ವಿರಾಜಪೇಟೆ ಅ.2 NEWS DESK : ನಗರದ ಶುಚಿತ್ವಕ್ಕೆ ಹೆಚ್ಚು ಮಹತ್ವ ನೀಡಿ ವರ್ಷದ ಎಲ್ಲಾ ದಿನಗಳು ತಮ್ಮ ಸೇವೆಯಲ್ಲಿ ತೊಡಗಿಕೊಂಡು ಜನಸೇವೆಗೆ ತಮ್ಮ ಸೇವೆಯನ್ನು ನೀಡುತ್ತಿರುವುದು ಗಮನರ್ಹವಾಗಿದೆ ಎಂದು ವಿರಾಜಪೇಟೆ ಪುರಸಭೆಯ ನೂತನ ಅಧ್ಯಕ್ಷ ದೇಚಮ್ಮ ಕಾಳಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆ ಪುರಸಭೆ ಪೌರಕಾರ್ಮಿಕ ಸೇವಾ ಸಮಿತಿ ವತಿಯಿಂದ ವಿರಾಜಪೇಟೆ ನಗರದ ಪುರಭವನದಲ್ಲಿ ಪೌರಕಾರ್ಮಿಕ ದಿನಾಚರಣೆ ಅಂಗವಾಗಿ ಪೌರಕಾರ್ಮಿಕರಿಗೆ ಸನ್ಮಾನ ಮತ್ತು ವಿವಿದ ವಿವಿಧ ಆಟೋಟ ಸ್ಪರ್ಧೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪೌರಕಾರ್ಮಿಕರು ಪುರಸಭೆಯ ಒಂದು ಅಂಗ, ಪುರಸಭೆಯ ಆಡಳಿತ ವರ್ಗ ಮತ್ತು ಪೌರಕಾರ್ಮಿಕರು ಒಂದು ನಾಣ್ಯದ ಎರಡು ಮುಖಗಳಂತೆ, ನಗರದ ಶುಚಿತ್ವಕ್ಕೆ ಮಹತ್ವ ನೀಡಿದಂತೆ ತಮ್ಮ ಆರೋಗ್ಯ ಮತ್ತು ಕುಟಂಬದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತಾಗಬೇಕು. ಪೌರಕಾರ್ಮಿಕರ ಅಭಿವೃದ್ದಿಗಾಗಿ ಸರ್ಕಾರದಿಂದ ಲಭಿಸುವ ಎಲ್ಲಾ ಸೌಲಭ್ಯಗಳನ್ನು ದೊರಕಿಸಕೊಡುವಲ್ಲಿ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಕರ್ತವ್ಯದ ವೇಳೆಯಲ್ಲಿ ಸಾರ್ವಜನಿಕರೊಂದಿಗೆ ಗುರುತಿಸುವ ಕೆಲಸವಾಗಬೇಕು. ಸಾರ್ವಜನಿಕರಿಂದ ಯಾವುದೇ ದೂರು ಬಾರದ ರೀತಿಯಲ್ಲಿ ಕರ್ತವ್ಯ ನಿರ್ವಹಿಸುವುದು ಸೂಕ್ತ ಎಂದು ಹೇಳಿದರು. ಪುರಸಭೆಯ ಮುಖ್ಯಾಧೀಕಾರಿ ಎ.ಚಂದ್ರ ಕುಮಾರ್ ಮಾತನಾಡಿ, ಪೌರಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅನುದಾನ ಮತ್ತು ಆರೋಗ್ಯ ವಿಮೆ ಹಾಗೂ ಇತರ ಸೌಲಭ್ಯಗಳನ್ನು ಪೌರಕಾರ್ಮಿಕರಿಗೆ ಒದಗಿಸಿಕೊಡುವಲ್ಲಿ ಪೂರಕವಾಗಿ ಸ್ಪಂದಿಸಲಾಗುತ್ತದೆ ಎಂದು ಭರವಸೆ ನೀಡಿದರು. ಪೌರಕಾರ್ಮಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಹೆಚ್ಚಿನ ಕಾಳಜಿ ವಹಿಸುವಂತಾಗಬೇಕು. ಅಲ್ಲದೆ ಕರ್ತವ್ಯಕ್ಕೆ ಆಡ್ಡಿಯಾಗದ ರೀತಿಯಲ್ಲಿ ತಮ್ಮ ಸೇವೆಯನ್ನು ನಿರ್ವಹಿಸಬೇಕು ಎಂದು ಹೇಳಿದರು. ಪುರಸಭೆಯ ಹಿರಿಯ ಸದಸ್ಯರಾದ ಸಿ.