Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕರ್ನಾಟಕ ಅಂಡರ್-17 ಫುಟ್ಬಾಲ್ ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳು*
  • *ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 
  • *ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*
  • *ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣಕ್ಕೆ ಹೋಮ-ಹವನ : ದಸಂಸ ಖಂಡನೆ*
  • *ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಕಾಮಗಾರಿ ವೀಕ್ಷಣೆ*
  • *ವಿರಾಜಪೇಟೆಯಲ್ಲಿ ವಿಶ್ವಛಾಯಾಗ್ರಹಣ ದಿನಾಚರಣೆ : ಮನಸ್ಸು ಕೇಂದ್ರೀಕರಿಸಿ ಉತ್ತಮ ಛಾಯಾಚಿತ್ರ ತೆಗೆಯಿರಿ : ಡಾ.ಎಸ್.ವಿ.ನರಸಿಂಹನ್ ಕರೆ*
  • *ಆ.21 ರಂದು ರೋಟರಿ ಮಿಸ್ಟಿ ಹಿಲ್ಸ್ ನಿಂದ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮ*
  • *ನಾಗರಪಂಚಮಿ ಬದಲು ಬಸವ ಪಂಚಮಿ ಆಚರಿಸಿದ ಮಾನವ ಬಂಧುತ್ವ ವೇದಿಕೆ*
  • *ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
  • *ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಆದಿಕವಿ ಹರದಾಸ ಅಪ್ಪನೆರವಂಡ ಅಪ್ಪಚ್ಚಂಡ ಕವಿ ಅವರ 157 ನೇ ಜನ್ಮದಿನ : ಚೇರಂಬಾಣೆಯಲ್ಲಿ ‘ಕೊಡವ ಸಾಹಿತ್ಯ ನಾಳ್’ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಆದಿಕವಿ ಹರದಾಸ ಅಪ್ಪನೆರವಂಡ ಅಪ್ಪಚ್ಚಂಡ ಕವಿ ಅವರ 157 ನೇ ಜನ್ಮದಿನ : ಚೇರಂಬಾಣೆಯಲ್ಲಿ ‘ಕೊಡವ ಸಾಹಿತ್ಯ ನಾಳ್’ ಕಾರ್ಯಕ್ರಮ*

