ಮಡಿಕೇರಿ NEWS DESK ಅ.5 : ಕರ್ನಾಟಕ ಭೂಸುಧಾರಣಾ ಕಾಯ್ದೆ ತಿದ್ದುಪಡಿ 79ಎ, 79ಬಿ ದುರುಪಯೋಗವಾಗುತ್ತಿದ್ದು, ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯ ಮೂಲಕ ಭೂಮಾಫಿಯಾ, ರೆಸಾರ್ಟ್ ಮಾಫಿಯಾ, ಆರ್ಥಿಕ ಅಪರಾಧಿಗಳು ಹಾಗೂ ಉದ್ಯಮಪತಿಗಳು ಕೊಡವಲ್ಯಾಂಡ್ ನ ಪರಿಸರವನ್ನು ಸಂಪೂರ್ಣ ನಾಶ ಮಾಡುತ್ತಿದ್ದಾರೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಆರೋಪಿಸಿದ್ದಾರೆ. ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಸಿಎನ್‌ಸಿ ವತಿಯಿಂದ ತಿತಿಮತಿಯಲ್ಲಿ ನಡೆದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು.
ಭೂಮಾಫಿಯಾ, ರೆಸಾರ್ಟ್ ಮಾಫಿಯಾ, ಕಪ್ಪು ಹಣ ಹೊಂದಿರುವವರು ವಿಲ್ಲಾ, ಟೌನ್ ಶಿಪ್ ಗಳ ನಿರ್ಮಾಣದಲ್ಲಿ ತೊಡಗಿರುವ ಉದ್ಯಮಪತಿಗಳು ಹಾಗೂ ಬಂಡವಾಳಶಾಹಿಗಳು ಇಡೀ ಕೊಡಗಿನಲ್ಲಿ ವ್ಯಾಪಿಸಿದ್ದು, ಪಾಕೃತಿಕ ಕೊಡುಗೆಗಳನ್ನು ಆವರಿಸಿಕೊಂಡಿದ್ದಾರೆ. ಸರ್ಕಾರ ಆದಾಯವನ್ನಷ್ಟೇ ಗುರಿ ಮಾಡಿಕೊಂಡು ಪವಿತ್ರ ಕೊಡವಲ್ಯಾಂಡ್ ನ್ನು ಮೋಜು, ಮಸ್ತಿಗಾಗಿ ಬಿಟ್ಟುಕೊಡುತ್ತಿದೆ ಎಂದು ಎನ್.ಯು.ನಾಚಪ್ಪ ಆರೋಪಿಸಿದರು. ಕೊಡಗಿನಲ್ಲಿ ಪ್ರವಾಸೋದ್ಯಮವನ್ನು ಬೂಸ್ಟ್ ಮಾಡುವುದಾಗಿ ಜಿಲ್ಲಾಡಳಿತ ಹೇಳಿಕೆ ನೀಡುತ್ತಿದೆ. ಪ್ರವಾಸೋದ್ಯಮದ ಬೆಳವಣಿಗೆ ಎಂದರೆ ಹಸಿರ ಬೆಟ್ಟಗುಡ್ಡಗಳನ್ನು ಕಡಿದು ಜಲನಾಳಗಳನ್ನು ನಾಶಪಡಿಸುವುದೇ ಎನ್ನುವುದನ್ನು ಶ್ವೇತಪತ್ರದ ಮೂಲಕ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.
