Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಹೆಗ್ಗಡೆ ಸಮಾಜದ ಕ್ರೀಡಾ ಹಬ್ಬಕ್ಕೆ ಸಂಭ್ರಮದ ತೆರೆ*
  • *ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*
  • *5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*
  • *ಕೊಡಗು : ಪತ್ರಿಕಾ ಪ್ರವಾಸ ವಾಹನಕ್ಕೆ ಚಾಲನೆ*
  • *ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ : ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭ ಸಾಧ್ಯತೆ : ರಸ್ತೆ ಸೇರಿದಂತೆ ಹಲವು ಕಾಮಗಾರಿ ಪೂರ್ಣಗೊಳಿಸಿ : ಸಚಿವ ಎನ್.ಎಸ್.ಭೋಸರಾಜು*
  • *ಮಾದಾಪುರದಲ್ಲಿ ಕೊಡವ ಸಮಾಜ ಭವನ ಲೋಕಾಪ೯ಣೆ : ಪ್ರಾಮಾಣಿಕತೆಯೊಂದಿಗೆ ಸಂಸ್ಕೃತಿ ಸಂರಕ್ಷಣೆಗೆ ಕೊಡವರು ವಿಶ್ವವ್ಯಾಪಿ ಹೆಸರು ವಾಸಿ : ಬಸವರಾಜ ಬೊಮ್ಮಾಯಿ ಶ್ಲಾಘನೆ*
  • *ಮಡಿಕೇರಿಯಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಪೊನ್ನಂಪೇಟೆಯಲ್ಲಿ ಬಿಜೆಪಿ ವಿಜಯೋತ್ಸವ*
  • *ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಉದ್ಘಾಟನೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಕೊಡಗು ಪ್ರವಾಸೋದ್ಯಮ ಮಾರ್ಗದರ್ಶಿಯ ವೆಬ್‍ಸೈಟ್ ಶೀಘ್ರ ಬಿಡುಗಡೆ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಕೊಡಗು ಪ್ರವಾಸೋದ್ಯಮ ಮಾರ್ಗದರ್ಶಿಯ ವೆಬ್‍ಸೈಟ್ ಶೀಘ್ರ ಬಿಡುಗಡೆ : ಜಿಲ್ಲಾಧಿಕಾರಿ ವೆಂಕಟ್ ರಾಜಾ*

