


ಮಡಿಕೇರಿ ಅ.8 NEWS DESK : ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಕೃಷಿ-ತೋಟಗಾರಿಕೆ ಮೇಳವು ಅ.18 ರಿಂದ 21 ರವರೆಗೆ ಪ್ರತಿದಿನ ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಶಿವಮೊಗ್ಗದ ನವಿಲೆ ಕೃಷಿ ಮಹಾವಿದ್ಯಾಲಯದಲ್ಲಿ ನಡೆಯಲಿದೆ.