ಮಾಫಿಯಾಗಳು ಹಬ್ಬ, ಸಾಂಸ್ಕೃತಿಕ ಕಾರ್ಯಕ್ರಮ, ಧಾರ್ಮಿಕ ಕೇಂದ್ರಗಳು ಮತ್ತು ಕ್ರೀಡೋತ್ಸವಗಳಿಗೆ ದೇಣಿಗೆ ನೀಡಿ ಜನರ ಗಮನವನ್ನು ಬೇರೆಡೆಗೆ ಸೆಳೆದು ಕರ್ನಾಟಕ ಭೂಸುಧಾರಣಾ ಕಾಯ್ದೆಯನ್ನು ಉಲ್ಲಂಘಿಸುತ್ತಿದ್ದಾರೆ. ಪರಿಸರದ ಮೇಲೆ ದಾಳಿ ಮಾಡಿ ಅನಾರೋಗ್ಯಕರ ಪರಿಸ್ಥಿತಿಯನ್ನು ಸೃಷ್ಟಿಸಿ, ತಮ್ಮ ತಪ್ಪನ್ನು ಮುಚ್ಚಿ ಹಾಕಲು ವೈದ್ಯಕೀಯ ಸೇವೆ ನೀಡಿದಂತೆ ಮಾಡಿ ಸಾಮಾಜಿಕ ಕಳಕಳಿಯ ನಾಟಕವಾಡುತ್ತಿದ್ದಾರೆ. ರಾಜಕಾರಣಿಗಳು ಮತಬ್ಯಾಂಕ್ ರಾಜಕಾರಣಕ್ಕಾಗಿ ಅಕ್ರಮ ಬಾಂಗ್ಲಾ ವಲಸಿಗರಿಗೆ ಆಶ್ರಯ ನೀಡುತ್ತಿದ್ದಾರೆ. ನಕಲಿ ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್ ಗಳನ್ನು ಮಾಡಿಕೊಡುತ್ತಿದ್ದಾರೆ. ಅಲ್ಲದೆ ಶೋಷಿತರು ಎನ್ನುವ ಹಣೆಪಟ್ಟಿ ಕಟ್ಟಿ ಅಕ್ರಮ ಸಕ್ರಮದಡಿ ನೆಲೆ ಕಲ್ಪಿಸಲು ಹೊಂಚು ಹಾಕುತ್ತಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ ಎಂದು ಆರೋಪಿಸಿದರು. ಕೊಡವರೆಲ್ಲರೂ ಒಗ್ಗಟ್ಟಾಗಿ ಹೋರಾಟ ನಡೆಸಿದಾಗ ಮಾತ್ರ ಇದೆಲ್ಲವನ್ನು ತಡೆಯಲು ಸಾಧ್ಯವೆಂದು ಅಭಿಪ್ರಾಯಪಟ್ಟರು. ತೆಲಂಗಾಣ ಮತ್ತು ಆಂಧ್ರ ಭಾಗದ ಬಂಡವಾಳಶಾಹಿಗಳು ಈ ಹಣದಲ್ಲಿ ಕೊಡವರ ಭೂಮಿಯನ್ನು ದೊಡ್ಡ ಪ್ರಮಾಣದಲ್ಲಿ ಖರೀದಿಸುತ್ತಿದ್ದಾರೆ. ಕರ್ನಾಟಕ ಭೂಸುಧಾರಣಾ ಕಾಯ್ದೆ ತಿದ್ದುಪಡಿ 79ಎ, 79ಬಿ ದುರುಪಯೋಗವಾಗುತ್ತಿದೆ. ಕೊಡಗಿನಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಾರದಿದ್ದರೆ ಕೇರಳದ ವಯನಾಡಿನ ಮಾದರಿಯ ಘೋರ ದುರಂತ ಸಂಭವಿಸಬಹುದು ಎಂದು ಎನ್.ಯು.ನಾಚಪ್ಪ ಆತಂಕ ವ್ಯಕ್ತಪಡಿಸಿದರು. ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯಲ್ಲಿ ತೊಡಗಿರುವ ಉದ್ಯಮಪತಿ ಬಂಡವಾಳಶಾಹಿಗಳು ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸಮಾಜ ಸೇವೆಯ ಮುಖವಾಡ ತೊಟ್ಟು ಕೊಡುಗೆಗಳನ್ನು ನೀಡುತ್ತಿದ್ದಾರೆ. ಕಪ್ಪುಹಣವನ್ನು ಬಿಳಿ ಮಾಡುವುದಕ್ಕಾಗಿ ಕೊಡಗಿನ ಪ್ರಕೃತಿಯ ಮೇಲೆ ದಾಳಿ ನಡೆಸಿ ರೆಸಾರ್ಟ್, ವಿಲ್ಲಾ, ಟೌನ್ ಶಿಪ್ ಗಳ ನಿರ್ಮಾಣಕ್ಕಾಗಿ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ಮಾಡುತ್ತಿರುವ ಮಾಫಿಯಾಗಳು ಅರಣ್ಯ ಪ್ರದೇಶವನ್ನು ಕೂಡ ಒತ್ತುವರಿ ಮಾಡಿಕೊಳ್ಳುತ್ತಿವೆ. ಸರ್ಕಾರದ ಕೃಪಾಕಟಾಕ್ಷದಿಂದ ಸಾವಿರಾರು ಮರಗಳು ಹನನವಾಗುತ್ತಿವೆ, ಜಲನಾಳಗಳು ನಾಶವಾಗುತ್ತಿವೆ. ಭಾರೀ ಸ್ಫೋಟಕಗಳನ್ನು ಬಳಸಿ ಭೂಗರ್ಭಕ್ಕೆ ಹಾನಿ ಮಾಡಲಾಗುತ್ತಿದೆ. ಪ್ರಾಕೃತಿಕ ವಿಕೋಪದ ಅಪವಾದಗಳನ್ನು ಅಮಾಯಕ ಕೊಡವರ ಮೇಲೆ ಹಾಕಲಾಗುತ್ತಿದೆ. ಈ ಎಲ್ಲಾ ಅಕ್ರಮಗಳನ್ನು ಮುಚ್ಚಿಡುವ ಉದ್ದೇಶದಿಂದ ಬಂಡವಾಳಶಾಹಿಗಳು ಜಿಲ್ಲೆಯ ಜನರಿಗೆ ಆಮಿಷಗಳನ್ನೊಡ್ಡಿ ಸಮಾಜ ಸೇವೆಯ ನಾಟಕವಾಡುತ್ತಿದ್ದಾರೆ ಎಂದು ಆರೋಪಿಸಿದರು. ಮಾಫಿಯಾಗಳು ನೀಡುವ ಆಮಿಷಗಳನ್ನು ತಿರಸ್ಕರಿಸಿ ಭೂಅಕ್ರಮಗಳ ವಿರುದ್ಧ ಕೊಡವರು ಜಾಗೃತರಾಗದಿದ್ದಲ್ಲಿ ಕೊಡವ ಲ್ಯಾಂಡ್ ನ್ನು ಕಳೆದುಕೊಳ್ಳುವ ಹೀನಾಯ ಸ್ಥಿತಿ ಬರಬಹುದೆಂದು ಎನ್.ಯು.ನಾಚಪ್ಪ ಬೇಸರ ವ್ಯಕ್ತಪಡಿಸಿದರು. ಕೊಡವರು ನಡೆಸುತ್ತಿರುವ ಪರಿಸರ ಸ್ನೇಹಿ ಹೋಂಸ್ಟೇಗಳ ವಿರುದ್ಧ ರೆಸಾರ್ಟ್ ಮಾಫಿಯಾಗಳು ಸಂಚು ರೂಪಿಸುತ್ತಿವೆ. ಕೊಡವರು ಸಂಚರಿಸುವ ಸಾಂಪ್ರದಾಯಿಕ ರಸ್ತೆಗಳಿಗೆ ಬೇಲಿ ನಿರ್ಮಿಸಿ ಅಡ್ಡಿಪಡಿಸುತ್ತಿವೆ. ರೆಸಾರ್ಟ್ ಮಾಫಿಯಾಗಳಿಗೆ ಆಡಳಿತ ವ್ಯವಸ್ಥೆ ಬೆಂಬಲ ನೀಡುತ್ತಿದೆ. ಬಂಡವಾಳಶಾಹಿಗಳ ಬೃಹತ್ ಟೀ ಎಸ್ಟೇಟ್ ಗಳಿಗೆ ಕಾವೇರಿಯ ಉಪನದಿಗಳ ನೀರನ್ನು ಮಿತಿ ಇಲ್ಲದೆ ಬಳಸಲಾಗುತ್ತಿದೆ. ಆದರೆ ಕೊಡವರು ಅಲ್ಪಾವಧಿ ಬಳಸುವ ಅಲ್ಪ ಪ್ರಮಾಣದ ನೀರಿಗೆ ಕಡಿವಾಣ ಹಾಕಲಾಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಮಟ್ಟದ ಸಚಿವರು, ಮಾಜಿ ಸಚಿವರು, ಸಂಸದರು, ಮಾಜಿ ಸಂಸದರು, ಶಾಸಕರು, ಮಾಜಿ ಶಾಸಕರು ಕೊಡಗಿನಲ್ಲಿ ಬೃಹತ್ ಪ್ರಮಾಣದ ಭೂಮಿ ಹೊಂದಿದ್ದು, ಇವರುಗಳಿಂದಲೂ ಸಾವಿರಾರು ಮರಗಳು ಹನನವಾಗುತ್ತಿವೆ, ನೀರಿನ ಬಳಕೆಯಾಗುತ್ತಿದೆ. ಇವರುಗಳಿಗೆ ಯಾರಿಗೂ ಅನ್ವಯವಾಗದ ಕಾನೂನು ಕೊಡವರಿಗೆ ಮಾತ್ರ ಅನ್ವಯವಾಗುತ್ತಿದೆ ಎಂದು ಆರೋಪಿಸಿದರು. ವಯನಾಡಿನ ಸ್ಥಿತಿಯ ಭೂ ಕುಸಿತಕ್ಕೆ ಆಹ್ವಾನಿಸುವ ಜಲನಾಳಗಳನ್ನು ಕೊಂದು ಮರಗಿಡಗಳನ್ನು ಲೂಟಿ ಮಾಡಲು ಅನುವು ಮಾಡಿಕೊಡಲಾಗುತ್ತಿದೆ. ಆದರೆ ಪರಿಸರ ಸ್ನೇಹಿಯಾಗಿ ಸ್ಥಳೀಯ ಕೊಡವ ಸಂಸ್ಕೃತಿಯನ್ನು ಬಿಂಬಿಸುತ್ತ ಸ್ಥಳೀಯ ಅಡುಗೆಯನ್ನು ಅತಿಥಿಗಳಿಗೆ ಬಳಸುವ ಮೂಲಕ ಹೋಂಸ್ಟೇ ನಡೆಸುತ್ತಿರುವ ಸ್ಥಳೀಯರನ್ನು ಅವಮಾನಿಸಲಾಗುತ್ತಿದೆ. ಹಸಿರ ಪರಿಸರ, ಜಲಪ್ರದೇಶಗಳ ಸಂರಕ್ಷಣೆಗಾಗಿ ಸರ್ಕಾರ ಸೂಕ್ಷ್ಮ ಪರಿಸರ ವಲಯ ಮತ್ತು ವಿಶ್ವ ಪಾರಂಪರಿಕ ತಾಣ ಕಾನೂನನ್ನು ಜಾರಿಗೆ ತಂದಿದೆ. ಆದರೆ ಕೊಡಗಿನಲ್ಲಿ ಈ ಕಾನೂನು ಬಂಡವಾಳಶಾಹಿಗಳಿಗೆ ಅನ್ವಯವಾಗುತ್ತಿಲ್ಲ, ಬದಲಿಗೆ ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗದ ಮೇಲೆ ಹೇರಲಾಗುತ್ತಿದೆ ಎಂದು ಎನ್.ಯು.ನಾಚಪ್ಪ ಆರೋಪಿಸಿದ್ದಾರೆ. ಆದಿಮಸಂಜಾತ ಕೊಡವ ಬುಡಕಟ್ಟು ಜನರು ಇಲ್ಲಿಯವರೆಗೆ ಹಸಿರಿನ ಕೊಡವ ಭೂಮಿಯನ್ನು ಉಳಿಸಿ ಬೆಳೆಸಿಕೊಂಡು ಬಂದಿದ್ದಾರೆ. ಆದರೆ ಇಂದು ಭೂಮಾಫಿಯಾ, ರೆಸಾರ್ಟ್ ಮಾಫಿಯಾ, ವಿಲ್ಲಾ, ಟೌನ್ ಶಿಪ್, ಬೃಹತ್ ಭೂಪರಿವರ್ತನೆ, ಭೂವಿಲೇವಾರಿ ಮಾಫಿಯಾಗಳು ಹಾಗೂ ಕಪ್ಪುಹಣದ ಬಂಡವಾಳಶಾಹಿಗಳು ಕೊಡವಲ್ಯಾಂಡ್ ನ್ನು ನಾಶ ಮಾಡುತ್ತಿದ್ದಾರೆ ಮತ್ತು ಕೊಡವರನ್ನು ಬಲಿಪಶು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕೊಡವ ಲ್ಯಾಂಡ್ ನ್ನು ಉಳಿಸಿಕೊಳ್ಳುವುದಕ್ಕಾಗಿ ಸಿಎನ್‌ಸಿ ಸಂಘಟನೆ ಭೂಮಾಫಿಯಾ, ರೆಸಾರ್ಟ್ ಮಾಫಿಯಾ, ವಿಲ್ಲಾ, ಟೌನ್ ಶಿಪ್ ಗಳ ನಿರ್ಮಾಣ, ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ವಿರುದ್ಧ ಹೋರಾಟವನ್ನು ನಡೆಸುತ್ತಿದೆ. ಆದರೆ ಅಧಿಕಾರದಲ್ಲಿರುವವರು ಹೋರಾಟದ ದಿಕ್ಕು ತಪ್ಪಿಸಿ ಜನರಲ್ಲಿ ಗೊಂದಲ ಸೃಷ್ಟಿಸುವ ಕಾರ್ಯಕ್ಕೆ ಮುಂದಾಗಿದ್ದು, ಹೋಂಸ್ಟೇ ಮತ್ತು ಗೋದಾಮುಗಳ ನಿರ್ಮಾಣಕ್ಕೆ ಅನುಮತಿ ನೀಡದೆ ಸತಾಯಿಸಲು ಆರಂಭಿಸಿದ್ದಾರೆ. ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗದ ಮಾತೃಭೂಮಿ ಕೊಡವಲ್ಯಾಂಡ್ ಗೆ ಸಂಚಕಾರವಾಗಬಲ್ಲ ಬೃಹತ್ ಭೂಪರಿವರ್ತನೆಗೆ ಮಾತ್ರ ಗುಪ್ತವಾಗಿ ಅನುಮತಿ ನೀಡುತ್ತಿದ್ದಾರೆ. ಆದಿಮಸಂಜಾತ ಕೊಡವರ ಹಕ್ಕುಗಳನ್ನು ರಕ್ಷಿಸಲು “ಕೊಡವ ಲ್ಯಾಂಡ್” ಸ್ವಯಂ ನಿರ್ಣಯದ ಭೂರಾಜಕೀಯ ಸ್ವಾಯತ್ತತೆ ಘೋಷಣೆ ಮತ್ತು ಕೊಡವರಿಗೆ ಎಸ್ ಟಿ ಟ್ಯಾಗ್ ನೀಡುವುದು ಅಗತ್ಯವಾಗಿದೆ. ಇದಕ್ಕಾಗಿ ವ್ಯಾಪಕ ಜನಜಾಗೃತಿ ಮತ್ತು ಜಿಲ್ಲೆಯಾದ್ಯಂತ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು. ಜನಜಾಗೃತಿ ಮಾನವ ಸರಪಳಿಯಲ್ಲಿ ಪಾಲ್ಗೊಂಡಿದ್ದ ಸಿಎನ್‌ಸಿ ಪ್ರಮುಖರು ಹಾಗೂ ಗ್ರಾಮಸ್ಥರು ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ವಿರುದ್ಧ ನಿರ್ಣಯ ಕೈಗೊಂಡು ಪ್ರತಿಜ್ಞಾವಿಧಿ ಸ್ವೀಕರಿಸಿದರು.
::: ವಿವಿಧೆಡೆ ಜನಜಾಗೃತಿ :::
ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ವಿರುದ್ಧ ಅ.9ರಂದು ಅಮ್ಮತ್ತಿ, ನಂತರದ ದಿನಗಳಲ್ಲಿ ಭಾಗಮಂಡಲ ಹಾಗೂ ಮಡಿಕೇರಿಯಲ್ಲಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ಎನ್.