ನಾಪೋಕ್ಲು ಸೆ.28 NEWS DESK : ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿಯ 2024-25ನೇ ಸಾಲಿನ ಗ್ರಾಮ ಸಭೆ ನಡೆಯಿತು. ಕಕ್ಕಬೆಯ ವಿಎಸ್‍ಎಸ್ ಎನ್ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೊಂಗೇರ ಶಿಲ್ಪಾ ಲೋಕೇಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕುಡಿಯುವ ನೀರಿನ ಪೂರೈಕೆ ಸಮರ್ಪಕವಾಗಿ ಆಗುತ್ತಿಲ್ಲ, ರಸ್ತೆಗಳು ಗುಂಡಿ ಬಿದ್ದು ಸಂಚಾರ ಯಾತನಾಮಯವಾಗಿದೆ. ಇಲಾಖಾ ಅಧಿಕಾರಿಗಳು ಗ್ರಾಮ ಸಭೆಗೆ ಹಾಜರಾಗಿಲ್ಲ. ಹೀಗೆ ವಿವಿಧ ವಿಷಯಗಳ ಕುರಿತು ಗ್ರಾಮಸ್ಥರ ಅಸಮಾಧಾನ ವ್ಯಕ್ತಪಡಿಸಿದರು. ಸಭೆಯಲ್ಲಿ ಗ್ರಾ.ಪಂ ವ್ಯಾಪ್ತಿಯಲ್ಲಿ ಜೆಜೆಮ್ ಕಾಮಗಾರಿಯು ಪ್ರಾರಂಭಿಸಿ ಮೂರು ವರ್ಷ ಆದರು ಪೂರ್ಣವಾಗದ ಬಗ್ಗೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು. ರಸ್ತೆಗಳು ತುಂಬಾ ಹದಗೆಟ್ಟಿದ್ದು, ರಸ್ತೆಗಳನ್ನು ಸರಿಪಡಿಸಲು ಮತ್ತು ರಸ್ತೆಯ ಬದಿಯ ಚರಂಡಿಯನ್ನು ಸರಿಪಡಿಸಬೇಕೆಂದು ಆಗ್ರಹಿಸಿದರು. ನಾಲಾಡಿ ಗ್ರಾಮದಲ್ಲಿ ಅವೈಜ್ಞಾನಿಕ ಕಟ್ಟಡವನ್ನು ಕಟ್ಟುತ್ತಿರುವ ಬಗ್ಗೆ ವಿರೋಧ ವ್ಯಕ್ತಪಡಿಸಿದರು. ಮನೆಗಳನ್ನು ನಿರ್ಮಿಸಿಕೊಂಡಿರುವ ಹಾಗೂ ತೋಟಗಳನ್ನು ಮಾಡಿರುವಂತಹ ಜಾಗವನ್ನು ಯಾವುದೇ ಕಾರಣಕ್ಕೂ ಮೀಸಲು ಅರಣ್ಯಕ್ಕೆ ಬಿಟ್ಟು ಕೊಡುವುದಿಲ್ಲ ಎಂದು ಗ್ರಾಮಸ್ಥರು ಆಗ್ರಹಿಸಿದರು. ಸಭೆಗೆ ಇಲಾಖಾ ಅಧಿಕಾರಿಗಳು ಹಾಜರಾಗದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ನೋಡಲ್ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಾಲಕೃಷ್ಣ ರೈ ಹಾಜರಿದ್ದರು.
ವರದಿ : ದುಗ್ಗಳ ಸದಾನಂದ.