ಮಡಿಕೇರಿ ಅ.7 NEWS DESK : ನಗರದ ನಾಲ್ಕು ಶಕ್ತಿ ದೇವಾಲಯಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಾಲಯ ದಸರಾ ಮಂಟಪ ಸಮಿತಿಯ 94ನೇ ವರ್ಷದ ದಸರಾ ಉತ್ಸವಕ್ಕೆ ಸಜ್ಜಾಗುತ್ತದೆ ಎಂದು ಸಮಿತಿಯ ಅಧ್ಯಕ್ಷ ಬಿ.ಎಂ.ರಮೇಶ್ ತಿಳಿಸಿದ್ದಾರೆ. ಎರಡು ಟ್ರ್ಯಾಕ್ಟರ್‌ಗಳನ್ನು ಬಳಸಲಾಗುತ್ತಿದ್ದು, ಕೌಶಿಕೆ ಮಹಾತ್ಮೆ ಕಥಾ ಸಾರಾಂಶವನ್ನು ಮಂಟಪದಲ್ಲಿ ಅಳವಡಿಸಲಾಗುತ್ತಿದೆ. ದಿಂಡಿಗಲ್‍ನ ಜೆಮ್ಸ್ ಲೈಟಿಂಗ್ ಬೋರ್ಡ್ ಅಳವಡಿಸಿದ್ದು, ಸಮಿತಿ ಸದಸ್ಯರೇ ಪ್ಲಾಟ್‍ಫಾರಂ ನಿರ್ಮಿಸಲಿದ್ದಾರೆ. ಧ್ವನಿವರ್ಧಕ ಹಾಗೂ ಸ್ಟುಡಿಯೋ ವ್ಯವಸ್ಥೆಯನ್ನು ಮಡಿಕೇರಿಯ ಶಿವು ಇವೆಂಟ್ ಮ್ಯಾನೆಜ್‍ಮೆಂಟ್‍ನವರು ಒದಗಿಸಲಿದ್ದಾರೆ. 21 ಕಲಾಕೃತಿಗಳನ್ನು ಬಳಸಲಾಗುತ್ತಿದ್ದು, ಕಲಾಕೃತಿಗಳ ರಚನೆ ಹಾಗೂ ಟ್ರ್ಯಾಕ್ಟರ್ ಸೆಟ್ಟಿಂಗ್ಸ್‍ನ್ನು ಮಡಿಕೇರಿಯ ಆನಂದ್ ಆಟ್ರ್ಸ್‍ನವರು ಮಾಡಲಿದ್ದಾರೆ. ಮಡಿಕೇರಿಯ ಅಶ್ರಫ್ ಹಾಗೂ ಪ್ರಕಾಶ್ ಸ್ಪೆಷಲ್ ಎಫೆಕ್ಟ್ ನೀಡಲಿದ್ದಾರೆ. ಮಡಿಕೇರಿ ಓಜೋನ್ ಫ್ಯಾಬ್‍ನ ದಿನೇಶ್ ನಾಯರ್ ತಂಡ ಕಲಾಕೃತಿಗಳಿಗೆ ಚಲನವಲನ ನೀಡಲಿದೆ. ಒಟ್ಟು 27 ಲಕ್ಷ ವೆಚ್ಚದಲ್ಲಿ ಮಂಟಪವನ್ನು ಹೊರತರಲಾಗುತ್ತಿದ್ದು, ಜನಾಕರ್ಷಣೆ ಪಡೆಯುವುದರೊಂದಿಗೆ ಬಹುಮಾನಕ್ಕೂ ಪೈಪೋಟಿ ನೀಡಲಾಗವುದು ಎಂದು ರಮೇಶ್ ಮಾಹಿತಿ ನೀಡಿದರು.