ಯು.ನಾಚಪ್ಪ ಇದೇ ಸಂದರ್ಭ ತಿಳಿಸಿದರು. ಮಾಂಗೇರ ಪದ್ಮಿನಿ, ಚಿಂಡಮಾಡ ಸರಿತಾ, ಕೂತಂಡ ವಾಣಿ, ಬೋಳ್ತಂಡ ಮೀನಾ, ಕಳ್ಳಿಚಂಡ ಪವಿತ, ಗಾಂಡಂಗಡ ಸುಂದರಿ, ಕೊಚ್ಚೆರ ಸ್ವಾತಿ, ಪಾಲೆಂಗಡ ಗಂಗಮ್ಮ, ಪಾಲೆಂಗಡ ತಂಗಮ್ಮ, ಪಾಲೆಂಗಡ ಶಮ್ಮಿ, ಮನೆಯಪಂಡ ಮನು, ಚೆಕ್ಕೇರ ಕೃತಿಕಾ, ಮದ್ರೀರ ಕೃತಿಕಾ, ಮದ್ರೀರ ಲೀನಾ, ಕೊಚ್ಚೆರ ಚಿತ್ರ, ಪಾಲೆಂಗಡ ಮನು ನಂಜಪ್ಪ, ಚೆಪ್ಪುಡಿರ ಕಾರ್ಯಪ್ಪ, ಬೊಳ್ಳಿಮಾಡ ವಸಂತ ನಂಜಪ್ಪ, ಚೆಪ್ಪುಡಿರ ಮಾಚು, ಬೋಳ್ತಂಡ ಪ್ರಕಾಶ್, ಮಾಂಗೇರ ಪೊನ್ನಪ್ಪ, ಚೆಪ್ಪುಡಿರ ಬೋಪಣ್ಣ, ಚೆಪ್ಪುಡಿರ ರಾಮಕೃಷ್ಣ, ಚೆಪ್ಪುಡಿರ ಸೋಮಯ್ಯ, ಗುಂಬೀರ ಪ್ರಕಾಶ್, ಮದ್ರೀರ ಉಮೇಶ್, ಮದ್ರೀರ ಭವಿನ್ ಬೋಪಯ್ಯ, ಮನೆಯಪಂಡ ಬೋಪಣ್ಣ, ಮನೆಯಪಂಡ ಮಹೇಶ್, ಕೊಣಿಯಂಡ ಸಂಜು, ಕೊಕ್ಕಂಡ ದಿನೇಶ್, ಮನೆಯಪಂಡ ಮೊಣ್ಣಪ್ಪ, ಗಾಂಡಂಗಡ ಡಾಲು, ಗಾಂಡಂಗಡ ಕುಟ್ಟಪ್ಪ, ಚೆಕ್ಕೇರ ತಮ್ಮಯ್ಯ, ಮನೆಯಪಂಡ ಅಯ್ಯಪ್ಪ, ಕಮೊಡರ್ ಚೆಕ್ಕೇರ ಬೆಳ್ಯಪ್ಪ, ಮನೆಯಪಂಡ ಭೀಮಯ್ಯ, ಚಿಂಡಮಾಡ ಬಿದ್ದಪ, ಮನೆಯಪಂಡ ರತ್ನ, ಕಳ್ಳಿಚಂಡ ಅಶ್ವಥ್, ಸಣ್ಣುವಂಡ ಜಯ, ಮದ್ರೀರ ರಂಜು ಚೆಂಗಪ್ಪ, ಚೆಪ್ಪುಡಿರ ರಂಜಿ, ಕಿರಿಯಮಾಡ ಶೆರಿನ್, ಮೂಕೊಂಡ ದಿಲೀಪ್, ಅಜ್ಜಿಕುಟ್ಟಿರ ಲೋಕೇಶ್, ಚಂಬ0ಡ ಜನತ್, ಚಟ್ಟಂಗಡ ಸಜನ್ ಸೋಮಣ್ಣ, ಮದ್ರೀರ ತಾಲಿನ್ ತಿಮ್ಮಯ್ಯ, ಪಾರ್ವಂಗಡ ಮುತ್ತಣ್ಣ, ಗಾಂಡ0ಗಡ ಗಣಪತಿ, ಸಣ್ಣುವಂಡ ಮುತ್ತಪ್ಪ, ಸಣ್ಣುವಂಡ ಮಂದಣ್ಣ, ಗಾಂಡಂಗಡ ಡಿಕ್ಸ್, ಕಾಯಪಂಡ ಕಾವೇರಪ್ಪ, ಮಾಣಿಪಂಡ ರಾಮು ನಂಜಪ್ಪ, ಕಾಣತಂಡ ನವೀನ್, ಮುಕ್ಕಾಟಿರ ಸೋಮಯ್ಯ, ಮದ್ರೀರ ಚೋಟು, ಪಾರ್ವಂಗಡ ಸುಗುಣ ಪೊನ್ನಪ್ಪ, ಚೇಂದ್ರಿಮಾಡ ಕಿಶನ್ ಚೆಂಗಪ್ಪ, ಚೆಪ್ಪುಡಿರ ಕಿರಣ್, ನಾಯಕಂಡ ರಮೇಶ್ ಪಾಲ್ಗೊಂಡಿದ್ದರು.