ಸೆಪ್ಟೆಂಬರ್ 28, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.28 NEWS DESK : ಕೊಡವ ಭಾಷೆ, ಸಂಸ್ಕೃತಿ, ಸಾಹಿತ್ಯ, ಕಲೆ ಬೆಳವಣಿಗೆಯಲ್ಲಿ ಕೊಡಗಿನ ಆದಿಕವಿ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ಅವರ ಶ್ರಮ ಮಹತ್ತರವಾಗಿದೆ ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಚೇರಂಬಾಣೆಯ ಬೇಂಗ್ ನಾಡು ಕೊಡವ ಸಮಾಜ ಸಹಕಾರದಲ್ಲಿ ಕೊಡಗಿನ ಆದಿಕವಿ ಹರದಾಸ ಅಪ್ಪನೆರವಂಡ ಅಪ್ಪಚ್ಚಂಡ ಕವಿ ಅವರ 157 ನೇ ಜನ್ಮದಿನದ ಪ್ರಯುಕ್ತ ಚೇರಂಬಾಣೆಯಲ್ಲಿ ಶನಿವಾರ ನಡೆದ ‘ಕೊಡವ ಸಾಹಿತ್ಯ ನಾಳ್’ ಕಾರ್ಯಕ್ರಮದಲ್ಲಿ ಅಪ್ಪಚ್ಚ ಕವಿಯ ಭಾವಚಿತ್ರಕ್ಕೆ ಪುಷ್ಪಾರ್ಚಣೆ ನೆರವೇರಿಸಿ ಅವರು ಮಾತನಾಡಿದರು. ಕೊಡವ ಸಾಹಿತ್ಯ ಬೆಳವಣಿಗೆಯಲ್ಲಿ ಇಂದಿನ ಮಕ್ಕಳು ಮನಸ್ಸು ಮಾಡಬೇಕಿದೆ. ಅಪ್ಪಚ್ಚ ಕವಿ ಅವರ ಆಶೋತ್ತರಗಳನ್ನು ಉಳಿಸಿ ಬೆಳೆಸುವಲ್ಲಿ ಕೊಡವ ಭಾಷಿಕರೆಲ್ಲರೂ ಒಂದುಗೂಡಬೇಕಿದೆ ಎಂದು ಕರೆ ನೀಡಿದರು. ಕೊಡವ ಭಾಷಿಕರೆಲ್ಲರೂ ಒಟ್ಟುಗೂಡಿದಾಗ ಕೊಡವ ಸಂಸ್ಕೃತಿ, ಆಚಾರ, ವಿಚಾರಗಳು , ಸಾಹಿತ್ಯ ಉಳಿಸಿ ಬೆಳೆಸಲು ಸಾಧ್ಯ, ಆ ನಿಟ್ಟಿನಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಒಳ್ಳೆಯ ಕೆಲಸ ಮಾಡುತ್ತಿದೆ ಎಂದು ಎ.ಎಸ್.ಪೊನ್ನಣ್ಣ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಕೊಡವ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಉಳಿದರೆ ಮಾತ್ರ ಕೊಡವ ಭಾಷಿಕ ಜನಾಂಗ ಉಳಿಯಲು ಸಾಧ್ಯ ಎಂಬುದನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ ಅವರು ಮಾತನಾಡಿ ಕೊಡವ ಸಂಸ್ಕೃತಿ, ಸಾಹಿತ್ಯ, ಕಲೆಗಳು ಇಡೀ ದೇಶದಲ್ಲಿಯೇ ಮಾದರಿಯಾಗಿದೆ ಎಂದು ಶ್ಲಾಘಿಸಿದರು. ಕೊಡಗಿನ ಪರಿಸರಕ್ಕೆ ಪೂರಕವಾಗಿರುವಂತೆ ಕೊಡವ ಸಂಸ್ಕೃತಿ ಮತ್ತು ಕಲೆಯನ್ನು ಎಲ್ಲೆಡೆಯೂ ಪಸರಿಸುವಂತಾಗಬೇಕು ಎಂದು ಪ್ರತಿಪಾದಿಸಿದರು. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅವರು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಕೊಡವ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ ಬೆಳವಣಿಗೆಗೆ ಜಿಲ್ಲೆಯ ಎಲ್ಲೆಡೆ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ವಿವರಿಸಿದರು. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾದ ಬಾಚರಣಿಯಂಡ ಪಿ.ಅಪ್ಪಣ್ಣ ಹಾಗೂ ಅಕಾಡೆಮಿ ಮಾಜಿ ಸದಸ್ಯರಾದ ಚೀರಮ್ಮನ ವಾಣಿ ಚಂಗುಮಯ್ಯ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಬೆಂಗೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಪಟ್ಟಮಡ ಮಿಲನ್ ಮುತ್ತಣ್ಣ, ಚೇರಂಬಾಣೆ ಬೆಂಗ್ ನಾಡು ಕೊಡವ ಸಮಾಜದ ಅಧ್ಯಕ್ಷರಾದ ಬಾಚರಣಿಯಂಡ ದಿನೇಶ್ ಗಣಪತಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಸದಸ್ಯರಾದ ನಾಪಂಡ ಗಣೇಶ್, ಪಾನಿಕುಟ್ಟಿರ ಕೆ.ಕುಟ್ಟಪ್ಪ, ಪುತ್ತರೀರ ಪಪ್ಪು ತಿಮ್ಮಯ್ಯ, ಕಂಬೆಯಂಡ ಡೀನಾ ಬೋಜಣ್ಣ, ಕೊಂಡಿಜಮ್ಮನ ಎಂ.ಬಾಲಕೃಷ್ಣ, ಪೊನ್ನಿರ ಯು ಗಗನ್, ಕುಡಿಯರ ಎಂ.ಕಾವೇರಪ್ಪ, ನಾಯಂದಿರ ಆರ್.ಶಿವಾಜಿ, ಚೆಪ್ಪುಡಿರ ಎಸ್.ಉತ್ತಪ್ಪ, ನಾಯಕಂಡ ಬೇಬಿ ಚಿಣ್ಣಪ್ಪ, ಚೊಟ್ಟೆಯಂಡ ಸಂಜು ಕಾವೇರಪ್ಪ, ರಿಜಿಸ್ಟ್ರಾರ್ ಅಜ್ಜಿಕುಟ್ಟಿರ ಸಿ.ಗಿರೀಶ್ ಇತರರು ಇದ್ದರು. ವ್ಯಾಲಿಡ್ಯೂ ತಂಡದವರಿಂದ ಬೊಳಕಾಟ್, ಕತ್ತಿಯಾಟ್, ಚೌರಿಯಾಟ್ ಹಾಗೂ ರಾಜರಾಜೇಶ್ವರಿ ಶಾಲಾ ಮಕ್ಕಳಿಂದ ಕೋಲಾಟ್ ಪ್ರದರ್ಶನ ನಡೆಯಿತು. ತೇಲಪಂಡ ಲಕ್ಷ್ಮಿ ಮತ್ತು ಕುಚ್ಚಟಿರ ಕುಮಾರಿ ಅವರು ಪ್ರಾರ್ಥಿಸಿದರು, ನಳಿನಿ ಮತ್ತು ಪ್ರಮೀಳಾ ಅವರು ನಿರೂಪಿಸಿದರು. ಸಭಾ ಕಾರ್ಯಕ್ರಮಕ್ಕೂ ಮೊದಲು ಚೇರಂಬಾಣೆ ಪಟ್ಟಣದ ಮುಖ್ಯರಸ್ತೆಯಿಂದ ಕೊಡವ ಸಮಾಜದ ಸಭಾಂಗಣದ ವರೆಗೆ ಕೊಡವ ಸಾಂಸ್ಕೃತಿಕ ಕಲರವ ಕಂಡುಬಂದಿತು. ಸಾಂಪ್ರದಾಯಿಕ ಧರಿಸಿನಲ್ಲಿ ಮೆರವಣಿಗೆಯಲ್ಲಿ ಬೆಂಗ್ ನಾಡಿನ ಕೊಡವ ಭಾಷಿಕ ಜನರು ಪಾಲ್ಗೊಂಡಿದ್ದು ವಿಶೇಷವಾಗಿತ್ತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕರ್ನಾಟಕ ಅಂಡರ್-17 ಫುಟ್ಬಾಲ್ ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 

