಲಕ್ಷಾಂತರ ರೂ.ಸಂಗ್ರಹಿಸಿ, ಆಂಗ್ಲ ಮಾದ್ಯಮದಲ್ಲಿ ಶಿಕ್ಷಣವನ್ನು ಸ್ಥಳೀಯರಿಗೆ ಕೊಡಲು ಮುಂದಾಗಿರುವುದ ಶ್ಲಾಘನೀಯ. ಶಿಕ್ಷಕರು ಬದಲಾದ ಪಠ್ಯದಂತೆಯೇ ಮಕ್ಕಳಿಗೆ ಶಿಕ್ಷಣ ನೀಡಬೇಕು. ಮುಂದಿನ ದಿನಗಳಲ್ಲಿ ಶಾಲೆಗೆ ಉಳಿಕೆ ಕೊಠಡಿ ನಿರ್ಮಾಣಕ್ಕೆ ಶಾಸಕರ ನಿಧಿ ಮತ್ತು ಯುಕೆಜಿ ತರಗತಿಗೆ ಬೇಕಾದ ಬೆಂಚು ಮತ್ತು ಡೆಸ್ಕ್‍ಗಳಿಗೆ ಸ್ವಂತ ಹಣವನ್ನು ನೀಡಲಾಗುವುದು ಎಂದು ಹೇಳಿದರು. ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎಂ.ಡಿಸಿಲ್ವಾ ಮಾತನಾಡಿ, ಗ್ರಾಮೀಣ ಭಾಗಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಆಂಗ್ಲ ಮಾದ್ಯಮದಲ್ಲಿ ಕಲಿಯಲು ಪಟ್ಟಣದತ್ತ ತೆರಳಿದ ಹಿನ್ನೆಲೆಯಲ್ಲಿ ಸಾಕಷ್ಟು ಸರ್ಕಾರಿ ಶಾಲೆಗಳು ಬಾಗಿಲು ಮುಚ್ಚುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಿಟ್ಟಿನಲ್ಲಿ ಹಳೆಯ ವಿದ್ಯಾರ್ಥಿಗಳು ಸೇರಿ ನಮ್ಮ ಶಾಲೆಯಲ್ಲಿ ಆಂಗ್ಲ ಮಾಧ್ಯಮದಲ್ಲಿ ತರಗತಿ ಪ್ರಾರಂಭಿಸಲು ಚಿಂತನೆ ನಡೆಸಿ ಎಲ್‍ಕೆಜಿ ಪ್ರಾರಂಭಿಸಲಾಗಿದೆ. ಇದಕ್ಕಾಗಿ ಹಳೆಯ ವಿದ್ಯಾರ್ಥಿಗಳ ನೆರವಿನಿಂದ 15 ಲಕ್ಷ ರೂ, ವೆಚ್ಚದಲ್ಲಿ ಕಟ್ಟಡ ನಿರ್ಮಾಣ ಮಾಡಲಾಗಿದೆ. ಗ್ರಾಮೀಣ ಭಾಗವಾಗಿರುವುದರಿಂದ 4 ಲಕ್ಷ ರೂ, ವೆಚ್ಚದಲ್ಲಿ ಶಾಲಾ ಬಸ್ ಖರೀದಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ನಮ್ಮೂರಿನ ಶಾಲೆಯನ್ನು ಉಳಿಸಿ ಬೆಳೆಸಲು ಎಲ್ಲ ಹಳೆಯ ವಿದ್ಯಾರ್ಥಿಗಳೂ ಪಣತೊಟ್ಟಿದ್ದು, ಇನ್ನೂ ಹೆಚ್ಚಿನ ಅನುಕೂಲ ಕಲ್ಪಿಸಲಾಗುವುದು ಎಂದು ಹೇಳಿದರು. ಅಂಕುರಂ ಟ್ರಸ್ಟ್ ಅಧ್ಯಕ್ಷ ವೈ.ಪಿ.ಬೋಜೇಗೌಡ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೇರುಗಳಲೆ ಗ್ರಾ.ಪಂ ಅಧ್ಯಕ್ಷ ಹೆಚ್.ಕೆ.ವಿನೋದ್‍ಕುಮಾರ್, ಸದಸ್ಯ ಅಜಿತ್, ಉದ್ಯಮಿಗಳಾದ ವಿ.ಎಂ.ವಿಜಯ, ಗಿರೀಶ್ ಮಲ್ಲಪ್ಪ, ಬಿಇಓ ಭಾಗ್ಯಮ್ಮ, ಪ್ರೌಢಶಾಲಾ ಎಸ್‍ಡಿಎಂಸಿ ಅಧ್ಯಕ್ಷೆ ಎ.ಡಿ.ಪಾರ್ವತಿ, ಪ್ರಾಥಮಿಕ ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಹೆಚ್.ಬಿ.ದಿಲೀಪ್, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ರೂಪಾ ಸತೀಶ್, ಪ್ರೌಢಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಡಿಸಿಲ್ವ ಇದ್ದರು. ದಾನಿಗಳಾದ ಮಾಜಿ ಸೈನಿಕ ಗಣೇಶ್, ಮುರಳೀಧರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ರೋಹಿತ್ ಅವರುಗಳನ್ನು ಸನ್ಮಾನಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಂತಿನಿಕೇತನ ಯುವಕ ಸಂಘದಿಂದ 49ನೇ ವರ್ಷದ ಅದ್ಧೂರಿ ಗಣೇಶೋತ್ಸವ*

