
ಮಡಿಕೇರಿ ಸೆ.27 NEWS DESK : ಭಾಗಮಂಡಲದ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಮಡಿಕೇರಿ ತಾಲ್ಲೂಕು ಮಟ್ಟದ ಪದವಿ ಪೂರ್ವ ವಿಭಾಗದ ವಾಲಿಬಾಲ್ ಪಂದ್ಯಾವಳಿಯಲ್ಲಿ ಹೊದವಾಡದ ರಾಫೆಲ್ಸ್ ಇಂಟರ್ನ್ಯಾಷನಲ್ ಪಿಯು ಕಾಲೇಜು ಬಾಲಕಿಯರ ತಂಡವು ದ್ವಿತೀಯ ಸ್ಥಾನ ಪಡೆಯುವುದರ ಮೂಲಕ ಸಾಧನೆಗೈದಿದ್ದಾರೆ. ಪ್ರಥಮ ಪಂದ್ಯವನ್ನು ರಾಫೆಲ್ಸ್ ಇಂಟರ್ನ್ಯಾಷನಲ್ ಪಿಯು ಕಾಲೇಜು ತಂಡವು ಚೇರಂಬಾಣೆಯ ಅರುಣ ಪದವಿ ಪೂರ್ವ ಕಾಲೇಜು ತಂಡವನ್ನು 2-0 ನೇರ ಸೆಟ್ ಗಳ ಅಂತರದಿಂದ ಮಣಿಸಿ ಫೈನಲ್ ಪ್ರವೇಶಿಸಿತು. ಫೈನಲ್ ಪಂದ್ಯದಲ್ಲಿ ಸಂಪಾಜೆಯ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡದ ವಿರುದ್ಧ ಸೋಲು ಕಂಡಿತ್ತು. ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ರಾಫೆಲ್ಸ್ ಇಂಟರ್ನ್ಯಾಷನಲ್ ಪಿಯು ಕಾಲೇಜಿನ ಉಪನ್ಯಾಸಕ ಉಸೈನ್,ತರಬೇತುದಾರ ಇಸ್ಮಾಯಿಲ್ ಕಂಡಕರೆ ಇದ್ದರು.










