Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಹೆಗ್ಗಡೆ ಸಮಾಜದ ಕ್ರೀಡಾ ಹಬ್ಬಕ್ಕೆ ಸಂಭ್ರಮದ ತೆರೆ*
  • *ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*
  • *5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*
  • *ಕೊಡಗು : ಪತ್ರಿಕಾ ಪ್ರವಾಸ ವಾಹನಕ್ಕೆ ಚಾಲನೆ*
  • *ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ : ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭ ಸಾಧ್ಯತೆ : ರಸ್ತೆ ಸೇರಿದಂತೆ ಹಲವು ಕಾಮಗಾರಿ ಪೂರ್ಣಗೊಳಿಸಿ : ಸಚಿವ ಎನ್.ಎಸ್.ಭೋಸರಾಜು*
  • *ಮಾದಾಪುರದಲ್ಲಿ ಕೊಡವ ಸಮಾಜ ಭವನ ಲೋಕಾಪ೯ಣೆ : ಪ್ರಾಮಾಣಿಕತೆಯೊಂದಿಗೆ ಸಂಸ್ಕೃತಿ ಸಂರಕ್ಷಣೆಗೆ ಕೊಡವರು ವಿಶ್ವವ್ಯಾಪಿ ಹೆಸರು ವಾಸಿ : ಬಸವರಾಜ ಬೊಮ್ಮಾಯಿ ಶ್ಲಾಘನೆ*
  • *ಮಡಿಕೇರಿಯಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಪೊನ್ನಂಪೇಟೆಯಲ್ಲಿ ಬಿಜೆಪಿ ವಿಜಯೋತ್ಸವ*
  • *ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಉದ್ಘಾಟನೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ 70ನೇ ವನ್ಯಜೀವಿ ಸಪ್ತಾಹ : ಅರಣ್ಯ, ವನ್ಯಜೀವಿಗಳ ಸಂರಕ್ಷಣೆಗೆ ಕಾಳಜಿ ಅಗತ್ಯ : ಪ್ರಧಾನ ಜಿಲ್ಲಾ ನ್ಯಾಯಾಧೀಶರ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ 70ನೇ ವನ್ಯಜೀವಿ ಸಪ್ತಾಹ : ಅರಣ್ಯ, ವನ್ಯಜೀವಿಗಳ ಸಂರಕ್ಷಣೆಗೆ ಕಾಳಜಿ ಅಗತ್ಯ : ಪ್ರಧಾನ ಜಿಲ್ಲಾ ನ್ಯಾಯಾಧೀಶರ ಕರೆ*

ಅಕ್ಟೋಬರ್ 3, 20244 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

 