ಸೆಪ್ಟೆಂಬರ್ 30, 20244 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.30 NEWS DESK : ಕೊಡಗು ಜಿಲ್ಲೆ ಪ್ರವಾಸೋದ್ಯಮ ಅಭಿವೃದ್ಧಿ ಸಂಬಂಧಿಸಿದಂತೆ ಪ್ರಸಿದ್ಧ ದೇವಾಲಯಗಳು, ಪವಿತ್ರ ಸ್ಥಳಗಳು, ಹೋಟೆಲ್, ಹೋಂಸ್ಟೇ, ರೆಸಾರ್ಟ್, ಜಲಾಶಯ, ಜಲಪಾತ, ಪ್ರೇಕ್ಷಣೀಯ ಸ್ಥಳಗಳು ಹೀಗೆ ವಿವಿಧ ಪ್ರವಾಸಿ ಅಂಶಗಳನ್ನು ಒಳಗೊಂಡ ವೆಬ್‍ಸೈಟ್‍ನ್ನು ಶೀಘ್ರ ಬಿಡುಗಡೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಪ್ರವಾಸೋದ್ಯಮ ಪಾಲುದಾರರ ಸಹಕಾರದಲ್ಲಿ ನಗರದ ಹೊರವಲಯದ ಆಕ್ಸಿರಿಚ್ ಹೋಟೆಲ್‍ನಲ್ಲಿ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಜಿಲ್ಲೆಯ ಪವಿತ್ರ ಸ್ಥಳವಾದ ತಲಕಾವೇರಿ, ಭಾಗಮಂಡಲ ಹಾಗೂ ಪ್ರವಾಸಿ ಸ್ಥಳವಾದ ಜಲಪಾತಗಳು, ಪ್ರೇಕ್ಷಣೀಯ ಸ್ಥಳಗಳು, ಹೋಟೆಲ್‍ಗಳು ರೆಸಾರ್ಟ್‍ಗಳು, ಸೇರಿದಂತೆ ಹಲವು ಸ್ಥಳಗಳ ಬಗ್ಗೆ ಮಾಹಿತಿ ನೀಡುವುದು ಅತ್ಯಗತ್ಯವಾಗಿದೆ. ಆ ನಿಟ್ಟಿನಲ್ಲಿ ಡಿಸೆಂಬರ್‍ನೊಳಗೆ ವೆಬ್‍ಸೈಟ್‍ಗೆ ಚಾಲನೆ ನೀಡಲಾಗುವುದು ಎಂದು ಹೇಳಿದರು. ಕೊಡಗು ಜಿಲ್ಲೆಗೆ ಹೊರ ಜಿಲ್ಲೆ ಹಾಗೂ ರಾಜ್ಯದಿಂದ ಪ್ರವಾಸಿಗರು ಆಗಮಿಸುತ್ತಾರೆ. ಅವರಿಗೆ ಸರಿಯಾದ ಮಾಹಿತಿ ನೀಡಿದಲ್ಲಿ ಅವರು ಮತ್ತೊಬ್ಬರಿಗೆ ತಿಳಿಸುತ್ತಾರೆ. ಈ ಬಗ್ಗೆ ಅಂತರ್ಜಾಲ ಮೂಲಕ ಮಾಹಿತಿ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ವಿವರಿಸಿದರು. ಕೊಡಗು ಜಿಲ್ಲೆಯ ಪ್ರವಾಸಿ ಸ್ಥಳಗಳಲ್ಲಿ ಸ್ವಚ್ಛತೆ ಹಾಗೂ ಪರಿಸರ ಶುಚಿತ್ವ ಕಾಪಾಡುವ ನಿಟ್ಟಿನಲ್ಲಿ ಪ್ರವಾಸಿಗರಲ್ಲಿ ಅರಿವು ಮೂಡಿಸಬೇಕಿದೆ. ಆ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕಿದೆ ಎಂದು ಅವರು ಮನವಿ ಮಾಡಿದರು. ಜಿಲ್ಲೆಯ ಎಲ್ಲೆಡೆ ಪರಿಸರ ಪ್ರವಾಸೋದ್ಯಮ ನಿರ್ಮಾಣ ಮಾಡಬೇಕು. ಪ್ಲಾಸ್ಟಿಕ್ ಬಳಸದಂತೆ ಸಲಹೆ ಮಾಡಬೇಕು. ಜಿಲ್ಲೆಯ ಪವಿತ್ರ ಸ್ಥಳಗಳು ಸೇರಿದಂತೆ ಪ್ರವಾಸಿ ಸ್ಥಳಗಳಲ್ಲಿ ಯಾವ ರೀತಿ ನಡೆದುಕೊಳ್ಳಬೇಕು ಎಂಬ ಬಗ್ಗೆ ಮಾಹಿತಿ ಇರಬೇಕು. ಊಟಿ ಹಾಗೂ ತಿರುಪತಿಯಲ್ಲಿ ಪ್ರವಾಸಿ ಹಾಗೂ ಪವಿತ್ರ ಸ್ಥಳದಲ್ಲಿನ ನಿರ್ವಹಣೆ ಬಗ್ಗೆ ತಿಳಿದುಕೊಳ್ಳಬೇಕು. ಈ ಸಂಬಂಧ ಆಗಾಗ ಶಿಬಿರ ಏರ್ಪಡಿಸುವ ಮೂಲಕ ಮಾಹಿತಿ ನೀಡುವಂತಾಗಬೇಕು ಎಂದು ಸಲಹೆ ನೀಡಿದರು. ‘ಜಿಲ್ಲೆಯಲ್ಲಿ ಸಮತೋಲಿತ ಪರಿಸರ ನಿರ್ಮಾಣಕ್ಕೆ ಮುಂದಾಗಬೇಕು. ಪ್ರವಾಸಿಗರಿಗೆ ಒಳ್ಳೆಯ ವಾತಾವರಣ ನಿರ್ಮಾಣ ಮಾಡಬೇಕು. ಆ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಿದಾಗ ಸುಸ್ಥಿರ ಪ್ರವಾಸೋದ್ಯಮ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಅಭಿಪ್ರಾಯಪಟ್ಟರು.’ ಕೊಡಗು ಜಿಲ್ಲೆಗೆ ಪ್ರವಾಸಿಗರು ಯಾವ ತಿಂಗಳಲ್ಲಿ ಭೇಟಿ ನೀಡಬೇಕು ಎಂಬ ಬಗ್ಗೆ ವೆಬ್‍ಸೈಟ್‍ನಲ್ಲಿ ಮಾಹಿತಿ ಇರಬೇಕು. ಪ್ರವಾಸೋದ್ಯಮ ನೀತಿಯನ್ನು ಪ್ರತಿಯೊಬ್ಬರೂ ಅನುಸರಿಸಬೇಕು ಎಂದು ವೆಂಕಟ್ ರಾಜಾ ಸಲಹೆ ನೀಡಿದರು. ಕೊಡಗು ಜಿಲ್ಲೆಯ ವಿಶೇಷತೆ ಬಗ್ಗೆ ‘ಕಾಫಿ ಟೇಬಲ್ ಬುಕ್’ ಹೊರ ತರುವಂತಾಗಬೇಕು. ಇಲ್ಲಿನ ನದಿ, ಜಲಾಶಯ, ದುಬಾರೆ ಆನೆ ಶಿಬಿರ, ರಿವರ್ ರ್ಯಾಪ್ಟಿಂಗ್ ಹೀಗೆ ಹಲವು ವಿಶೇಷತೆ ಬಗ್ಗೆ ಪ್ರವಾಸಿಗರಿಗೆ ಮಾಹಿತಿ ದೊರೆಯುವಂತಾಗಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಪರಿಸರ ಸ್ನೇಹಿ ಪ್ರವಾಸೋದ್ಯಮದಿಂದ ಸುಸ್ಥಿರ ಪ್ರವಾಸೋದ್ಯಮ ಅಭಿವೃದ್ಧಿ ಸಾಧಿಸಲು ಸಾಧ್ಯ. ಆ ನಿಟ್ಟಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರವಾಸಿ ಮಾರ್ಗದರ್ಶಿ ಪುಸ್ತಕ ಅಗತ್ಯ ಎಂದರು. ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಮಾತನಾಡಿ, ಜಿಲ್ಲೆಯಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ವಾರಾಂತ್ಯದಲ್ಲಿ ಜಿಲ್ಲೆಗೆ 1 ಲಕ್ಷ ಜನರು ಭೇಟಿ ನೀಡುತ್ತಾರೆ. ಆದ್ದರಿಂದ ಪರಿಸರ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಬೇಕು. ಈ ಸಂಬಂಧ ಸ್ಥಳೀಯ ಸಂಸ್ಥೆಗಳು ಹೆಚ್ಚಿನ ಗಮನಹರಿಸಬೇಕು ಎಂದು ಸಲಹೆ ನೀಡಿದರು. ತಲಕಾವೇರಿ, ಭಾಗಮಂಡಲ ಕ್ಷೇತ್ರವನ್ನು ಪವಿತ್ರ ಸ್ಥಳವೆಂದು ಪ್ರಕಟಿಸಬೇಕು, ಆ ನಿಟ್ಟಿನಲ್ಲಿ ಪ್ರವಾಸಿಗರಿಗೆ ಮಾಹಿತಿ ದೊರೆಯಬೇಕು. ಪ್ರವಾಸಿಗರ ಜೊತೆ ಸೌಜನ್ಯದಿಂದ ನಡೆದುಕೊಂಡಲ್ಲಿ ಅವರು ಮತ್ತೊಬ್ಬರಿಗೆ ಕೊಡಗಿನ ಮಹತ್ವದ ಬಗ್ಗೆ ಹೇಳುತ್ತಾರೆ. ಆ ನಿಟ್ಟಿನಲ್ಲಿ ಗಮನಹರಿಸಬೇಕು ಎಂದು ನಾಗೇಂದ್ರ ಪ್ರಸಾದ್ ಕೋರಿದರು. ಪವಿತ್ರ ಹಾಗೂ ಪ್ರವಾಸಿ ಸ್ಥಳಗಳಲ್ಲಿ ರಕ್ಷಕರನ್ನು ನಿಯೋಜಿಸಬೇಕು. 1.25 ಲಕ್ಷ ಜನರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಪ್ರವಾಸೋದ್ಯಮದಿಂದ ಬದುಕು ಕಟ್ಟಿಕೊಂಡಿದ್ದಾರೆ ಎಂದು ನಾಗೇಂದ್ರ ಪ್ರಸಾದ್ ಅವರು ಹೇಳಿದರು. ಕೊಡಗು ಜಿಲ್ಲೆಯಲ್ಲಿ 1.25 ಲಕ್ಷ ಜನರು ಪ್ರವಾಸೋದ್ಯಮವನ್ನು ನಂಬಿ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಅವಲಂಬಿತರಾಗಿದ್ದಾರೆ. ಜೊತೆಗೆ ಉದ್ಯೋಗವು ಸಹ ದೊರೆಯಲಿದೆ. ಸ್ವಚ್ಛತೆ ಹಾಗೂ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ತಿಳಿಸಿದರು. ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್ ಮಾತನಾಡಿ ಕೊಡಗು ಜಿಲ್ಲೆಗೆ ಪ್ರತಿ ವರ್ಷ ಸುಮಾರು 47 ರಿಂದ 50 ಲಕ್ಷ ಪ್ರವಾಸಿಗರು ಭೇಟಿ ನೀಡುತ್ತಿದ್ದು, ಪ್ರತ್ಯೇಕ್ಷವಾಗಿ ಹಾಗೂ ಪರೋಕ್ಷವಾಗಿ ಸಾವಿರಾರು ಮಂದಿಗೆ ಉದ್ಯೋಗವನ್ನು ಸೃಷ್ಟಿಸಿದೆ ಎಂದು ತಿಳಿಸಿದರು. ಕೊಡಗು ಜಿಲ್ಲೆಯ ಕಲೆ, ಪರಂಪರೆ, ಸಾಂಪ್ರಾದಾಯಗಳ ಜೊತೆ ಇಲ್ಲಿನ ಅತಿಥ್ಯಕ್ಕೆ ಪ್ರವಾಸಿಗರು ಹೆಚ್ಚು ಆಕರ್ಷಿತಾರಾಗುತ್ತಾರೆ. ಪ್ರವಾಸೋದ್ಯಮ ಇಲಾಖೆಯ ಅನುದಾನದಿಂದ ಕೊಡಗು ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಿಗೆ ರೂ.2813.9 ಲಕ್ಷಗಳ ಅನುದಾನದಲ್ಲಿ ವಿವಿಧ ಕಾಮಗಾರಿ ಹಾಗೂ ಮೂಲಭೂತ ಸೌಕರ್ಯ ನಿರ್ಮಿಸಲಾಗಿದೆ ಎಂದರು. ಜಿಲ್ಲೆಯಲ್ಲಿ ಸುಮಾರು 4 ಸಾವಿರ ಹೋಂ-ಸ್ಟೇಗಳಿದ್ದು, ಇಲ್ಲಿಯವರೆಗೆ 2010 ಹೋಂ-ಸ್ಟೇಗಳು ಆನ್‍ಲೈನ್‍ನಲ್ಲಿ ನೋಂದಾಯಿಸಿ ಪ್ರಮಾಣ ಪತ್ರ ಪಡೆದಿದ್ದಾರೆ ಎಂದು ಅನಿತಾ ಭಾಸ್ಕರ್ ವಿವರಿಸಿದರು. ಜಿಲ್ಲೆಯಲ್ಲಿ ಸುಮಾರು 150 ಹೋಟೆಲ್/ ರೆಸಾರ್ಟ್‍ಗಳು ಕಾರ್ಯ ನಿರ್ವಹಿಸುತ್ತಿದ್ದು, 53 ಹೋಟೆಲ್/ ರೆಸ್ಟೋರೆಂಟ್/ ರೆಸಾರ್ಟ್‍ಗಳು ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ವೆಬ್‍ಸೈಟ್ ನಲ್ಲಿ ನೋಂದಾಯಿಸಿ ಪ್ರಮಾಣ ಪತ್ರವನ್ನು ಪಡೆದಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರು ಮಾಹಿತಿ ನೀಡಿದರು. ಪ್ರಸ್ತುತ ಸರ್ಕಾರ 2024-25ನೇ ಸಾಲಿನ ಆಯವ್ಯಯ ಭಾಷಣದಲ್ಲಿ ‘ರಾಜ್ಯದ ಪ್ರಮುಖ ಜಲಾಶಯಗಳಲ್ಲಿನ ಹಿನ್ನೀರಿನಲ್ಲಿ ಮತ್ತು ಕಡಲ ತೀರಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಜಲಕ್ರೀಡೆಗಳು ಮತ್ತು ಜಲಸಾಹಸ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲಾಗುವುದು’ ಎಂಬುದಾಗಿ ಘೋಷಿಸಿರುತ್ತಾರೆ. ಅದರಂತೆ ಜಿಲ್ಲೆಯ ಹಾರಂಗಿ ಜಲಾಶಯದಲ್ಲಿ ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಜಲಕ್ರೀಡೆಗಳನ್ನು ಮತ್ತು ಜಲಸಾಹಸ ಪ್ರವಾಸೋದ್ಯಮವನ್ನು ನಡೆಸಲು ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ (ಜೆಎಲ್‍ಆರ್) ನಿಗಮದ ವತಿಯಿಂದ ಪರವಾನಿಗೆ ನೀಡಿ ಪ್ರವಾಸಿಗರಿಗೆ ಮುಕ್ತಗೊಳಿಸಲಾಗಿದೆ ಎಂದು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು. ಕುಶಾಲನಗರ ತಾಲ್ಲೂಕು ದುಬಾರೆ ಹಾಗೂ ಪೊನ್ನಂಪೇಟೆ ತಾಲ್ಲೂಕು ಬರ್ಪುಹೊಳೆ ಪ್ರವಾಸಿ ತಾಣಗಳಲ್ಲಿ ರಿವರ್ ರ್ಯಾಫ್ಟಿಂಗ್ ನಡೆಸಲು ಪರವಾನಿಗೆ ನೀಡಲಾಗಿರುತ್ತದೆ. ಜಿಲ್ಲಾಧಿಕಾರಿ ಅವರು ಸುಸ್ಥಿರ ಪ್ರವಾಸೋದ್ಯಮ ಮತ್ತು ಪ್ರವಾಸೋದ್ಯಮ ಕುರಿತ ಭಿತ್ತಿಪತ್ರ ಬಿಡುಗಡೆ ಮಾಡಿದರು. ‘ಶೂನ್ಯ ತ್ಯಾಜ್ಯ ಪ್ರವಾಸ ಜಾಗೃತಿ’ಗೆ ಇದೇ ಸಂದರ್ಭದಲ್ಲಿ ಚಾಲನೆ ನೀಡಿದರು. ಹೋಂಸ್ಟೇ ಪರವಾನಗಿ ಪತ್ರವನ್ನು ಜಿಲ್ಲಾಧಿಕಾರಿ ವಿತರಿಸಿದರು. ಸ್ವಚ್ಛತಾ ಗ್ರೀನ್ ಲೀಪ್ ರೇಟಿಂಗ್ ಪತ್ರವನ್ನು ಇದೇ ಸಂದರ್ಭದಲ್ಲಿ ವಿತರಿಸಲಾಯಿತು. ಮೈಸೂರಿನ ಫುಡ್ ಕ್ರಾಪ್ಟ್ ಸಂಸ್ಥೆಯ ಪ್ರಾಂಶುಪಾಲರಾದ ಡಾ.ಎಸ್.ಕಣ್ಣನ್ ಅವರು ಜಿಲ್ಲೆಯ ಹೋಂ ಸ್ಟೇಗಳ ಸಂಬಂಧಿಸಿದಂತೆ ಮಾಹಿತಿ ನೀಡಿದರು. ಗ್ರೀನ್ ಪಾರ್ಕ್ ಸಂಸ್ಥೆಯ ಎಚ್.ಆರ್.ಜಯರಾಮ್ ಪರಿಸರ ಮತ್ತು ಸುಸ್ಥಿರ ಪ್ರವಾಸ ಕುರಿತು ಮಾತನಾಡಿದರು. ಟೂರ್ಸ್ ಮತ್ತು ಟ್ರಾವೆಲ್ ಅಸೋಷಿಯೇಷನ್‍ನ ಅಧ್ಯಕ್ಷರಾದ ಕುಪ್ಪಂಡ ವಸಂತ, ಕೊಡಗು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಉಪಾಧ್ಯಕ್ಷರಾದ ಅಂಬೆಕಲ್ಲು ನವೀನ್, ಪ್ರಧಾನ ಕಾರ್ಯದರ್ಶಿ ಮೋಂತಿ ಗಣೇಶ್, ಪ್ರಮುಖರಾದ ಜಿ.ಚಿದ್ವಿಲಾಸ್, ಬಿ.ಜಿ.ಅನಂತಶಯನ, ಅನಿಲ್ ಎಚ್.ಟಿ., ಸಿ.ಜಿ.ಕುಶಾಲಪ್ಪ, ಸೋಮವಾರಪೇಟೆ ಹೋಂ ಸ್ಟೇ ಅಸೋಷಿಯೇಷನ್‍ನ ಅಧ್ಯಕ್ಷರಾದ ಸಿ.ಕೆ.ರೋಹಿತ್, ಹೋಂ ಸ್ಟೇ, ರೇಸಾರ್ಟ್ ಹಾಗೂ ಟ್ರಾವೆಲ್ ಅಸೋಷಿಯೇಷನ್ ಸದಸ್ಯರು ಇತರರು ಪಾಲ್ಗೊಂಡಿದ್ದರು. ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್ ಸ್ವಾಗತಿಸಿದರು. ಚೋಂದಮ್ಮ ಮತ್ತು ಸ್ವಪ್ನಾ ನಾಡಗೀತೆ ಹಾಡಿದರು. ಕೆ.ಜೆ.ದಿವಾಕರ ನಿರೂಪಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಹೆಗ್ಗಡೆ ಸಮಾಜದ ಕ್ರೀಡಾ ಹಬ್ಬಕ್ಕೆ ಸಂಭ್ರಮದ ತೆರೆ*

