ವಿರಾಜಪೇಟೆ ಅ.3 NEWS DESK : ಹೆಗ್ಗಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಕಮಲಮ್ಮ ದಿನದ ಮಹತ್ವದ ಕುರಿತು ಮತ್ತು ಸ್ವಚ್ಛತೆಯ ಕುರಿತು ಮಾತನಾಡಿದರು. ಗಾಂಧಿ ಜಯಂತಿಯ ಪ್ರಯುಕ್ತ ಶಾಲಾ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು. ನಂತರ ಶಿಕ್ಷಕರು, ಮಕ್ಕಳು ಹಾಗೂ ಗ್ರಾಮಸ್ಥರು ಶಾಲೆಯ ಸುತ್ತ ಸ್ವಚ್ಛತಾ ಶ್ರಮದಾನವನ್ನು ಮಾಡಿದರು. ಈ ಸಂದರ್ಭ ಬಿ.ಎಸ್.ಎನ್.ಎಲ್. ನ ನಿವೃತ್ತ ನೌಕರ ಕೋಡಿರ ಟಿ.ಗಣಪತಿ, ರೇಷ್ಮಾ ಗಣಪತಿ, ಎಸ್.ಡಿ.ಎಂ.ಸಿ ಅಧ್ಯಕ್ಷೆ ವೈ.ಎಸ್.ಲತಾ, ಸಹ ಶಿಕ್ಷಕಿ ಕಮರುನ್ನಿಸ, ಎಸ್. ಡಿ. ಎಂ. ಸಿ ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು. ಆಟೋಟ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು.