ಕುಶಾಲನಗರ NEWS DESK ಅ.6 : ಮಕ್ಕಳು ಪೋಷಕರಿಗೆ ಹಾಗೂ ಗುರು ಹಿರಿಯರಿಗೆ ಗೌರವ ನೀಡುವ ಸಂಸ್ಕೃತಿಯನ್ನು ಮೈಗೂಡಿಸಿಕೊಂಡು ದೇಶದ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಕರೆ ನೀಡಿದ್ದಾರೆ. ಕುಶಾಲನಗರದ ಕೇರಳ ಸಮಾಜದ ವತಿಯಿಂದ ನಡೆದ ಓಣಂ ಆಚರಣೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹಿಂದೂ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಓಣಂ ಆಚರಣೆ ಸುಂದರವಾದ ಆಚರಣೆ. ಮಲೆಯಾಳಿ ಸಮಾಜ ಕೇರಳದ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಕಾರ್ಯದಲ್ಲಿ ತೊಡಗಿರುವುದು ಶ್ಲಾಘನೀಯ ಎಂದು ಹೇಳಿದರು. ಹಿಂದೂ ಮಲೆಯಾಳಿ ಸಮಾಜದ ಕೊಡಗು ಜಿಲ್ಲಾಧ್ಯಕ್ಷ ವಿ.ಎಂ.ವಿಜಯ ಮಾತನಾಡಿ ಹಿಂದೂ ಸಂಸ್ಕೃತಿ, ಸಂಪ್ರದಾಯವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದರು. ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಲಕ್ಷಿö್ಮ ಚಂದ್ರು, ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರುಕ್ಮಿಣಿ ಮುರುಳಿ, ಮಡಿಕೇರಿ ಎಸ್‌ಎನ್‌ಡಿ ಪಿ ಅಧ್ಯಕ್ಷ ಹರೀಶ್ ಕುಮಾರ್, ವಾಸು, ಕೇರಳ ಸಮಾಜದ ಉಪಾಧ್ಯಕ್ಷ ಕೆ.ಬಾಬು, ಕಾರ್ಯದರ್ಶಿ ರಾಬಿನ್, ನಿರ್ದೇಶಕರಾದ ರಾಯ್, ಎಂ.ಜೆ.ಪ್ರಕಾಶ್, ಸುಶೀಲಾ, ಎಂ.ಎಸ್.ಶಾಂತಿ, ಆನಂದ್, ರಂಜಿತ್ ಕುಮಾರ್, ಧನರಾಜ್, ಅಜಿತ ಧನರಾಜ್ ಇದ್ದರು. ಕಾರ್ಯಕ್ರಮಕ್ಕೂ ಮೊದಲು ಕೇರಳ ಸಮಾಜದ ಸ್ಥಾಪಕಾಧ್ಯಕ್ಷ ಕೆ.ಶಿವಾನಂದನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಓಣಂ ಸದ್ಯಕ್ಕೆ ಧನಸಹಾಯ ಮಾಡಿದ ದಾನಿಗಳು ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಶ್ರೀಷಾ ಪ್ರೀತಂ ನಿರೂಪಿಸಿ, ಶ್ರೀಜಾ ಪ್ರಾರ್ಥಿಸಿ, ಕೆ.ವರದ ಸ್ವಾಗತಿಸಿದರು. ಮಾವೇಲಿ ವೇಷಧಾರಿಯಾಗಿ ಕಣ್ಣೂರಿನ ರಾರೀಶ್ ಗಮನ ಸೆಳೆದರು.