Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಹೆಗ್ಗಡೆ ಸಮಾಜದ ಕ್ರೀಡಾ ಹಬ್ಬಕ್ಕೆ ಸಂಭ್ರಮದ ತೆರೆ*
  • *ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*
  • *5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*
  • *ಕೊಡಗು : ಪತ್ರಿಕಾ ಪ್ರವಾಸ ವಾಹನಕ್ಕೆ ಚಾಲನೆ*
  • *ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ : ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭ ಸಾಧ್ಯತೆ : ರಸ್ತೆ ಸೇರಿದಂತೆ ಹಲವು ಕಾಮಗಾರಿ ಪೂರ್ಣಗೊಳಿಸಿ : ಸಚಿವ ಎನ್.ಎಸ್.ಭೋಸರಾಜು*
  • *ಮಾದಾಪುರದಲ್ಲಿ ಕೊಡವ ಸಮಾಜ ಭವನ ಲೋಕಾಪ೯ಣೆ : ಪ್ರಾಮಾಣಿಕತೆಯೊಂದಿಗೆ ಸಂಸ್ಕೃತಿ ಸಂರಕ್ಷಣೆಗೆ ಕೊಡವರು ವಿಶ್ವವ್ಯಾಪಿ ಹೆಸರು ವಾಸಿ : ಬಸವರಾಜ ಬೊಮ್ಮಾಯಿ ಶ್ಲಾಘನೆ*
  • *ಮಡಿಕೇರಿಯಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಪೊನ್ನಂಪೇಟೆಯಲ್ಲಿ ಬಿಜೆಪಿ ವಿಜಯೋತ್ಸವ*
  • *ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಉದ್ಘಾಟನೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ : ನವೆಂಬರ್ ತಿಂಗಳಲ್ಲಿ ‘ಗ್ಯಾರಂಟಿ ಅನುಷ್ಠಾನ ಜಾಗೃತಿ ಸಪ್ತಾಹ’: ಡಾ.ಪುಷ್ಪಾ ಅಮರನಾಥ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ : ನವೆಂಬರ್ ತಿಂಗಳಲ್ಲಿ ‘ಗ್ಯಾರಂಟಿ ಅನುಷ್ಠಾನ ಜಾಗೃತಿ ಸಪ್ತಾಹ’: ಡಾ.ಪುಷ್ಪಾ ಅಮರನಾಥ್*

ಸೆಪ್ಟೆಂಬರ್ 26, 20244 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.26 NEWS DESK : ಸರ್ಕಾರದ ಪ್ರಮುಖ ಕಾರ್ಯಕ್ರಮಗಳಾದ ಗ್ಯಾರಂಟಿ ಯೋಜನೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಮೈಸೂರು ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ನವೆಂಬರ್ ತಿಂಗಳಲ್ಲಿ ‘ಗ್ಯಾರಂಟಿ ಅನುಷ್ಠಾನ ಜಾಗೃತಿ ಸಪ್ತಾಹ’ ಆಯೋಜಿಸಲಾಗುವುದು ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಮೈಸೂರು ವಿಭಾಗದ ಉಪಾಧ್ಯಕ್ಷರಾದ ಡಾ.ಪುಷ್ಪಾ ಅಮರನಾಥ್ ತಿಳಿಸಿದ್ದಾರೆ. ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು. ಸರ್ಕಾರ ಗೃಹ ಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಕಾರ್ಯಕ್ರಮವನ್ನು ಜಾರಿಗೊಳಿಸಿದೆ. ಈ ಗ್ಯಾರಂಟಿ ಯೋಜನೆಗಳಿಂದ ಬಿಪಿಎಲ್ ಕುಟುಂಬದವರು ಯಾವುದೇ ಕಾರಣಕ್ಕೂ ವಂಚಿತರಾಗಬಾರದು, ಅರ್ಹರೆಲ್ಲರಿಗೂ ಗ್ಯಾರಂಟಿ ಯೋಜನೆಗಳು ತಲುಪಬೇಕು. ಶೇ.100 ರಷ್ಟು ಪ್ರಗತಿ ಸಾಧಿಸಬೇಕು. ಆ ನಿಟ್ಟಿನಲ್ಲಿ ಗ್ಯಾರಂಟಿ ಅನುಷ್ಠಾನ ಸಪ್ತಾಹವನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. ಗ್ಯಾರಂಟಿ ಅನುಷ್ಠಾನ ಜಾಗೃತಿ ಸಪ್ತಾಹ ಸಂಬಂಧ ರಾಜ್ಯ ಅಧ್ಯಕ್ಷರ ಗಮನಕ್ಕೆ ತಂದು, ರಾಜ್ಯಾದ್ಯಂತ ಈ ಕಾರ್ಯಕ್ರಮ ಆಯೋಜಿಸಲು ಮುಂದಿನ ದಿನಗಳಲ್ಲಿ ಚಿಂತಿಸಲಾಗುವುದು ಎಂದು ಪುಷ್ಪಾ ಅಮರನಾಥ್ ಹೇಳಿದರು. ಗ್ಯಾರಂಟಿ ಯೋಜನೆಗಳು ಶೇ.100 ರಷ್ಟು ಪ್ರಗತಿ ಸಾಧಿಸಬೇಕು. ಪ್ರತಿಯೊಬ್ಬರಿಗೂ ತಲುಪಬೇಕು. ಆ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ತಾ.ಪಂ.ಇಒಗಳು, ಪಿಡಿಒಗಳು ಗ್ರಾಮ ಆಡಳಿತ ಅಧಿಕಾರಿಗಳು, ಸೇರಿದಂತೆ ಹಲವು ಇಲಾಖೆಗಳ ಜೊತೆಗೂಡಿ ಮನೆ ಮನೆ ಸಮೀಕ್ಷೆ ಮಾಡಿ ಗ್ಯಾರಂಟಿ ಯೋಜನೆಯಿಂದ ಯಾರು ದೂರವಿದ್ದಾರೆ. ಗ್ಯಾರಂಟಿ ಯೋಜನೆ ಇದುವರೆಗೆ ಪಡೆಯದಿರಲು ಕಾರಣವೇನು, ಮತ್ತಿತರ ಬಗ್ಗೆ ಮಾಹಿತಿ ಪಡೆಯಬೇಕು. ಜೊತೆಗೆ ಅಗತ್ಯ ದಾಖಲೆಗಳು ಇಲ್ಲದಿರುವವರು ಸಹ ಇದ್ದು, ಅಂತಹ ಕುಟುಂಬಗಳಿಂದ ಮಾಹಿತಿ ತಿಳಿದು, ಅಗತ್ಯ ದಾಖಲೆಗಳನ್ನು ಒದಗಿಸುವ ಮೂಲಕ ಗ್ಯಾರಂಟಿ ಯೋಜನೆ ಪ್ರಗತಿ ಸಾಧಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಮೈಸೂರು ವಿಭಾಗದ ಉಪಾಧ್ಯಕ್ಷರು ನಿರ್ದೇಶನ ನೀಡಿದರು. ನವೆಂಬರ ತಿಂಗಳ ಮೊದಲ ವಾರದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡು, ನಂತರ ಸಪ್ತಾಹ ಹಮ್ಮಿಕೊಳ್ಳಬೇಕು. ಈ ಕಾರ್ಯಕ್ರಮದಲ್ಲಿ ಎಲ್ಲಾ ಹಂತದ ಇಲಾಖಾ ಅಧಿಕಾರಿಗಳು ಪಾಲ್ಗೊಂಡು ಕಾರ್ಯಕ್ರಮ ಯಶಸ್ಸಿಗೆ ಸಹಕರಿಸಬೇಕು ಎಂದರು. ‘ಗ್ಯಾರಂಟಿ ಯೋಜನೆಗಳು ಬಡ ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಿದ್ದು, ಈ ಕಾರ್ಯಕ್ರಮಗಳನ್ನು ಪ್ರತಿ ಹಂತದ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಬದ್ಧತೆ ಮತ್ತು ಪ್ರಾಮಾಣಿಕತೆಯಿಂದ ಸರ್ಕಾರದ ಯೋಜನೆಗಳನ್ನು ತಲುಪಿಸಬೇಕು ಎಂದು ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.’ ಸಾರ್ವಜನಿಕರ ಸ್ಥಳಗಳು ಸೇರಿದಂತೆ ಕಚೇರಿಗಳಲ್ಲಿ ಗ್ಯಾರಂಟಿ ಯೋಜನೆಗಳ ಫಲಕವನ್ನು ಅಳವಡಿಸಬೇಕು. ಇದರಿಂದ ಗ್ಯಾರಂಟಿ ಯೋಜನೆ ಪಡೆಯಲು ಸಹಕಾರಿಯಾಗಲಿದೆ ಎಂದು ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷರು ಅಭಿಪ್ರಾಯಪಟ್ಟರು. ‘ಇಡೀ ರಾಷ್ಟ್ರದಲ್ಲಿ ಗ್ಯಾರಂಟಿ ಯೋಜನೆಗಳ ಪದವನ್ನು ಬಳಸಿದ್ದು ಸಿದ್ದರಾಮಯ್ಯ ಸರ್ಕಾರದ್ದಾಗಿದೆ. ಆ ನಿಟ್ಟಿನಲ್ಲಿ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಒಂದು ವರ್ಷದೊಳಗೆ ಜಾರಿ ಮಾಡಿದೆ. ವಾರ್ಷಿಕವಾಗಿ 56 ಸಾವಿರ ಕೋಟಿ ರೂ. ವನ್ನು ಗ್ಯಾರಂಟಿ ಯೋಜನೆಗೆ ವಿನಿಯೋಗ ಮಾಡಲಾಗುತ್ತಿದ್ದು, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನುಡಿದಂತೆ ನಡೆದಿದೆ ಎಂಬುದನ್ನು ಯಾರೂ ಸಹ ಮರೆಯುವಂತಿಲ್ಲ ಎಂದು ಡಾ.ಪುಷ್ಪಾ ಅಮರನಾಥ್ ವಿವರಿಸಿದರು.’ ‘ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಲೋಪ ಆಗಬಾರದು. ಜನರ ಕಷ್ಟಗಳಿಗೆ ಸ್ಪಂದಿಸಬೇಕು. ಪ್ರತಿಯೊಬ್ಬ ಫಲಾನುಭವಿಗೂ ಸರ್ಕಾರದ ಯೋಜನೆಗಳು ತಲುಪಬೇಕು. ಅಸಡ್ಡೆ, ನಿರ್ಲಕ್ಷ್ಯ ಮಾಡಿದರೆ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.’ ಗೃಹ ಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಎರಡು ತಿಂಗಳ ಹಣ ಪಾವತಿಗೆ ಬಾಕಿ ಇದ್ದು, ಶೀಘ್ರ ಪಾವತಿಯಾಗಲಿದೆ. ಸರ್ಕಾರಿ ಕಚೇರಿಗಳು ಸೇರಿದಂತೆ ಬಸ್ ನಿಲ್ದಾಣ, ಆಸ್ಪತ್ರೆ, ಮಾರುಕಟ್ಟೆ, ಹೀಗೆ ವಿವಿಧ ಜನದಟ್ಟಣೆ ಪ್ರದೇಶದಲ್ಲಿ ಒಂದು ವಾರದಲ್ಲಿ ಗ್ಯಾರಂಟಿ ಫಲಕಗಳನ್ನು ಅಳವಡಿಸಬೇಕು. ಫಲಕದಲ್ಲಿ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರ ಭಾವಚಿತ್ರ ಇರಬೇಕು. ಜನರಿಗೆ ಸರ್ಕಾರದ ಕಾರ್ಯಕ್ರಮವನ್ನು ತಿಳಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಪುಷ್ಪಾ ಅಮರನಾಥ್ ಅವರು ತಾಕೀತು ಮಾಡಿದರು.
‘ಸಮಾಜದಲ್ಲಿ ಟೀಕೆಗಳು, ವಿಮರ್ಶೆಗಳು ಇರಬೇಕು. ಹಾಗಾದಾಗ ನಾವು ಹೆಚ್ಚಿನ ಕೆಲಸ ಮಾಡಲು, ಜೊತೆಗೆ ಎಚ್ಚರಿಕೆಯಿಂದಿರಲು ಸಾಧ್ಯ. ಆ ನಿಟ್ಟಿನಲ್ಲಿ ಟೀಕೆಗಳು ಸಾಯುತ್ತವೆ. ಜನರ ಕೆಲಸಗಳು ಉಳಿಯುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪದೇ ಪದೇ ಹೇಳುತ್ತಾರೆ ಎಂದು ಇದೇ ಸಂದರ್ಭದಲ್ಲಿ ನುಡಿದರು.’ ಬಿಪಿಎಲ್ ಕುಟುಂಬದ ಎಲ್ಲರಿಗೂ ಗೃಹಲಕ್ಷ್ಮಿ ಯೋಜನೆ ತಲುಪಬೇಕು ಎಂದರು. ಅಂತ್ಯೋದಯ ಅನ್ನಯೋಜನೆ ಅರ್ಹರಿಗೆ ತಲುಪಬೇಕು. ಅನ್ನಭಾಗ್ಯ ಯೋಜನೆಯು ಅರ್ಹರೆಲ್ಲರಿಗೂ ತಲುಪಬೇಕು ಎಂದರು. ಗೃಹಲಕ್ಷ್ಮಿ ಯೋಜನೆ ಸಂಬಂಧಿಸಿದಂತೆ ಮಾಹಿತಿ ಪಡೆದ ಪುಷ್ಪಾ ಅಮರನಾಥ್ ಅವರು ಶೇ.98.99 ರಷ್ಟು ಸಾಧನೆ ಮಾಡಲಾಗಿದ್ದು, ಬಾಕಿ ಇರುವ 1089 ಮಂದಿಗೆ ಫಲಾನುಭವಿಗಳಿಗೆ ಯೋಜನೆ ತಲುಪಿಸುವಂತೆ ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅವರು ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಎಲ್ಲಾ ಕುಟುಂಬಗಳಿಗೆ ಗ್ಯಾರಂಟಿ ಯೋಜನೆ ತಲುಪಬೇಕು. ಅದರಲ್ಲೂ ಜಿಲ್ಲೆಯಲ್ಲಿ ಆದಿವಾಸಿ ಕುಟುಂಬಗಳು ಸರ್ಕಾರದ ಯೋಜನೆ ಪಡೆಯಲು ಪರಿತಪಿಸುತ್ತಿದ್ದಾರೆ. ಆದಿವಾಸಿ ಜನರು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿದ್ದು, ಅಂತಹ ಆದಿವಾಸಿ ಕುಟುಂಬಗಳಿಗೆ ಅಗತ್ಯ ದಾಖಲೆಗಳನ್ನು ಒದಗಿಸಿ ಗ್ಯಾರಂಟಿ ಯೋಜನೆ ಕಡ್ಡಾಯವಾಗಿ ತಲುಪಿಸುವಂತಾಗಬೇಕು ಎಂದು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು. ಗ್ಯಾರಂಟಿ ಯೋಜನೆಗಳನ್ನು ಪೈಲೆಟ್ ಮಾದರಿಯಲ್ಲಿ ಅನುಷ್ಠಾನಗೊಳಿಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಗಮನಹರಿಸುವುದು ಅತೀ ಮುಖ್ಯವಾಗಿದೆ ಎಂದರು. ಐದು ಗ್ಯಾರಂಟಿ ಯೋಜನೆಗಳ ಜೊತೆಗೆ ಇತರ ಕಾರ್ಯಕ್ರಮಗಳನ್ನು ಸರ್ಕಾರ ಜಾರಿಗೊಳಿಸಿದೆ. ಆ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಯಲ್ಲಿ ತೊಡಕುಗಳನ್ನು ನಿವಾರಣೆ ಮಾಡಿ ಕಾರ್ಯಕ್ರಮ ಅನುಷ್ಠಾನ ಮಾಡಬೇಕು ಎಂದರು. ಈ ಸಂದರ್ಭದಲ್ಲಿ ಸಾರ್ವಜನಿಕರೊಬ್ಬರು ಮಾತನಾಡಿ ದಿಡ್ಡಳ್ಳಿ ಜನರನ್ನು ಸ್ಥಳಾಂತರಿಸಲಾಗಿದ್ದು, ಇವರಿಗೆ ಪಡಿತರ ಚೀಟಿ, ಆಧಾರ್ ಕಾರ್ಡ್, ಆದಾಯ ಹಾಗೂ ಜಾತಿ ಪ್ರಮಾಣ ಪತ್ರ ಇಲ್ಲದೆ ಸರ್ಕಾರದ ಸೌಲಭ್ಯ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಅಳಲು ತೋಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಐಟಿಡಿಪಿ ಇಲಾಖಾ ಅಧಿಕಾರಿ ಹೊನ್ನೇಗೌಡ ಅವರು ಆದಿವಾಸಿ ಜೇನುಕುರುಬ, ಕಾಡುಕುರುಬ, ಬೆಟ್ಟಕುರುಬ, ಸೋಲಿಗ, ಯರವ ಮತ್ತಿತರ ಆದಿವಾಸಿ ಜನರಿಗೆ ಅಗತ್ಯ ದಾಖಲಾತಿ ಕಲ್ಪಿಸುವ ನಿಟ್ಟಿನಲ್ಲಿ ‘ದಾಖಲಾತಿ ಆಂದೋಲನ’ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸಮಿತಿ ಸದಸ್ಯರೊಬ್ಬರು ಮಾತನಾಡಿ ಬೆಂಗಳೂರು-ಸೋಮವಾರಪೇಟೆ ಮಾರ್ಗದಲ್ಲಿ ಕೆಎಸ್‍ಆರ್‍ಟಿಸಿ ಬಸ್ ಸಂಚರಿಸುತ್ತಿದ್ದು, ರಾತ್ರಿ ವೇಳೆಯಲ್ಲಿ ಪ್ರಯಾಣಿಕರಿಗೆ ಗ್ರಾಮೀಣ ಪ್ರದೇಶದಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಬೇಕು ಎಂದರು ಕೋರಿದರು. ಮತ್ತೊಬ್ಬ ಸದಸ್ಯರೊಬ್ಬರು ಮಾತನಾಡಿ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಗ್ರಾ.ಪಂ.ವ್ಯಾಪ್ತಿಯಲ್ಲಿನ ವಾಹನದಲ್ಲಿ ಪ್ರಚಾರ ಮಾಡುವಂತಾಗಬೇಕು ಎಂದು ಸಲಹೆ ಮಾಡಿದರು. ಗೃಹಲಕ್ಷ್ಮಿ ಯೋಜನೆ ಬಗ್ಗೆ ಮಾಹಿತಿ ನೀಡಿದ ನಟರಾಜು ಅವರು ಜಿಲ್ಲೆಯಲ್ಲಿ 1,16,594 ಜನರು ನೋಂದಣಿಯಾಗಿದ್ದು, 1,15,425 ಮಂದಿ ಫಲಾನುಭವಿಗಳಿಗೆ ನೇರ ನಗದು ಪಾವತಿಯಾಗುತ್ತದೆ. ಇದುವರೆಗೆ 23.08 ಕೋಟಿ ರೂ. ಪಾವತಿಯಾಗಿದೆ ಎಂದು ಮಾಹಿತಿ ನೀಡಿದರು. ಗೃಹಜ್ಯೋತಿ ಯೋಜನೆಯಡಿ 1,56,622 ಮಂದಿಯಲ್ಲಿ 1,55,508 ಮಂದಿ ಹೆಸರು ನೋಂದಾಯಿಸಿದ್ದು, 1,114 ಮಂದಿ ಬಾಕಿ ಇದ್ದಾರೆ. ಒಟ್ಟಾರೆ ಗೃಹಜ್ಯೋತಿ ಯೋಜನೆಯಡಿ ಶೇ.99.29 ರಷ್ಟು ಪ್ರಗತಿ ಸಾಧಿಸಲಾಗಿದ್ದು, 7,959 ಲಕ್ಷ ರೂ. ಸಹಾಯಧನ ಕಲ್ಪಿಸಲಾಗಿದೆ ಎಂದು ಸೆಸ್ಕ್ ಇಇ ಅನಿತಾ ಬಾಯಿ ಮಾಹಿತಿ ನೀಡಿದರು. ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿ 99,168 ಅರ್ಹ ಪಡಿತರ ಚೀಟಿದಾರರಲ್ಲಿ 97,570 ಪಡಿತರ ಚೀಟಿದಾರರಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆಯಾಗಿದೆ. 1598 ಮಂದಿಗೆ ನಗದು ವರ್ಗಾವಣೆಗೆ ಬಾಕಿ ಇದ್ದು, ಶೇ.98.39 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಆಹಾರ ಇಲಾಖೆಯ ಜಂಟಿ ನಿರ್ದೇಶಕರಾದ ಕುಮುದಾ ಶರತ್ ಅವರು ಮಾಹಿತಿ ನೀಡಿದರು. ಶಕ್ತಿ ಯೋಜನೆಗೆ ಸಂಬಂಧಿಸಿದಂತೆ ಒಟ್ಟು 71,12,191 ವಯಸ್ಕ ಮಹಿಳಾ ಪ್ರಯಾಣಿಕರು ಮತ್ತು 1,49,740 ಹೆಣ್ಣು ಮಕ್ಕಳು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿ ನಿಯರು ಸಂಸ್ಥೆಯ ವಾಹನದಲ್ಲಿ ಪ್ರಯಾಣಿಸಿ ಯೋಜನೆಯ ಪ್ರಯೋಜನ ಪಡೆದಿದ್ದು, ಸರಾಸರಿ 15,098 ಪ್ರಯಾಣಿಕರು ಒಂದು ದಿನಕ್ಕೆ ಸಂಸ್ಥೆಯ ವಾಹನದಲ್ಲಿ ಪ್ರಯಾಣಿಸಿರುತ್ತಾರೆ. ಸೆಪ್ಟೆಂಬರ್, 24 ರವರೆಗೆ ಒಟ್ಟು ಮೊತ್ತ ರೂ.28,58,64,957 ರಷ್ಟು ಸಂಸ್ಥೆಗೆ ಆದಾಯ ಬಂದಿರುತ್ತದೆ. ಸರಾಸರಿ ಒಂದು ದಿನದ ಆದಾಯ ರೂ. 5,94,314 ಆಗಿದೆ ಎಂದು ಕೆಎಸ್‍ಆರ್‍ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕರಾದ ಮಹಮದ್ ಅಲಿ ಮಾಹಿತಿ ನೀಡಿದರು. ಯುವನಿಧಿ ಯೋಜನೆ ಸಂಬಂಧಿಸಿದಂತೆ ಮಾಹಿತಿ ನೀಡಿದ ರೇಖಾ ಗಣಪತಿ ಅವರು ಜಿಲ್ಲೆಯಲ್ಲಿ 1,189 ಮಂದಿ ಹೆಸರು ನೋಂದಾಯಿಸಿದ್ದು, 1,015 ಮಂದಿಗೆ ಡಿಬಿಟಿ ಮೂಲಕ ಸೌಲಭ್ಯ ಕಲ್ಪಿಸಲಾಗುತ್ತಿದ್ದು, ಶೇ.85 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದರು. ಗ್ಯಾರಂಟಿ ಯೋಜನೆಯ ಪ್ರಮುಖರಾದ ಪ್ರಶಾಂತ್, ಶರಿ ಗಿರೀಶ, ಕೆ.ಸಿ.ಭೀಮಯ್ಯ, ನಾಸೀರ್, ಅಣ್ಣಯ್ಯ, ಕೆ.ಎಂ.ಬಸೀರ್, ಮುಸ್ತಫ, ಧನ್ಯ, ಕೆ.ಜಿ.ಫೀಟರ್, ಕಾಂತರಾಜು, ಮಂದ್ರೀರ ಮೋಹನ್ ದಾಸ್, ಜಾನ್ಸನ್ ಅವರು ಹಲವು ವಿಚಾರಗಳ ಕುರಿತು ಪ್ರಸ್ತಾಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಹೆಗ್ಗಡೆ ಸಮಾಜದ ಕ್ರೀಡಾ ಹಬ್ಬಕ್ಕೆ ಸಂಭ್ರಮದ ತೆರೆ*

