ಮಡಿಕೇರಿ NEWS DESK ಸೆ.30 : ಕೊಡಗು ಜಿಲ್ಲಾ ಅಹಿಂದ ಒಕ್ಕೂಟದ ಸ್ಥಾಪಕಾಧ್ಯಕ್ಷ ಟಿ.ಪಿ.ರಮೇಶ್ ಅವರಿಗೆ ಮೈಸೂರಿನ ಅನ್ವೇಷಣಾ ಸೇವಾ ಟ್ರಸ್ಟ್ ವತಿಯಿಂದ ‘ಧ್ವನಿ ಕೊಟ್ಟ ಧಣಿ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮೈಸೂರಿನ ದಿ ಇನ್ಸ್ ಟಿಟ್ಯೂಷನ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾಜಿ ಗೃಹ ಸಚಿವ ಪಿ.ಜಿ.ಆರ್.ಸಿಂಧ್ಯಾ, ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಅನ್ವೇಷಣಾ ಸೇವಾ ಟ್ರಸ್ಟ್ ನ ಅಧ್ಯಕ್ಷ ಡಾ.ಎಂ.ಜಿ.ಆರ್.ಅರಸ್, ಅರಸು ಜಾಗೃತಿ ಅಕಾಡೆಮಿ ಚಾರಿಟೇಬಲ್ ಟ್ರಸ್ಟ್ ನ ಉಪಾಧ್ಯಕ್ಷ ಹೆಚ್.ಎ.ವೆಂಕಟೇಶ್ ಮತ್ತಿತರ ಪ್ರಮುಖರ ಸಮ್ಮುಖದಲ್ಲಿ ಕುವೆಂಪು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ.ಕೆ.ಚಿದಾನಂದಗೌಡ ಅವರು ಟಿ.ಪಿ.ರಮೇಶ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯು, ಅಹಿಂದ ಒಕ್ಕೂಟದ ಜಿಲ್ಲಾಧ್ಯಕ್ಷ ಟಿ.ಎಂ.ಮುದ್ದಯ್ಯ, ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಕೋಶಾಧಿಕಾರಿ ಬಿ.ಎನ್.ವಾಸುರೈ, ಅಹಿಂದ ಒಕ್ಕೂಟದ ಕೆ.ಎಂ.ರಾಜನ್, ವಿಜಯ ಕರ್ನಾಟಕ ಪತ್ರಿಕೆಯ ಮೈಸೂರು ಸ್ಥಾನಿಕ ಸಂಪಾದಕ ರಮೇಶ್ ಉತ್ತಪ್ಪ, ಹಿರಿಯ ಪತ್ರಕರ್ತರಾದ ಬಿ.ಸಿ.ದಿನೇಶ್, ಬಿ.ಆರ್.ಮಂಜುನಾಥ್, ಕೆಎಸ್‌ಎಸ್‌ಐಡಿಸಿ ನಿವೃತ್ತ ಅಧಿಕಾರಿ ರಂಗನಾಥ್ ಮತ್ತಿತರರು ಉಪಸ್ಥಿತರಿದ್ದು ಟಿ.ಪಿ.ರಮೇಶ್ ಅವರಿಗೆ ಶುಭ ಕೋರಿದರು. ಇದೇ ಸಂದರ್ಭ ಮೈಸೂರಿನ ಕಾವೇರಿ ಬಳಗದ ವತಿಯಿಂದ ಎನ್.ಕೆ.ಕಾವೇರಮ್ಮ ಅವರು ರಮೇಶ್ ಅವರನ್ನು ಸನ್ಮಾನಿಸಿ ಅಭಿನಂದಿಸಿದರು.