ವಿರಾಜಪೇಟೆ ಅ.2 NEWS DESK : ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಗಾಂಧಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಬೆನಾಡಿಕ್ ಆರ್.ಸಲ್ದಾನ ಮಹಾತ್ಮ ಗಾಂಧಿ ಹಾಗೂ ಭಾರತದ ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸಿ ಮಾತನಾಡಿ, ಗಾಂಧೀಜಿ ನಮ್ಮ ರಾಷ್ಟ್ರಪಿತ. ಅವರ ತತ್ವ ಆದರ್ಶಗಳು ಪ್ರಸ್ತುತ ಸಮಾಜಕ್ಕೆ ಬಹು ಮುಖ್ಯ. ಅವರ ಸರಳ ಜೀವನ, ರಾಮರಾಜ್ಯ, ಗ್ರಾಮ ಸ್ವರಾಜ್ಯ ಪರಿಕಲ್ಪನೆ ಅದ್ಭುತವಾದದ್ದು, ಅವರು ಬೋಧಿಸಿದ ಕೆಲವು ತತ್ವಗಳನ್ನಾದರೂ ಇಂದಿನ ಯುವ ಸಮಾಜ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸರಳತೆಯಿಂದ ಜೀವನ ನಡೆಸಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಬೇಕೆಂದರು. ಈ ಸಂದರ್ಭ ಕಾಲೇಜಿನ ಉಪನ್ಯಾಸಕರಾದ ನಾಗರಾಜು, ಸೋಮಣ್ಣ, ನಿರ್ಮಿತ, ಕಚೇರಿ ಸಿಬ್ಬಂದಿಗಳಾದ ಸೋಮನಾಥ್, ಜಯಮ್ಮ, ಶಶಿಕಲಾ, ಸೋಮಣ್ಣ , ಸುಮತಿ, ರೇಷ್ಮ , ಎನ್.ಸಿ.ಸಿ ಅಧಿಕಾರಿ ಭೋಜಮ್ಮ, ಎನ್.ಎಸ್ .ಎಸ್ ಯೋಜನಾಧಿಕಾರಿ ಸುನಿಲ್ ಕುಮಾರ್ ಹಾಗೂ ಸ್ವಯಂಸೇವಕರು ಹಾಜರಿದ್ದರು. ಕಾಲೇಜಿನ ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಅಕ್ಷಿತಾ ನಾಯ್ಕ್ ವಿದ್ಯಾರ್ಥಿಗಳಿಗೆ ಸ್ವಚ್ಛತೆಯ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು. ನಂತರ ವಿದ್ಯಾರ್ಥಿಗಳು ಕಾಲೇಜಿನ ಆವರಣವನ್ನು ಸ್ವಚ್ಛಗೊಳಿಸಿದರು.