ವಿರಾಜಪೇಟೆ ಅ.2 NEWS DESK : ವಿರಾಜಪೇಟೆ ಪುರಸಭೆಗೆ ನೂತನವಾಗಿ ಆಯ್ಕೆಗೊಂಡ ಅಧ್ಯಕ್ಷೆ ದೇಚಮ್ಮ ಕಾಳಪ್ಪ ಮತ್ತು ಉಪಾಧ್ಯಕ್ಷೆ ಫಸಿಯಾ ತಬ್ಸುಂ ಅವರಿಗೆ ವಿರಾಜಪೇಟೆ ನಗರ ಕಾಂಗ್ರೆಸ್ ನ ಯುವ ಘಟಕದಿಂದ ಅಭಿನಂದನೆ ಸಲ್ಲಿಸಲಾಯಿತು. ವಿರಾಜಪೇಟೆ ಪುರಸಭೆಯ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ವಿರಾಜಪೇಟೆ ನಗರ ಯುವ ಕಾಂಗ್ರೆಸ್ ಘಟಕದ ಪ್ರಮುಖರು ಹಾಗೂ ಪದಾಧಿಕಾರಿಗಳು ಹೂಗುಚ್ಛ ನೀಡಿ ಶುಭಹಾರೈಸಿದರು. ಈ ಸಂದರ್ಭ ನಗರ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಸೈಯದ್ ಶಭೀರ್, ಪ್ರಮುಖರಾದ ಪಟ್ಟಡ ರಕ್ಷಿತ್ ಚೆಂಗಪ್ಪ, ಅಫ್ರೀದ್ ಮತ್ತು ನವನೀತ್ ಹಾಗೂ ಪುರಸಭೆಯ ಸದಸ್ಯರು, ಸರ್ಕಾರದ ನಾಮ ನಿರ್ದೇಶಿತ ಸದಸ್ಯರು ಹಾಜರಿದ್ದರು.










