ಮಡಿಕೇರಿ ಸೆ.27 NEWS DESK : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಗಾಳಿಬೀಡು ಗ್ರಾಮ ಪಂಚಾಯತಿಯಲ್ಲಿ ಆರೋಗ್ಯಕ್ಕೆ ಸಂಬಂಧಿಸಿದಂತೆ ಜಾಗೃತಿ ಶಿಬಿರ ನಡೆಯಿತು. ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಾಂಡ ಸವಿತಾ ಕೀರ್ತನ್ ಮತ್ತು ಆರೋಗ್ಯ ಇಲಾಖೆಯಿಂದ ಸಮುದಾಯ ಆರೋಗ್ಯ ಅಧಿಕಾರಿ ರಮ್ಯಾ ರಕ್ತ ಹೀನತೆ, ಬಿಪಿ, ಶುಗರ್, ಕ್ಷಯ, ಮುಟ್ಟಿನ ಸಮಸ್ಯೆ, ಮಾನಸಿಕ ಆರೋಗ್ಯ, ಬಾಲ್ಯ ವಿವಾಹ, ಅಪೌಷ್ಟಿಕತೆ, ಜಲ ಸಂರಕ್ಷಣೆ, ಆರೋಗ್ಯಕರ ಜೀವನ ಶೈಲಿ, ಸ್ವಚ್ಛತೆ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಗಾಳಿಬೀಡು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಬಿ.ಜಿ.ಉಷಾ, ಉಪಾಧ್ಯಕ್ಷರಾದ ಕೆ.ಎ.ಪೆಮ್ಮಯ್ಯ, ಗ್ರಾಮ ಪಂಚಾಯತಿ ಸದಸ್ಯರಾದ ಪ್ರದೀಪ್, ಯಾಲದಾಳು ರಾಜಶೇಖರ್, ಸರೋಜಾ ಕೆ.ಸಿ,ಪುಷ್ಪಾವತಿ, ಧರ್ಮಾವತಿ, ಗಿರೀಶ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಶಿಕಿರಣ್, ಗಾಳಿಬೀಡು ಗ್ರಾಮ ಪಂಚಾಯಿತಿಗೆ ಸೇರಿದ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಗುಂಪಿನವರು, ಸಮುದಾಯದವರು ಪಾಲ್ಗೊಂಡಿದ್ದರು.