ಮಡಿಕೇರಿ NEWS DESK ಅ.6 : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದ ಪ್ರಯುಕ್ತ ಆಯೋಜಿಸಲಾಗಿರುವ ಕಾಫಿ ದಸರಾವನ್ನು ಕೃಷಿ ಸಚಿವ ಚೆಲುವರಾಯ ಸ್ವಾಮಿ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು. ಕಾಫಿ ದಸರಾಕ್ಕೆ ಕಾಫಿ ಮಂಡಳಿ, ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್, ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ಸೇರಿದಂತೆ ಕಾಫಿ ವಲಯದಿಂದ ಉತ್ತಮ ಸ್ಪಂದನ ದೊರಕಿದೆ. ಈಗಾಗಲೇ 32 ಮಳಿಗೆಗಳು ಭರ್ತಿಯಾಗಿದ್ದು, ಕಾಫಿ, ಹೈನುಗಾರಿಕೆ, ಬಿದಿರು, ತೋಟಗಾರಿಕಾ ಬೆಳೆಗಳು, ಯಂತ್ರೋಪಕರಣಗಳಿಗೆ ಸಂಬAಧಿಸಿದAತೆ ಸಮಗ್ರ ಮಾಹಿತಿ ಈ ಮಳಿಗೆಗಳಲ್ಲಿ ದೊರಕಲಿದೆ. ತೋಟಗಾರಿಕಾ ಇಲಾಖೆ, ಕೃಷಿ ಇಲಾಖೆ, ಮೀನುಗಾರಿಕಾ ಇಲಾಖೆ, ಪಶುಪಾಲನಾ ಇಲಾಖೆ, ಚೆಟ್ಟಳ್ಳಿಯ ತೋಟಗಾರಿಕಾ ಸಂಶೋಧನಾ ಕೇಂದ್ರ ಸೇರಿದಂತೆ ವಿವಿಧ ಇಲಾಖೆಗಳು ಕೈಜೋಡಿಸಿವೆ. ಕಾಫಿ ದಸರಾದಲ್ಲಿ 6 ಮತ್ತು 7 ರಂದು ಬೆಳಗ್ಗೆ 10 ಗಂಟೆಯಿAದ ಸಂಜೆ 5 ಗಂಟೆಯವರೆಗೆ ಮಳಿಗೆಗಳು ತೆರೆದಿರುತ್ತವೆ.