ನಾಪೋಕ್ಲು ಸೆ.28 NEWS DESK : ಕಾರುಗುಂದ ಗೌಡ ಸಮಾಜದಲ್ಲಿ 1855ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಮಡಿಕೇರಿ ತಾಲೂಕು ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಬೆಟ್ಟಗೇರಿ ವಲಯದ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಡಿಕೇರಿ ತಾಲೂಕು, ಬೆಳ್ತಂಗಡಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್, ಜಿಲ್ಲಾ ಜನಜಾಗೃತಿ ವೇದಿಕೆ, ಶ್ರೀಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಉಜಿರೆ ಸಂಶೋಧನಾ ಕೇಂದ್ರ ಲಾಯಿಲ, ಬೆಂಗಳೂರು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಮಾರ್ಗದರ್ಶನದೊಂದಿಗೆ ಚೇರಂಬಾಣೆ ಗೌಡ ಸಮಾಜ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬೆಟ್ಟಗೇರಿ ವಲಯ, ಬೆಟ್ಟಗೇರಿ ಗ್ರಾ.ಪಂ, ಬೇಂಗೂರು – ಚೇರಂಬಾಣೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಭಾಗಮಂಡಲ ಆರಕ್ಷಕ ಇಲಾಖೆ, ಮಡಿಕೇರಿ ತಾಲೂಕು ನವಜೀವನ ಸಮಿತಿ, ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ, ಸ್ಥಳೀಯ ಸಂಘ ಸಂಸ್ಥೆಗಳು ಮತ್ತು ದಾನಿಗಳ ಸಹಕಾರದೊಂದಿಗೆ ಎಂಟು ದಿನಗಳ ಕಾಲ 1855ನೇ ಮದ್ಯವರ್ಜನ ಶಿಬಿರ ನಡೆಯಿತು. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಡಾ.ರಾಣಿ ಮಾಚಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಬೆಳ್ತಂಗಡಿ ಮಾತನಾಡಿ, ಕೌಟುಂಬಿಕ ಜೀವನದ ಮಹತ್ವವನ್ನು ಬೋಧಿಸಿ ತಮ್ಮ ಅನಿಸಿಕೆ ವ್ಯಕ್ತಪಡಿಸಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. 1855ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬೆಳ್ಯನ ಚಂದ್ರಪ್ರಕಾಶ್ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ದಾನಿಗಳನ್ನು, ಸಂಘ ಸಂಸ್ಥೆಗಳನ್ನು ಮತ್ತು ನಿಸ್ವಾರ್ಥ ಸೇವೆ ಸಲ್ಲಿಸಿದವರನ್ನು ಅಭಿನಂದಿಸಿ, ಸಮಿತಿ ಸದಸ್ಯರುಗಳಿಗೆ ಕಾಣಿಕೆ ಹುಂಡಿಯನ್ನು ವಿತರಿಸಿದರು. ಭಾರತ ಸರ್ಕಾರ ಕಾಫಿ ಮಂಡಳಿ ನಿರ್ದೇಶಕ, ಬೆಟ್ಟಗೇರಿ ವಿ.ಎಸ್.ಎಸ್.ಎನ್ ಅಧ್ಯಕ್ಷ ತಳೂರು ಕಿಶೋರ್ ಕುಮಾರ್ ಮಾತನಾಡಿ, ಎಂಟು ದಿನಗಳ ಕಾಲ ಚಿಕಿತ್ಸೆ ಪಡೆದ ಶಿಬಿರಾರ್ಥಿಗಳು ಪಾನಮುಕ್ತ ತಮ್ಮಿಂದ ಸಧೃಡ ಸಮಾಜ ನಿರ್ಮಾಣವಾಗಲಿ ಎಂದರು. ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆ ನಿಕಟಪೂರ್ವ ಅಧ್ಯಕ್ಷ ಅರುಣ್ ಬಾನಂಗಡ ಮಾತನಾಡಿ, ಮದ್ಯವರ್ಜನ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕರೆ ನೀಡಿಶುಭ ಹಾರೈಸಿದರು. ಹೊಸೂರು ಜೆ.ಸತೀಶ್ ಕುಮಾರ್ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಮಾಡುತ್ತಿರುವ ವಿನೂತನ ಕಾರ್ಯಕ್ರಮವೇ ಮದ್ಯವರ್ಜನ ಶಿಬಿರ. ಸಮಾಜದಲ್ಲಿ ಇದುವರೆಗೂ ಯಾರು ಮಾಡದಿರುವ ವಿಶೇಷವಾದ ಕಾರ್ಯಕ್ರಮವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವಿರೇಂದ್ರ ಹೆಗ್ಗಡೆ ಎಂದರು. ಸಂಸ್ಥೆಯ ಮುಖೇನ ಸಮುದಾಯದ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ, ಶೈಕ್ಷಣಿಕ ಕಾರ್ಯಕ್ರಮ ಧಾರ್ಮಿಕ ಕಾರ್ಯಕ್ರಮ ಮತ್ತು ಜನತೆಯಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವ ವಿಶಿಷ್ಟ ಮತ್ತು ವಿಭಿನ್ನ ಕಾರ್ಯಕ್ರಮಗಳೆಲ್ಲವು ಶ್ಲಾಘನೀಯ ಎಂದು ಸಂತಸ ವ್ಯಕ್ತಪಡಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಲೀಲಾವತಿ ಮಾತನಾಡಿ, ಮದ್ಯವರ್ಜನ ಶಿಬಿರ ಇದೊಂದು ಪವಿತ್ರ ಕಾರ್ಯಕ್ರಮ. ಆದ್ದರಿಂದ ಸಾರ್ವಜನಿಕರ ತನು-ಮನ-ಧನ ಸಹಕಾರದೊಂದಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಶಿಬಿರಾಧಿಕಾರಿ ನಂದಕುಮಾರ್ ಪಟ್ಟಡ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಆರೋಗ್ಯ ಸಹಾಯಕಿ ನೇತ್ರಾವತಿ ಎಂಟು ದಿನದ ಮದ್ಯವರ್ಜನ ಶಿಬಿರವನ್ನು ನಿರ್ವಹಿಸಿದರು.
