*ಸಿದ್ದಾಪುರ ಅ.4 : ನವಪಲ್ಲವ ಸಾಹಿತ್ಯ ವೇದಿಕೆ ಹಾಗೂ ಕೆ.ಪಿ.ಎಸ್ ನೆಲ್ಯಹುದಿಕೇರಿ ಇದರ ಸಂಯುಕ್ತ ಆಶ್ರಯದಲ್ಲಿ ಜಯಲಕ್ಷ್ಮಿ ಎಂ.ಬಿ ಅವರ “ಸಾಂಚವ್ಯ” ಕವನ ಸಂಕಲನ ಬಿಡುಗಡೆ ಕಾರ್ಯಕ್ರಮ ಅ.5ರಂದು ನೆಲ್ಯಹುದಿಕೇರಿಯ ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಲಿದೆ. ಮಡಿಕೇರಿಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜ್ ನ ಪ್ರಾಂಶುಪಾಲರಾದ ಡಾ.ಕೋರನ ಸರಸ್ವತಿ ಪ್ರಕಾಶ್ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಉದ್ಘಾಟಿಸಲಿದ್ದಾರೆ. ಕರ್ನಾಟಕ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ಅವರು ಪುಸ್ತಕ ಬಿಡುಗಡೆ ಮಾಡಲಿದ್ದು, ಜನಶಕ್ತಿ ವಾರಪತ್ರಿಕೆಯ ಸಂಪಾದಕ ಡಾ.ಎಸ್.ವೈ.ಗುರುಶಾಂತ ಪುಸ್ತಕ ಪರಿಚಯ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೇಶವ ಕಾಮತ್, ಗೋಣಿಕೊಪ್ಪಲು ಕಾಪ್ಸ್ ಶಾಲೆಯ ಪ್ರೊ.ಎಂ.ಡಿ.ನAಜುAಡ, ಗ್ಯಾರಂಟಿ ಅನುಷ್ಠಾನ ಸಮಿತಿಯ ಕುಶಾಲನಗರ ಅಧ್ಯಕ್ಷ ವಿ.ಪಿ.ಶಶಿಧರ್ ಪಾಲ್ಗೊಳ್ಳಲಿದ್ದಾರೆ.