ಮಡಿಕೇರಿ ಸೆ.25 NEWS DESK : ಮೂಲಸೌಲಭ್ಯ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿ ವಿರಾಜಪೇಟೆಯ ಗ್ರಾಮ ಆಡಳಿತ ಅಧಿಕಾರಿಗಳು ತಹಶೀಲ್ದಾರ್ ಅವರ ಮೂಲಕ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದರು. ರಾಜ್ಯದ್ಯಂತ ಗ್ರಾಮ ಆಡಳಿತ ಅಧಿಕಾರಿಗಳು ಸರ್ಕಾರದ ಯೋಜನೆಗಳಿಗೆ ಸಂಬಂಧಿಸಿದ ವಿವಿಧ ಆ್ಯಪ್ ಗಳಲ್ಲಿ ಕರ್ತವ್ಯ ನಿರ್ವಹಿಸಲು ಒತ್ತಡ ಹೆಚ್ಚಾಗಿದ್ದು, ಸರ್ಕಾರ ಯಾವ ಸೌಲಭ್ಯವು ನೀಡುತ್ತಿಲ್ಲ ಎಂದು ಆರೋಪಿಸಿದರು. ನಿತ್ಯ ಒತ್ತಡದ ಕಾರ್ಯನಿರ್ವಹಣೆಯಿಂದಾಗಿ ಅಧಿಕಾರಿಗಳು ನೋವು ಅನುಭವಿಸುವಂತಾಗಿದೆ. ಆದ್ದರಿಂದ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಕೇಂದ್ರ ಸಂಘ ನಿರ್ದೇಶನದಂತೆ ಮುಷ್ಕರ ಹಮ್ಮಿಕೊಳ್ಳಲಾಗಿದ್ದು, ಮನವಿಗೆ ಸ್ಪಂದಿಸದಿದ್ದಲ್ಲಿ ಸೆ.26 ರಂದು ಕರ್ತವ್ಯಕ್ಕೆ ಗೈರಾಗುವ ಮೂಲಕ ರಾಜ್ಯಾದ್ಯಂತ ಏಕಕಾಲದಲ್ಲಿ ಪ್ರತಿಭಟನೆ ನಡೆಸಲಾಗುವುದೆಂದು ವಿರಾಜಪೇಟೆ ತಾಲ್ಲೂಕಿನ ಗ್ರಾಮ ಆಡಳಿತ ಅಧಿಕಾರಿ ಸಂಘದ ಅಧ್ಯಕ್ಷರು ತಿಳಿಸಿದ್ದಾರೆ. ಮನವಿ ನೀಡುವ ಸಂದರ್ಭ ವಿರಾಜಪೇಟೆ ತಾಲೂಕಿನ ಎಲ್ಲ ಗ್ರಾಮ ಆಡಳಿತ ಅಧಿಕಾರಿಗಳು ಹಾಜರಿದ್ದರು.