ಮಡಿಕೇರಿ ಅ.1 NEWS DESK : ನಾಡ ಹಬ್ಬ ದಸರಾ ಪ್ರಯುಕ್ತ ಅ.3 ರಂದು ಮಡಿಕೇರಿಯಲ್ಲಿ ನಾಲ್ಕು ಶಕ್ತಿ ದೇವತೆಗಳ ಕರಗ ಮಹೋತ್ಸವ ಆರಂಭಗೊಳ್ಳಲಿದ್ದು, ಗಣ್ಯರು ಸೇರಿದಂತೆ ಸಾವಿರಾರು ಭಕ್ತಾದಿಗಳು ಪಾಲ್ಗೊಳ್ಳಲಿದ್ದಾರೆ. ಈ ಸಂಬಂಧ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮತ್ತು ವಾಹನ ಸುಗಮ ಸಂಚಾರಕ್ಕೆ ಅನುವುಕಲ್ಪಿಸಿ ಕೊಡುವ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ಬೆಳಿಗ್ಗೆಯಿಂದಲೇ ಪಂಪ್ ಕೆರೆಯಿಂದ ( ಕರಗ ಹೋರಡುವ ಸ್ಥಳ) ಹಿಡಿದ್ದು, ಎವಿ ಶಾಲೆ ಜಂಕ್ಷನ್ ವರೆಗೆ ರಸ್ತೆಯ ಎರಡು ಬದಿಯಲ್ಲಿ ವಾಹನ ನಿಲುಗಡೆಯನ್ನು ತಾತ್ಕಾಲಿಕವಾಗಿ ಸಂಪೂರ್ಣ ನಿಷೇಧಿಸಲಾಗಿದೆ. ಎವಿ ಶಾಲಾ ಜಂಕ್ಷನ್ ನಿಂದ ಐಜಿ ವೃತ್ತದವರಗೆ ರಸ್ತೆಯ ಒಂದು ಭಾಗದಲ್ಲಿ ಅಂದರೆ ರಸ್ತೆಯ ಎಡ ಭಾಗದಲ್ಲಿ ಮಾತ್ರ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ. ನಂತರ ಐಜಿ ವೃತ್ತದಿಂದ ಕಾಲೇಜು ರಸ್ತೆ ಮಾರ್ಗವಾಗಿ ರಾಮಮಂದಿರ ದೇವಾಲಯದವರೆಗೆ ಸಂಜೆ 6 ಗಂಟೆಯ ನಂತರ ರಸ್ತೆಯ ಎರಡು ಭಾಗದಲ್ಲಿಯೂ ವಾಹನ ನಿಲುಗಡೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆದ್ದರಿಂದ ಸಾರ್ವಜನಿಕರು ಸಹಕರಿಸಿ, ಕರಗ ಮಹೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಮಡಿಕೇರಿ ಸಂಚಾರಿ ಪೊಲೀಸ್ ಠಾಣೆ ಪ್ರಕಟನೆಯಲ್ಲಿ ಕೋರಿದೆ.