ಮೇ 5, 2026

*ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*

ಮೇ 5, 2026

*5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*

ಮೇ 5, 2026

*ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*

ಮೇ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮೇ 6 NEWS DESK : ಪೆರುಂಬಾಡಿಯ ಶಂಸುಲ್ ಉಲಮಾ ಎಜುಕೇಶನಲ್ ಅಕಾಡೆಮಿಯ ಎಸ್ಇಎ ಕಾಲೇಜು ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯಲ್ಲಿ…

*5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*

ಮೇ 5, 2026

*ಕೊಡಗು : ಪತ್ರಿಕಾ ಪ್ರವಾಸ ವಾಹನಕ್ಕೆ ಚಾಲನೆ*

ಮೇ 5, 2026

*ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ : ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭ ಸಾಧ್ಯತೆ : ರಸ್ತೆ ಸೇರಿದಂತೆ ಹಲವು ಕಾಮಗಾರಿ ಪೂರ್ಣಗೊಳಿಸಿ : ಸಚಿವ ಎನ್.ಎಸ್.ಭೋಸರಾಜು*

ಮೇ 5, 2026

*ಮಾದಾಪುರದಲ್ಲಿ ಕೊಡವ ಸಮಾಜ ಭವನ ಲೋಕಾಪ೯ಣೆ : ಪ್ರಾಮಾಣಿಕತೆಯೊಂದಿಗೆ ಸಂಸ್ಕೃತಿ ಸಂರಕ್ಷಣೆಗೆ ಕೊಡವರು ವಿಶ್ವವ್ಯಾಪಿ ಹೆಸರು ವಾಸಿ : ಬಸವರಾಜ ಬೊಮ್ಮಾಯಿ ಶ್ಲಾಘನೆ*

ಮೇ 5, 2026

*ಮಡಿಕೇರಿಯಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮೇ 5, 2026

*ಪೊನ್ನಂಪೇಟೆಯಲ್ಲಿ ಬಿಜೆಪಿ ವಿಜಯೋತ್ಸವ*

ಮೇ 5, 2026

*ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಉದ್ಘಾಟನೆ*

ಮೇ 5, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*

ಮೇ 5, 2026

*ಬಾಳೆಲೆ-ನಲ್ಲೂರು : ಮೇ 5 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.