ಮಡಿಕೇರಿ ಅ.3 NEWS DESK : ಕರ್ನಾಟಕ ಅರಣ್ಯ ಇಲಾಖೆಯ ಕೊಡಗು ಅರಣ್ಯ ವೃತ್ತ ಹಾಗೂ ಮಡಿಕೇರಿ ವನ್ಯಜೀವಿ ವಿಭಾಗದ ವತಿಯಿಂದ ಶಾಲಾ ಶಿಕ್ಷಣ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ, ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ (ಎನ್‍ಎಸ್‍ಎಸ್) ಹಾಗೂ ವಿವಿಧ ಶಾಲಾ-ಕಾಲೇಜು ಸಹಯೋಗದೊಂದಿಗೆ ಗುರುವಾರ ಜಿಲ್ಲಾ ಕೇಂದ್ರವಾದ ಮಡಿಕೇರಿ ನಗರದಲ್ಲಿ ವನ್ಯಜೀವಿಗಳೊಂದಿಗೆ ಸಹಬಾಳ್ವೆ ಎಂಬ ಧ್ಯೇಯ ವಾಕ್ಯದೊಂದಿಗೆ 70ನೇ ವನ್ಯಜೀವಿ ಸಪ್ತಾಹ ಅಂಗವಾಗಿ ವನ್ಯಜೀವಿ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲು “ವನ್ಯಜೀವಿ ಸಂರಕ್ಷಣೆಗಾಗಿ ಕಾಲ್ನಡಿಗೆ ಜಾಗೃತಿ ಜಾಥಾ ನಡೆಯಿತು. ಕಾಲ್ನಡಿಗೆ ಜಾಥಾಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಹೊಸಮನಿ ಪುಂಡಲೀಕ, ಪ್ರತಿಯೊಬ್ಬರೂ ನಿಸರ್ಗದ ನಿಯಮಗಳನ್ನು ಪರಿಪಾಲಿಸುವ ಮೂಲಕ ಭವಿಷ್ಯದ ದೃಷ್ಟಿಯಿಂದ ಪರಿಸರ, ಪ್ರಕೃತಿ, ಅರಣ್ಯ ಮತ್ತು ವನ್ಯಜೀವಿಗಳ ಬಗ್ಗೆ ಪ್ರತಿಯೊಬ್ಬರೂ ಕಾಳಜಿ ಹೊಂದಬೇಕು ಎಂದರು. ಜನರು ವನ್ಯಜೀವಿಗಳೊಂದಿಗೆ ಸಹಬಾಳ್ವೆ ನಡೆಸಿದಾಗ ಮಾತ್ರ ಪ್ರಕೃತಿ, ಪರಿಸರ ಉಳಿಯಲು ಸಾಧ್ಯ. ಇದರಿಂದ ಪರಿಸರ ಸಮತೋಲನ ಕಾಯ್ದುಕೊಳ್ಳಬಹುದು ಎಂದು ಅಭಿಪ್ರಾಯಪಟ್ಟರು. ‘ಅರಣ್ಯಕ್ಕೆ ನಾವು ಯಾವುದೇ ಹಾನಿ ಉಂಟು ಮಾಡದೇ ಸಸ್ಯ ಹಾಗೂ ಪ್ರಾಣಿ ಸಂಕುಲದ ಸಂರಕ್ಷಣೆ ಮೂಲಕ ವನ್ಯಜೀವಿಗಳ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು’ ಎಂದು ಹೊಸಮನಿ ಪುಂಡಲೀಕ ಸಲಹೆ ನೀಡಿದರು. ಪ್ರತಿಯೊಂದು ಪ್ರಾಣಿ-ಪಕ್ಷಿಗಳು ಪರೋಕ್ಷವಾಗಿ ಮಾನವನಿಗೆ ಉಪಕಾರವನ್ನೇ ಮಾಡುತ್ತಾ ಬಂದಿವೆ. ಯಾವುದೇ ಪ್ರಾಣಿ-ಪಕ್ಷಿಗಳು ನಶಿಸದಂತೆ ಸಂರಕ್ಷಿಸಬೇಕು ಎಂದು ಹೇಳಿದರು. ಜಿಲ್ಲಾಧಿಕಾರಿ ವೆಂಕಟರಾಜ್ ಮಾತನಾಡಿ, ಅರಣ್ಯ ಇಲಾಖೆಯ ವತಿಯಿಂದ ಹಮ್ಮಿಕೊಂಡಿರುವ ವನ್ಯಜೀವಿ ಸಪ್ತಾಹ ಕಾರ್ಯಕ್ರಮಕ್ಕೆ ಎಲ್ಲರೂ ಸಹಕರಿಸುವ ಮೂಲಕ ಅರಣ್ಯ ಮತ್ತು ವನ್ಯಜೀವಿಗಳ ಉಳಿವಿಗೆ ನಿರಂತರ ಪ್ರಯತ್ನ ಅಗತ್ಯ ಎಂದರು. ಅರಣ್ಯ ಇಲಾಖೆಯು ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗಾಗಿ ವಹಿಸಿರುವ ವಿಶೇಷ ಕಾಳಜಿ ಶ್ಲಾಘನೀಯವಾದುದು. ಈ ಕಾಲ್ನಡಿಗೆ ಜಾಥಾವು ಜನರಲ್ಲಿ ಅರಣ್ಯ, ಪರಿಸರ ಹಾಗೂ ವನ್ಯಜೀವಿಗಳ ಸಂರಕ್ಷಣೆ ಬಗ್ಗೆ ಅರಿವು ಮೂಡಿಸಲು ಸಹಕಾರಿಯಾಗಿದೆ ಎಂದರು. ಕೊಡಗು ಅರಣ್ಯ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ತ್ರಿಪಾಠಿ ಮಾತನಾಡಿ, ಪ್ರತಿಯೊಬ್ಬರೂ ಅರಣ್ಯ ಇಲಾಖೆಯ ಇಂತಹ ಜನ ಜಾಗೃತಿ ಕಾರ್ಯಕ್ರಮಕ್ಕೆ ಸಹಕರಿಸುವಂತೆ ಕೋರಿದರು. ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಯ ಮಹತ್ವ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿ ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿದ ರಾಷ್ಟ್ರೀಯ ಹಸಿರು ಪಡೆಯ ಜಿಲ್ಲಾ ನೋಡಲ್ ಅಧಿಕಾರಿಯೂ ಆದ ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕøತರಾದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್, ಇಂದು ನಾವು ಅರಣ್ಯ ಮತ್ತು ವನ್ಯಜೀವಿಗಳ ಜೊತೆಯೇ ಬಾಳುವುದನ್ನು ಕಲಿಯಬೇಕು. ಆಗ ಮಾತ್ರ ಪ್ರಕೃತಿ ಮತ್ತು ಪರಿಸರ ಸಮತೋಲನದಿಂದ ಇರಲು ಸಾಧ್ಯ. ಉತ್ತಮ ಭವಿಷ್ಯಕ್ಕಾಗಿ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ನಾವು ಪಣತೊಡಬೇಕು ಎಂದರು. ಮಡಿಕೇರಿ ವನ್ಯಜೀವಿ ವಿಭಾಗದ ಡಿಸಿಎಫ್ ಕೆ.ಎ.ನೆಹರು ವನ್ಯಜೀವಿ ಸಪ್ತಾಹ ಆಚರಣೆಯ ಉದ್ದೇಶ ತಿಳಿಸಿದರು. ಜಾಥಾದಲ್ಲಿ ಭಾಗವಹಿಸಿದ್ದ ಡಿಡಿಪಿಐ ಸಿ.ರಂಗಧಾಮಪ್ಪ ಮಾತನಾಡಿ, ಮುಂದಿನ ಪೀಳಿಗೆಗಾಗಿ ನಾವು ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ಒತ್ತು ನೀಡಬೇಕು ಎಂದರು. ಜಾಥಾದಲ್ಲಿ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಸದಸ್ಯ ಎಂ.ಎನ್.ವೆಂಕಟನಾಯಕ್, ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ಕುರಿತ ಘೋಷವಾಕ್ಯಗಳನ್ನು ಹೇಳಿದರು. ವನ್ಯಜೀವಿ ಸಪ್ತಾಹ ಜಾಗೃತಿ ಜಾಥಾದಲ್ಲಿ ಭಾಗವಹಿಸಿದ್ದ ಸಿಸಿಎಫ್ ಮನೋಜ್ ಕುಮಾರ್ ತ್ರಿಪಾಠಿ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಪೆÇಲೀಸ್ ವರಿμÁ್ಠಧಿಕಾರಿ ಕೆ.ರಾಮರಾಜನ್, ಉಪ ವಿಭಾಗಾಧಿಕಾರಿ ವಿನಾಯಕ ನಾರ್ವಡೆ, ವಿರಾಜಪೇಟೆ ಪ್ರಾದೇಶಿಕ ವಿಭಾಗದ ಡಿಸಿಎಫ್, ಎನ್.