ವಿರಾಜಪೇಟೆ NEWS DESK ಅ.2 :ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿಯ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ರಾಜ್ಯ ಮಟ್ಟದಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿತ್ತು. ಈ ಸ್ಪರ್ಧೆಯ ಪ್ರೌಢ ಶಾಲಾ ವಿಭಾಗದಲ್ಲಿ ವಿರಾಜಪೇಟೆಯ ಸಂತ ಅನ್ನಮ್ಮ ಪ್ರೌಢ ಶಾಲೆಯ ಹತ್ತನೇಯ ತರಗತಿಯ ವಿದ್ಯಾರ್ಥಿನಿ ಚೈತನ್ಯ ಕೆ. ಎಂ. ಭಾಗವಹಿಸಿ ಜಿಲ್ಲೆಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನವನ್ನು ಪಡೆದು ಜಿಲ್ಲೆಗೆ ಕೀರ್ತಿಯನ್ನು ತಂದಿರುತ್ತಾಳೆ. ಗಾಂಧಿ ಜಯಂತಿಯ ದಿನದಂದು ಬೆಂಗಳೂರಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದ್ಯಾರ್ಥಿನಿಗೆ ನಗದು ಬಹುಮಾನ ಹಾಗೂ ಪ್ರಮಾಣ ಪತ್ರವನ್ನು ನೀಡಿ ಗೌರವಿಸಿದರು. ಚೈತನ್ಯ ವಿರಾಜಪೇಟೆಯ ಮಂಜುನಾಥ ಹಾಗೂ ಕುಮಾರಿ ಟಿ. ದಂಪತಿಗಳ ಪುತ್ರಿ. ವಿದ್ಯಾರ್ಥಿನಿಯನ್ನು ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ. ಫಾ. ಜೇಮ್ಸ್ ಡೊಮಿನಿಕ್ ಹಾಗೂ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಬೆನ್ನಿ ಜೋಸೆಫ್ ರವರು ಅಭಿನಂದಿಸಿದ್ದಾರೆ.