ಮಡಿಕೇರಿ ಅ.5 NEWS DESK : ನಗರದ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ದಸರಾ ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮಡಿಕೇರಿ ದಸರಾ ಜಾಗತಿಕ ಮಟ್ಟದಲ್ಲಿ ಜನಪ್ರಿಯತೆಗಳಿಸಿಕೊಂಡಿದೆ. ಜನೋತ್ಸವ ಯಶಸ್ವಿಗೆ ಮಡಿಕೇರಿ ದಸರಾ ಸಮಿತಿ ಹಾಗೂ ದಶಮಂಟಪಗಳು ಪ್ರಮುಖ ಕಾರಣವಾಗಿದೆ. ವರ್ಷದಿಂದ ವರ್ಷಕ್ಕೆ ಕಾರ್ಯಕ್ರಮದ ಜನಪ್ರಿಯತೆ ಹೆಚ್ಚಾಗುವುದು ಜಿಲ್ಲೆಗೆ ಹಿರಿಮೆ ತಂದಿದೆ ಎಂದರು. ಜಿಲ್ಲಾಧಿಕಾರಿ ಹಾಗೂ ಮಡಿಕೇರಿ ನಗರ ದಸರಾ ಸಮಿತಿ ಅಧ್ಯಕ್ಷ ವೆಂಕಟರಾಜಾ ಮಾತನಾಡಿ, ಅಪಾರ ಶ್ರಮವಹಿಸಿ ಕಾರ್ಯಕ್ರಮವನ್ನು ರೂಪಿಸಲಾಗಿದೆ. ಇದು ಯಶಸ್ವಿಯಾಗಬೇಕಾದರೆ ಜನರ ಸಹಕಾರ ಬಹುಮುಖ್ಯ ಎಂದರು. ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ದಸರಾ ಸಮಿತಿ ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ, ಸಾಂಸ್ಕøತಿಕ ಸಮಿತಿ ಅಧ್ಯಕ್ಷ ಹೆಚ್.ಟಿ.ಅನಿಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಉಪವಿಭಾಧಿಕಾರಿ ವಿನಾಯಕ್ ನರ್ವಾಡೆ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ರಾಜ್ಯ ಸರ್ಕಾರದ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ದಸರಾ ಸಮಿತಿ ಪ್ರಧಾನ ಕಾರ್ಯದರ್ಶಿ ಬಿ.ವೈ.ರಾಜೇಶ್, ಖಜಾಂಚಿ ಅರುಣ್ ಶೆಟ್ಟಿ ಸೇರಿದಂತೆ ನೆರವಂಡ ಅನಿತಾ ಪೂವಯ್ಯ, ಸವಿತಾ ರಾಕೇಶ್ ಮತ್ತಿತರರು ಹಾಜರಿದ್ದರು. ಭಾರತಿ ರಮೇಶ್ ಮತ್ತು ತಂಡ ಪ್ರಾರ್ಥಿಸಿದರು. ಸ್ನೇಹ ಮಧುಕರ್, ಚೋಂದಮ್ಮ ನಾಡಗೀತೆ ಹಾಡಿದರು. ಮುನೀರ್ ಅಹಮ್ಮದ್ ನಿರೂಪಿಸಿದರು, ರಾಜೇಶ್ ಯಲ್ಲಪ್ಪ ಸ್ವಾಗತಿಸಿ, ಅರುಣ್ ಶೆಟ್ಟಿ ವಂದಿಸಿದರು. ರಾತ್ರಿ ವಿವಿಧ ತಂಡಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ಗಮನ ಸೆಳೆಯಿತು.