ಎಚ್.ಜಗನ್ನಾಥ್, ಸಾಮಾಜಿಕ ಅರಣ್ಯ ವಿಭಾಗದ ಡಿಸಿಎಫ್ ಸಂದೀಪ್ ಪಿ.ಅಭಯಂಕರ್, ಅರಣ್ಯ ಸಂಚಾರಿ ದಳದ ಡಿಸಿಎಫ್ ಸೈಯದ್ ಅಹಮದ್ ಶಾ ಹುಸೇನ್, ಡಿಡಿಪಿಐ ಸಿ.ರಂಗಧಾಮಪ್ಪ, ಭಾರತ್ ಸ್ಕೌಟ್ಸ್, ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಅವರು ವಿದ್ಯಾರ್ಥಿಗಳೊಂದಿಗೆ 4 ಕಿ.ಮೀ.ಕಾಲ್ನಡಿ ಜಾಥಾದಲ್ಲಿ ಕ್ರಮಿಸಿ ವನ್ಯಜೀವಿ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಗಮನ ಸೆಳೆದರು. ವನ್ಯಜೀವಿ ವಿಭಾಗದ ಎಸಿಎಫ್ ಶ್ರೀನಿವಾಸ ನಾಯಕ್, ಎಸಿಎಫ್ ಕೆ.ಪಿ.ಗೋಪಾಲ್, ಎ.ಎ.ಗೋಪಾಲ್, ಪುಷ್ಪಗಿರಿ ವನ್ಯಜೀವಿ ವಿಭಾಗದ ಆರ್‍ಎಫ್ ಕೋಟ್ರೇಶ್, ಶಮ, ಮರಿಸ್ವಾಮಿ, ರತನ್ ಕುಮಾರ್, ಪೂಜಾಶ್ರೀ, ಗಂಗಾಧರ್, ಶೈಲೇಂದ್ರ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಸಹ ಕಾರ್ಯದರ್ಶಿ ಬೊಳ್ಳಜಿರ ಬಿ ಅಯ್ಯಪ್ಪ, ಜಿಲ್ಲಾ ಸ್ಥಾನೀಕ ಆಯುಕ್ತ ಎಚ್.ಆರ್.ಮುತ್ತಪ್ಪ, ಗೈಡ್ಸ್ ಸಹಾಯಕ ಆಯುಕ್ತೆ ಸಿ.ಎಂ.ಸುಲೋಚನ, ಸ್ಕೌಟ್ಸ್ ತರಬೇತಿ ಆಯುಕ್ತ ಕೆ.ಯು.ರಂಜಿತ್, ಗೈಡ್ಸ್ ತರಬೇತಿ ಆಯುಕ್ತೆ ಮೈಥಲಿರಾವ್, ಗೈಡ್ಸ್ ಶಿಕ್ಷಕಿ ಪ್ರೇಮ, ಜಾಥಾದಲ್ಲಿ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಸದಸ್ಯ ಎಂ.ಎನ್.ವೆಂಕಟನಾಯಕ್, ಹೆಬ್ಬಾಲೆ ಪ್ರೌಢಶಾಲೆಯ ಶಿಕ್ಷಕರಾದ ಸಿ.ಡಿ.ಲೋಕೇಶ್, ಭೋಜೇಗೌಡ, ಶಿಕ್ಷಕರ ಸೊಸೈಟಿ ನಿರ್ದೇಶಕ ಎಸ್.ಆರ್.ಶಿವಲಿಂಗ, ಅರಣ್ಯ ಇಲಾಖೆಯ ಅಧಿಕಾರಿಗಳು, ಆರ್. ಎಫ್.ಓ.ಗಳು, ಡಿ.ಆರ್. ಎಫ್.ಓ.ಗಳು, ಅರಣ್ಯ ಫಾರೆಸ್ಟ್ ಗಳು, ಅರಣ್ಯ ವೀಕ್ಷಕರು, ಸಿಬ್ಬಂದಿ ಸೇರಿದಂತೆ ವಿವಿಧ ಸಂಘ- ಸಂಸ್ಥೆಗಳ ಪದಾಧಿಕಾರಿಗಳು, ನಾಗರಿಕರು ಭಾಗವಹಿಸಿದ್ದರು. ವನ್ಯಜೀವಿ ಸಪ್ತಾಹ ಜಾಗೃತಿ ಜಾಥಾ: ಅರಣ್ಯ ಇಲಾಖೆಯ ವತಿಯಿಂದ ಏರ್ಪಡಿಸಿದ್ದ ವನ್ಯಜೀವಿ ಸಪ್ತಾಹ ಜಾಥಾವು ಮಡಿಕೇರಿ ನಗರದ ಅರಣ್ಯ ಭವನದಿಂದ ಆರಂಭಗೊಂಡು ಮಡಿಕೇರಿ ನಗರದ ಮುಖ್ಯ ರಸ್ತೆಯ ಮೂಲಕ ಟೌನ್‍ಹಾಲ್, ಚೌಕಿ ಮತ್ತು ಮಹದೇವಪೇಟೆ ಮಾರ್ಗವಾಗಿ 4 ಕಿ.ಮೀ.ನಷ್ಟು ದೂರ ಕ್ರಮಿಸಿ ಸ್ವಾಗತಬೆಟ್ಟದ ಸಾಲುಮರದ ತಿಮ್ಮಕ್ಕ ಟ್ರೀ ಪಾರ್ಕ್‍ನಲ್ಲಿ ಕಾಲ್ನಡಿಗೆ ಜಾಥಾ ಸಮಾಪನಗೊಂಡಿತು. ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ: ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ಹಾಗೂ ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ವಿವಿಧ ಘೋಷಣಾ ಫಲಕಗಳನ್ನು ಹಿಡಿದು ಜಾಥಾದಲ್ಲಿ ತೆರಳಿದ ವಿದ್ಯಾರ್ಥಿಗಳು ನಾಗರಿಕರಲ್ಲಿ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ಬಗ್ಗೆ ಜನಜಾಗೃತಿ ಮೂಡಿಸಿದರು. ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯ ಇಕೋ ಕ್ಲಬ್, ರಾಷ್ಟ್ರೀಯ ಸೇವಾ ಯೋಜನೆ,(ಎನ್ನೆಸ್ಸೆಸ್) ಘಟಕದ ವಿದ್ಯಾರ್ಥಿಗಳು, ನಗರದ ಸಂತ ಜೋಸೆಫರ ಶಾಲೆಯ ಗೈಡ್ಸ್ ವಿದ್ಯಾರ್ಥಿಗಳು, ವಿವಿಧ ಸಂಘ- ಸಂಸ್ಥೆಗಳ ಪ್ರತಿನಿಧಿಗಳು ಕಾಲ್ನಡಿಗೆ ಜಾಥಾದಲ್ಲಿ ಪಾಲ್ಗೊಂಡು ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಯ ಘೋಷಣಾ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಪ್ರಚುರಪಡಿಸಿದರು.
ಜಾಗೃತಿ ಜಾಥಾ :: ವನ್ಯಜೀವಿ ಸಪ್ತಾಹ ನಡಿಗೆ ಜಾಥಾದಲ್ಲಿ ಅರಣ್ಯ, ಪರಿಸರ ಮತ್ತು ವನ್ಯಜೀವಿಗಳ ಸಂರಕ್ಷಣೆ ಕುರಿತಾದ ಭಿತ್ತಿಫಲಕಗಳನ್ನು ಹಿಡಿದು ಸಾಗಿದ ಸ್ವಯಂ ಸೇವಕರು ಅರಣ್ಯ, ಪರಿಸರ ಮತ್ತು ವನ್ಯಜೀವಿಗಳ ಸಂರಕ್ಷಣೆ ಕುರಿತಂತೆ ಘೋಷಣೆಗಳನ್ನು ಕೂಗುವ ಮೂಲಕ ನಾಗರಿಕರ ಗಮನ ಸೆಳೆದರು. ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಕಾಡೇ ರಾಷ್ಟ್ರದ ಸಂಪತ್ತು, ಹಸಿರೇ ಉಸಿರು, ಪಶ್ಚಿಮಘಟ್ಟಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ, ನಮ್ಮ ನಡಿಗೆ ವನ್ಯಜೀವಿಗಳ ಕಡೆಗೆ, ಕಾಡಿನ ರಕ್ಷಣೆಯೇ ವನ್ಯಜೀವಿಗಳ ಉಳಿವಿನ ಹಾದಿ, ನಮ್ಮ ನಡಿಗೆ ಹಸಿರೆಡೆಗೆ, ಅಭಯಾರಣ್ಯಗಳ ರಕ್ಷಣೆಗೆ ಬೇಕು ಆದ್ಯತೆ ಎಂಬಿತ್ಯಾದಿ ಘೋಷಣೆಗಳನ್ನು ಪ್ರಚುರಪಡಿಸಲಾಯಿತು. ವನ್ಯಜೀವಿ ವಿಭಾಗದ ಎಸಿಎಫ್ ಶ್ರೀನಿವಾಸ್ ನಾಯಕ್, ಪುಷ್ಪಗಿರಿ ವನ್ಯಜೀವಿ ವಲಯದ ಆರ್‍ಎಫ್‍ಓ ಕೋಟ್ರೇಶ್ ಜಾಥಾದ ಉಸ್ತುವಾರಿ ವಹಿಸಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಹೆಗ್ಗಡೆ ಸಮಾಜದ ಕ್ರೀಡಾ ಹಬ್ಬಕ್ಕೆ ಸಂಭ್ರಮದ ತೆರೆ*

