ಮಡಿಕೇರಿ ಸೆ.26 NEWS DESK : ಗ್ರಾಮ ಆಡಳಿತ ಅಧಿಕಾರಿಗಳ ಹಾಗೂ ಗ್ರಾಮ ಸಹಾಯಕರ ಕುಂದುಕೊರತೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ, ಕೊಡಗು ಜಿಲ್ಲಾ ಘಟಕ ಆಗ್ರಹಿಸಿದೆ. ಜಿಲ್ಲಾಧಿಕಾರಿ, ಕೊಡಗು ಉಪವಿಭಾಗಾಧಿಕಾರಿ ಹಾಗೂ ಜಿಲ್ಲೆಯ ಐದು ತಾಲ್ಲೂಕಿನ ತಹಶೀಲ್ದಾರರಿಗೆ ಮನವಿ ಸಲ್ಲಿಸಿದ ಘಟದ ಪ್ರಮುಖರು ಹಾಗೂ ಪದಾಧಿಕಾರಿಗಳು ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿದರು. ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಸಂಘದ ಕೇಂದ್ರ ಸಂಘದ ಕಾರ್ಯಕಾರಿಣಿ ನಿರ್ಣಯದಂತೆ ಇಲಾಖೆಯ ವತಿಯಿಂದ ಅಭಿವೃದ್ಧಿಪಡಿಸಲಾಗಿರುವ 17 ಅಧಿಕ ತಂತ್ರಾಂಶಗಳನ್ನು ಮೊಬೈಲ್, ಲ್ಯಾಪ್ ಟಾಪ್, ಇಂಟರ್ನೆಟ್ ಹಾಗೂ ಅವಶ್ಯ ಸೌಲಭ್ಯಗಳನ್ನು ನೀಡದೆ ಅವುಗಳನ್ನು ನಿರ್ವಹಿಸಲು ಒತ್ತಡ ಹೆರುತ್ತಿರುವ ಬಗ್ಗೆ ಮೂಲ ಸೌಲಭ್ಯಗಳನ್ನು ಕಲ್ಪಿಸುವ ಜೊತೆಗೆ ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸೌಲಭ್ಯಗಳನ್ನು ಒದಗಿಸಬೇಕು, ಗ್ರಾಮ ಸಹಾಯಕರ ಸೇವಾ ಭದ್ರತೆ ನೀಡಬೇಕು ಎಂದು ಒತ್ತಾಯಿಸಿದ ಅವರು, ತಪ್ಪಿದ್ದಲ್ಲಿ ಬೇಡಿಕೆಗಳು ಈಡೇರಿವವರೆಗೂ ಮುಷ್ಕರ ಹೂಡುವುದಾಗಿ ಮನವಿಯಲ್ಲಿ ತಿಳಿಸಿದ್ದಾರೆ.