ಮಡಿಕೇರಿ ಅ.3 NEWS DESK : ಕೂಡಿಗೆ ಹಾಲು ಉತ್ಪಾದಕ ಮಹಿಳಾ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ರಾಧ ಸಂತೋಷ್, ಉಪಾಧ್ಯಕ್ಷರಾಗಿ ಅಶ್ವಿನಿ ಯೋಗೇಶ್ ಅವಿರೋಧವಾಗಿ ಆಯ್ಕೆಯಾದರು. ಸಂಘದ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಧಾನಕ್ಕೆ ಒಂದೊಂದು ನಾಮಪತ್ರ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿ ಆಶಾ ಅವಿರೋಧವಾಗಿ ಆಯ್ಕೆಯಾಗಿರುವುದನ್ನು ಘೋಷಣೆ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಭಾರತಿ, ವಿಜಯ, ಪಂಕಜಾ, ವೀಣಾ , ಲಕ್ಷ್ಮಿ, ಮಣಿ, ಪಲ್ಲವಿ, ಸಾಕಮ್ಮ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಲಕ್ಷ್ಮಿ ಹಾಜರಿದ್ದರು.