ಆಗಷ್ಟ್ 20, 2026

*ಕರ್ನಾಟಕ ಅಂಡರ್-17 ಫುಟ್ಬಾಲ್ ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 

ಆಗಷ್ಟ್ 19, 2026

*ಕರ್ನಾಟಕ ಅಂಡರ್-17 ಫುಟ್ಬಾಲ್ ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳು*

ಆಗಷ್ಟ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.19 NEWS DESK  : ಮಡಿಕೇರಿಯ ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್‌ನ ನಾಲ್ವರು ಪ್ರತಿಭಾವಂತ ವಿದ್ಯಾರ್ಥಿಗಳು ದಕ್ಷಿಣ ವಲಯ…

*ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 

ಆಗಷ್ಟ್ 19, 2026

*ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*

ಆಗಷ್ಟ್ 19, 2026

*ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣಕ್ಕೆ ಹೋಮ-ಹವನ : ದಸಂಸ ಖಂಡನೆ*

ಆಗಷ್ಟ್ 19, 2026

*ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಕಾಮಗಾರಿ ವೀಕ್ಷಣೆ*

ಆಗಷ್ಟ್ 19, 2026

*ವಿರಾಜಪೇಟೆಯಲ್ಲಿ ವಿಶ್ವಛಾಯಾಗ್ರಹಣ ದಿನಾಚರಣೆ : ಮನಸ್ಸು ಕೇಂದ್ರೀಕರಿಸಿ ಉತ್ತಮ ಛಾಯಾಚಿತ್ರ ತೆಗೆಯಿರಿ : ಡಾ.ಎಸ್.ವಿ.ನರಸಿಂಹನ್ ಕರೆ*

ಆಗಷ್ಟ್ 19, 2026

*ಆ.21 ರಂದು ರೋಟರಿ ಮಿಸ್ಟಿ ಹಿಲ್ಸ್ ನಿಂದ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮ*

ಆಗಷ್ಟ್ 19, 2026

*ನಾಗರಪಂಚಮಿ ಬದಲು ಬಸವ ಪಂಚಮಿ ಆಚರಿಸಿದ ಮಾನವ ಬಂಧುತ್ವ ವೇದಿಕೆ*

ಆಗಷ್ಟ್ 19, 2026

*ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*

ಆಗಷ್ಟ್ 19, 2026

*ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*

ಆಗಷ್ಟ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.