ಮಡಿಕೇರಿ ಅ.1 NEWS DESK : ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ “ಅಕ್ಷರ ಹಬ್ಬ” ಒಂದು ದಿನದ ಸಾಹಿತ್ಯ ಉತ್ಸವ ನಡೆಯಿತು. ಕಾರ್ಯಕ್ರಮವನ್ನು ಕರ್ನಾಟಕ ಜಾನಪದ ಪರಿಷತ್ ನ ಅಧ್ಯಕ್ಷ ಅನಂತಶಯನ ಉದ್ಘಾಟಿಸಿದರು. ಕಾರ್ಯಕ್ರಮದ ಸಂಯೋಜಕರಾದ ದೀಕ್ಷಿತಾ ವರ್ಕಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮಡಿಕೇರಿ ಪ್ರಾಂಶುಪಾಲರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಹಿತಿ ಮೊಣ್ಣಂಡ ಶೋಭಾ ಸುಬ್ಬಯ್ಯ, ಸ.ಪ.ಪೂ ಕಾಲೇಜಿನ ಪ್ರಾಚಾರ್ಯರಾದ ಪಿ.ಆರ್.ವಿಜಯ, ಕರಾಮುವಿ ಪ್ರಾದೇಶಿಕ ನಿರ್ದೇಶಕರಾದ ಸ್ಮಿತಾ ಸುಬ್ಬಯ್ಯ ಭಾಗವಹಿಸಿದ್ದರು. ಪ್ರಗತಿಪರ ಕೃಷಿ ಮಂದ್ರೀರಾ ತೇಜಸ್ ನಾಣಯ್ಯ ತಮ್ಮ ಅನುಭವವನ್ನು ಹಂಚಿಕೊಂಡರು. ವಿಜ್ಞಾನಿ ಡಾ. ಜೆ.ಜಿ.ಮಂಜುನಾಥ್ ಅವರನ್ನು ವಿದ್ಯಾರ್ಥಿಗಳು ಸಂದರ್ಶಿಸಿದರು. ಕಥಾ ವಚನ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ರೇವತಿ ರಮೇಶ್ ನಡೆಸಿಕೊಟ್ಟರು. ಕನ್ನಡ ಉಪನ್ಯಾಸಕ ಪೂರ್ಣಿಮಾ ಕವಿತೆ ವಾಚನ ಮಾಡಿದರು. ಕಾರ್ಯಕ್ರಮದಲ್ಲಿ ಸಾಹಿತ್ಯ ಸ್ಪರ್ಧೆಗಳು, ರಸಪ್ರಶ್ನೆ, ಪುಸ್ತಕ ಪ್ರದರ್ಶನ, ಕಲಾಪ್ರದರ್ಶನ, ಸಾಧಕರ ಸಂದರ್ಶನ, ಪುಸ್ತಕ ಪರಿಚಯ, ಟ್ರೆಶರ್ ಹಂಟ್ ಇತ್ಯಾದಿ ಕಾರ್ಯಕ್ರಮಗಳು ಗಮನ ಸೆಳೆಯಿತು. ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ನವೀನ್ ಅಂಬೆಕಲ್ಲು ಸಮಾರೋಪ ಭಾಷಣಗೈದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಯಸೂರ್ಯ ಹಾಜರಿದ್ದರು.