ಮೇ 5, 2026

*ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*

ಮೇ 5, 2026

*5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*

ಮೇ 5, 2026

*ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*

ಮೇ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮೇ 6 NEWS DESK : ಪೆರುಂಬಾಡಿಯ ಶಂಸುಲ್ ಉಲಮಾ ಎಜುಕೇಶನಲ್ ಅಕಾಡೆಮಿಯ ಎಸ್ಇಎ ಕಾಲೇಜು ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯಲ್ಲಿ…

*5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*

ಮೇ 5, 2026

*ಕೊಡಗು : ಪತ್ರಿಕಾ ಪ್ರವಾಸ ವಾಹನಕ್ಕೆ ಚಾಲನೆ*

ಮೇ 5, 2026

*ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ : ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭ ಸಾಧ್ಯತೆ : ರಸ್ತೆ ಸೇರಿದಂತೆ ಹಲವು ಕಾಮಗಾರಿ ಪೂರ್ಣಗೊಳಿಸಿ : ಸಚಿವ ಎನ್.ಎಸ್.ಭೋಸರಾಜು*

ಮೇ 5, 2026

*ಮಾದಾಪುರದಲ್ಲಿ ಕೊಡವ ಸಮಾಜ ಭವನ ಲೋಕಾಪ೯ಣೆ : ಪ್ರಾಮಾಣಿಕತೆಯೊಂದಿಗೆ ಸಂಸ್ಕೃತಿ ಸಂರಕ್ಷಣೆಗೆ ಕೊಡವರು ವಿಶ್ವವ್ಯಾಪಿ ಹೆಸರು ವಾಸಿ : ಬಸವರಾಜ ಬೊಮ್ಮಾಯಿ ಶ್ಲಾಘನೆ*

ಮೇ 5, 2026

*ಮಡಿಕೇರಿಯಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮೇ 5, 2026

*ಪೊನ್ನಂಪೇಟೆಯಲ್ಲಿ ಬಿಜೆಪಿ ವಿಜಯೋತ್ಸವ*

ಮೇ 5, 2026

*ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಉದ್ಘಾಟನೆ*

ಮೇ 5, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*

ಮೇ 5, 2026

*ಬಾಳೆಲೆ-ನಲ್ಲೂರು : ಮೇ 5 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.