ಕಾರ್ಯಕ್ರಮದಲ್ಲಿ ಶಿಬಿರ ವ್ಯವಸ್ಥಾಪನಾ ಸಮಿತಿ ಗೌರವಾಧ್ಯಕ್ಷ ಟಿ.ಎಂ ಅಯ್ಯಪ್ಪ, ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷ ಧನಂಜಯ್ ಅಗೋಳಿಕಜೆ, ಶಿಬಿರ ವ್ಯವಸ್ಥಾಪನಾ ಸಮಿತಿ, ಕೋಶಾಧಿಕಾರಿ ಮಿಲನ ಮುತ್ತಣ್ಣ, ಕಾರುಗುಂದ ಕಾಫಿ ಬೆಳೆಗಾರ ಕೊಪ್ಪಡ ಪಳಂಗಪ್ಪ, ಚೇರಂಬಾಣೆ ಗೌಡ ಸಮಾಜದ ನಿರ್ದೇಶಕರುಗಳಾದ ಕೊಡಗನ ತೀರ್ಥಪ್ರಸಾದ್, ನೈಯ್ಯಣಿರ ಹೇಮಲತ, ಎಡಿಕೇರಿ ಪ್ರವೀಣ, ಮುಕ್ಕಾಟಿ ನಾಣಯ್ಯ, ಕಾರುಗುಂದ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷ, ನಾಪಂಡ ರ್ಯಾಲಿ ಮಾದಯ್ಯ, ಕುಂದಚೇರಿ ಗ್ರಾ.ಪಂ ಅಧ್ಯಕ್ಷ ಪೊಡನೊಳನ ದಿನೇಶ್, ಮಡಿಕೇರಿ ನಗರ ಸಭೆ ಮಾಜಿ ಅಧ್ಯಕ್ಷ ಪಟ್ಟಮಾಡ ಡಿ.ಪೆÇನ್ನಪ್ಪ, ಬೆಟ್ಟಗೇರಿ, ಗ್ರಾ.ಪಂ ಸದಸ್ಯ ಬಾಡನ ಲಿಖಿತ, ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜು ಅಧ್ಯಕ್ಷ ಪೊಡನೊಳಂಡ ದಿನೇಶ್, ಶಿಬಿರದ ವ್ಯವಸ್ಥಾಪನಾ ಸಮಿತಿ ಉಪಾಧ್ಯಕ್ಷ ಸುಕುಮಾರ್, ಸಮಿತಿ ಉಪಾಧ್ಯಕ್ಷ ವಸಂತ, ಕಾಳೇರಮ್ಮನ ಪೂವಯ್ಯ, ಕಾಳೇರಮ್ಮನ ಅಯ್ಯಣ್ಣ, ಪಟ್ಟಡ ಶರತ್ ಕುಮಾರ್, ಉಮಾದೇವಿ, ಹೊಸೂರು ಕೇಶವ, ಪಟ್ಟಡ ಸುಗುಣ ಕುಮಾರ್ ,ಬೋಪಯ್ಯ ಪುರುಷೋತ್ತಮ್ ಎನ್.ನಿತೇಶ್, ಮೀನಾಕ್ಷಿ, ಮೇಲ್ವಿಚಾರಕರು, ಸಿಬ್ಬಂದಿಗಳು, ಸೇವಾಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು, ಪ್ರಗತಿಬಂಧು ಸ್ವ-ಸಹಾಯ ಸಂಘದ ಸದಸ್ಯರುಗಳು, ನವಜೀವನ ಸಮಿತಿ ಸದಸ್ಯರುಗಳು ಮತ್ತು ಸಾರ್ವಜನಿಕರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು. ಕಾರ್ಯಕ್ರಮವದಲ್ಲಿ ವರುಣಿಕ ಪ್ರಾರ್ಥಿಸಿ, ಧನಂಜಯ್ ಅಗೋಳಿಕಜೆ ಸ್ವಾಗತಿಸಿದರು, ಆಕಾಶವಾಣಿ ನಿರೂಪಕಿ ಹಾಗೂ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಬಾಲೆಯಡ ದಿವ್ಯ ಮಂದಪ್ಪ ಕಾರ್ಯಕ್ರಮ ನಿರೂಪಿಸಿ, ಬೆಟ್ಟಗೇರಿ ವಲಯ ಮೇಲ್ವಿಚಾರಕಿ ಬಿ.ಹೆಚ್.ವಿದ್ಯಾ ವಂದಿಸಿದರು.
ವರದಿ : ದುಗ್ಗಳ ಸದಾನಂದ.