ಮಡಿಕೇರಿ NEWS DESK ಸೆ.27 : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವ ಈ ಬಾರಿ ಸಂಪ್ರದಾಯಿಕವಾಗಿ ನಡೆಯುತ್ತಿದ್ದು, ಮಡಿಕೇರಿ ನಗರ ಅಲಂಕಾರ ಸಮಿತಿ ವತಿಯಿಂದ ನವರಾತ್ರಿ ಅಂಗವಾಗಿ ವಿವಿಧ ಅಲಂಕಾರ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಅಲಂಕಾರ ಸಮಿತಿ ಉಪಾಧ್ಯಕ್ಷ ಜೆ.ರವಿ ಗೌಡ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.3 ರಂದು ಕರಗ ಸಾಗುವ ರಸ್ತೆಯಲ್ಲಿ ರಂಗೋಲಿ ಸ್ಪರ್ಧೆ ಆಯೋಜಿತವಾಗಿದ್ದು, ಚುಕ್ಕಿ, ಪುಡಿ, ಎಳೆ ಮತ್ತು ಪುಷ್ಪ ರಂಗೋಲಿ ವಿಭಾಗಗಳ ಸ್ಪರ್ಧೆಗಳು ಜರುಗಲಿದೆ. ಅ.11 ರಂದು ಆಯುಧ ಪೂಜೆ ಅಂಗವಾಗಿ ನಗರದ ಗಾಂಧಿ ಮೈದಾನದಲ್ಲಿ ವಾಹನ ಅಲಂಕಾರ ಸ್ಪರ್ಧೆ ನಡೆಯಲಿದ್ದು, ಲಾರಿ, ಬಸ್, ಕಾರ್, ಸೈಕಲ್, ಆಟೋ, ಟಾಟಾಏಸ್, ಜೀಪ್, ಪಿಕ್‌ಅಪ್, ಜೆಸಿಬಿ ಹಾಗೂ ಇನ್ನಿತರ ವಾಹನ ಅಲಂಕಾರ ಸ್ಪರ್ಧೆಗಳು ನಡೆಯಲಿದೆ ಎಂದರು. ನವರಾತ್ರಿ ಪ್ರಯುಕ್ತ ಮಡಿಕೇರಿ ನಗರಾಲಂಕಾರ ಸ್ಪರ್ಧೆಯ ಅಂಗವಾಗಿ ನಗರದ ವಿವಿಧ ಕಟ್ಟಡಗಳ ಅಲಂಕಾರ ಸ್ಪರ್ಧೆ ನಡೆಯಲಿದ್ದು, ನವರಾತ್ರಿಯ 9 ದಿನವೂ ಮಡಿಕೇರಿ ನಗರದ ದಶ ದೇವಾಲಯಗಳು, ಸರ್ಕಾರಿ, ಅರೆ ಸರ್ಕಾರಿ ಕಚೇರಿಗಳು, ವಿವಿಧ ಕಟ್ಟಡಗಳು, ಚಿನ್ನದ ಅಂಗಡಿ, ಬಟ್ಟೆ ಅಂಗಡಿ, ಬೇಕರಿ, ಹೋಟೆಲ್, ಬ್ಯಾಂಕ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸ್ಪರ್ಧೆ ಜರುಗಲಿದೆ.
ಸಾಂಪ್ರದಾಯಿಕವಾಗಿ 9 ದಿನವೂ ಮಡಿಕೇರಿ ನಗರದ ಎಲ್ಲಾ ಮಳಿಗೆಗಳು ಹಾಗೂ ಕಟ್ಟಡಗು ದೀಪಾಲಂಕಾರ ಮಾಡಬೇಕಾಗಿ ರವಿಗೌಡ ಮನವಿ ಮಾಡಿದರು. ಕಳೆದ ಬಾರಿಯಂತೆ ಈ ಬಾರಿಯೂ ನವರಾತ್ರಿಯ ಪ್ರಯುಕ್ತ ಮನೆಗಳಲ್ಲಿ ವಿವಿಧ ಬಗೆಯ ಗೊಂಬೆಗಳ ಜೋಡಣೆಯ ಅಲಂಕಾರ ಪ್ರದರ್ಶನ ಮಾಡುವವರಿಗೂ ಬಹುಮಾನ ನೀಡಲು ನಿರ್ಧರಿಸಲಗಿದೆ ಎಂದ ಅವರು, ಸ್ಪರ್ಧೆಯಲ್ಲಿ ಭಾಗವಹಿಸುವ ಆಸಕ್ತರು ರವಿಗೌಡ 9611101070, ಪುನೀತ್ 70226 85868 ಸಂಪರ್ಕಿಸಬಹುದಾಗಿದೆ ಎಂದು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಅಲಂಕಾರ ಸಮಿತಿಯ ಅಧ್ಯಕ್ಷ ಎಂ.ಎ.ಮುನೀರ್ ಮಾಚರ್, ಖಜಾಂಚಿ ರಫೀಕ್ ದಾದ, ಸಹ ಕಾರ್ಯದರ್ಶಿಗಳಾದ ಕೋಚನ ಎಂ.ಚೇತನ್ ಹಾಗೂ ಜಿ.ಎನ್.ಪುನೀತ್ ಉಪಸ್ಥಿತರಿದ್ದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*