ಕೆ. ಪೃಥ್ವಿನಾಥ್, ವಿ.ಆರ್.ರಜನಿಕಾಂತ್ ಮತ್ತು ಪುರಸಭೆಯ ನೂತನ ಉಪಧ್ಯಕ್ಷರಾದ ಫಸಿಯಾ ತಬ್ಸುಂ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸೇವೆಯಿಂದ ನಿವೃತ್ತರಾದ ವಸಂತ್ ಮತ್ತು ವೇಲಾ ಹಾಗೂ ಮುಖ್ಯಧೀಕಾರಿಗಳಾದ ಚಂದ್ರಕುಮಾರ್ ಅವರನ್ನು ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು. ನಗರದ ತಾಲೂಕು ಮೈದಾನದಲ್ಲಿ ಅಯೋಜಿಸಲಾಗಿದ್ದ ಪೌರಕಾರ್ಮಿಕರ ಕ್ರೀಡಾಕೂಟದಲ್ಲಿ ವಿಜೇತರಾದ ಪೌರ ಸಿಬ್ಬಂದಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಪೌರಕಾರ್ಮಿಕರ ಸೇವಾ ಸಮಿತಿಯ ಅಧ್ಯಕ್ಷರಾದ ಇರ್ಫಾನ್, ಉಪಧ್ಯಕ್ಷರಾದ ಹೆಚ್.ಕೆ. ಸುಂದರ, ಕಾರ್ಯದರ್ಶಿ ವೇಲು ಮುರುಗ, ಪುರಸಭೆಯ ಸದಸ್ಯರಾದ ಪಟ್ಟಡ ರಂಜಿ ಪೂಣಚ್ಚ. ಮೊಹಮ್ಮದ್ ರಾಫಿ, ಡಿ.ಪಿ.ರಾಜೇಶ್, ಆಗಸ್ಟೀನ್ ಭೆನ್ನಿ, ಎಸ್.ಹೆಚ್. ಮತೀನ್, ಅಬ್ದುಲ್ ಜಲೀಲ್, ಹೆಚ್.ಪೂರ್ಣಿಮಾ, ನಾಮ ನಿರ್ಧೇಶಿತ ಸದಸ್ಯರಾದ ಮೋಹನ್ ಕುಮಾರ್ ಜಿ.ಜಿ, ದಿನೇಶ್ ನಂಬಿಯಾರ್, ಶಭರಿಶ್ ಶೆಟ್ಟಿ, ಮುಂತಾದವರು ಉಪಸ್ಥಿತರಿದ್ದರು. ಪುರಸಭೆಯ ಮುಖ್ಯಾಧಿಕಾರಿ ಚಂದ್ರಕುಮಾರ್ ಸ್ವಾಗತಿಸಿದರು. ಪೌರ ಕಾರ್ಮಿಕರ ಸೇವಾ ಸಂಘದ ಅಧ್ಯಕ್ಷ ಇರ್ಫಾನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಪೌರ ಕಾರ್ಮಿಕರ ಸೇವಾ ಸಮಿತಿಯ ಪದಾಧಿಕಾರಿಗಳು, ಪುರಸಭೆಯ ಸಿಬ್ಬಂದಿ ವರ್ಗ, ಪೌರ ಕಾರ್ಮಿಕರು ಪೌರಕಾರ್ಮಿಕರ ಕುಟುಂಭ ವರ್ಗದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*