ಮೇ 5, 2026

*ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*

ಮೇ 5, 2026

*5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*

ಮೇ 5, 2026

*ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*

ಮೇ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮೇ 6 NEWS DESK : ಪೆರುಂಬಾಡಿಯ ಶಂಸುಲ್ ಉಲಮಾ ಎಜುಕೇಶನಲ್ ಅಕಾಡೆಮಿಯ ಎಸ್ಇಎ ಕಾಲೇಜು ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯಲ್ಲಿ…

*5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*

ಮೇ 5, 2026

*ಕೊಡಗು : ಪತ್ರಿಕಾ ಪ್ರವಾಸ ವಾಹನಕ್ಕೆ ಚಾಲನೆ*

ಮೇ 5, 2026

*ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ : ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭ ಸಾಧ್ಯತೆ : ರಸ್ತೆ ಸೇರಿದಂತೆ ಹಲವು ಕಾಮಗಾರಿ ಪೂರ್ಣಗೊಳಿಸಿ : ಸಚಿವ ಎನ್.ಎಸ್.ಭೋಸರಾಜು*

ಮೇ 5, 2026

*ಮಾದಾಪುರದಲ್ಲಿ ಕೊಡವ ಸಮಾಜ ಭವನ ಲೋಕಾಪ೯ಣೆ : ಪ್ರಾಮಾಣಿಕತೆಯೊಂದಿಗೆ ಸಂಸ್ಕೃತಿ ಸಂರಕ್ಷಣೆಗೆ ಕೊಡವರು ವಿಶ್ವವ್ಯಾಪಿ ಹೆಸರು ವಾಸಿ : ಬಸವರಾಜ ಬೊಮ್ಮಾಯಿ ಶ್ಲಾಘನೆ*

ಮೇ 5, 2026

*ಮಡಿಕೇರಿಯಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮೇ 5, 2026

*ಪೊನ್ನಂಪೇಟೆಯಲ್ಲಿ ಬಿಜೆಪಿ ವಿಜಯೋತ್ಸವ*

ಮೇ 5, 2026

*ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಉದ್ಘಾಟನೆ*

ಮೇ 5, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*

ಮೇ 5, 2026

*ಬಾಳೆಲೆ-ನಲ್ಲೂರು : ಮೇ 5 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.