ಆಗಷ್ಟ್ 19, 2026

*ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*

ಆಗಷ್ಟ್ 19, 2026

*ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 

ಆಗಷ್ಟ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, ಆ.16 NEWS DESK : ಕುಶಾಲನಗರ ತಾಲ್ಲೂಕಿನ ಶಿರಂಗಾಲ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಬೆಂಗಳೂರಿನ…

*ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*

ಆಗಷ್ಟ್ 19, 2026

*ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣಕ್ಕೆ ಹೋಮ-ಹವನ : ದಸಂಸ ಖಂಡನೆ*

ಆಗಷ್ಟ್ 19, 2026

*ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಕಾಮಗಾರಿ ವೀಕ್ಷಣೆ*

ಆಗಷ್ಟ್ 19, 2026

*ವಿರಾಜಪೇಟೆಯಲ್ಲಿ ವಿಶ್ವಛಾಯಾಗ್ರಹಣ ದಿನಾಚರಣೆ : ಮನಸ್ಸು ಕೇಂದ್ರೀಕರಿಸಿ ಉತ್ತಮ ಛಾಯಾಚಿತ್ರ ತೆಗೆಯಿರಿ : ಡಾ.ಎಸ್.ವಿ.ನರಸಿಂಹನ್ ಕರೆ*

ಆಗಷ್ಟ್ 19, 2026

*ಆ.21 ರಂದು ರೋಟರಿ ಮಿಸ್ಟಿ ಹಿಲ್ಸ್ ನಿಂದ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮ*

ಆಗಷ್ಟ್ 19, 2026

*ನಾಗರಪಂಚಮಿ ಬದಲು ಬಸವ ಪಂಚಮಿ ಆಚರಿಸಿದ ಮಾನವ ಬಂಧುತ್ವ ವೇದಿಕೆ*

ಆಗಷ್ಟ್ 19, 2026

*ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*

ಆಗಷ್ಟ್ 19, 2026

*ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.