ನಾಪೋಕ್ಲು ಸೆ.3 NEWS DESK : ನಾಪೋಕ್ಲುವಿನ ವಿವಿಧ ಶಾಲೆಗಳಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ವಿವಿಧ ಶಾಲೆಗಳಲ್ಲಿ ನೇತಾರರ ಭಾವಚಿತ್ರಗಳನ್ನು ಇರಿಸಿ ಪುಷ್ಪ ನಮನ ಸಲ್ಲಿಸಿ ಶಾಲಾ ಪರಿಸರವನ್ನು ಸ್ವಚ್ಚಗೊಳಿಸಲಾಯಿತು. ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಶಾಲಾ ಸುತ್ತಮುತ್ತಲಿನ ಪರಿಸರ ಹಾಗೂ ಆವರಣವನ್ನು ವಿದ್ಯಾರ್ಥಿಗಳು ಸ್ವಚ್ಛಗೊಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ ದಿನದ ಮಹತ್ವದ ಕುರಿತು ವಿವರಿಸಿದರು. ಪ್ರೊ.ಕಲ್ಯಾಟಂಡ ಪೂಣಚ್ಚ ಮಾತನಾಡಿ, ಸಬರಮತಿಯಲ್ಲಿ ಮೊದಲಿಗೆ ಗಾಂಧೀಜಿಯವರು ಸ್ವಾತಂತ್ರ್ಯ ಹೋರಾಟದ ಚಳುವಳಿಯನ್ನು ಆರಂಭಿಸಿದರು. ಬಳಿಕ ದೇಶದ ಉದ್ದಗಲಕ್ಕೂ ಚಳುವಳಿಗಳನ್ನು ಕೈಗೊಂಡು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು ಎಂದ ಅವರು ಲಾಲ್ ಬಹದ್ದೂರ್ ಶಾಸ್ತ್ರಿ ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರ ಜೀವನ ಚರಿತ್ರೆಯ ಬಗ್ಗೆ ವಿದ್ಯಾರ್ಥಿಗಳ ವಿವರಿಸಿದರು. ಶಾಲೆಯ ಪ್ರಾಂಶುಪಾಲೆ ಬಿ.ಎ ಶಾರದ ಮಾತನಾಡಿ, ಮಹಾತ್ಮ ಗಾಂಧೀಜಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರನ್ನು ರಾಷ್ಟ್ರಪಿತ ಎಂದು ಗೌರವಿಸಲಾಗುತ್ತಿದೆ ಎಂದರು. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ಆದರ್ಶವನ್ನು ಮೈಗೂಡಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆಕರೆ ನೀಡಿದರು. ವಿದ್ಯಾರ್ಥಿಗಳಾದ ಮಹಮ್ಮದ್ ರಿಫಾದ್, ವಿ.ಎ.ವಿಶ್ವ, ಕೆ.ವಿ.ಸೋನಲ್ ಗಾಂಧೀಜಿ ಹಾಗೂ ಶಾಸ್ತ್ರೀಯ ಅವರ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾ ಕಾರ್ಯಕ್ರಮಗಳನ್ನು ಆಯೋಜಿಸಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿ ಎಂ.ಸಾತ್ವಿಕ್ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮವನ್ನು ಹರ್ಷ ಸಿ.ಎ.ಬೋಪಣ್ಣ ಸ್ವಾಗತಿಸಿದರು. ಕೆ.ಎಂ.ನಿರನ್ ನಂಜಪ್ಪ ನಿರೂಪಿಸಿ, ಹರ್ಷ ಪಿ.ಬಿ.ಕಾರ್ಯಪ್ಪ ವಂದಿಸಿದರುಸಿದರು.
ವರದಿ : ದುಗ್ಗಳ ಸದಾನಂದ.