ಸಿದ್ದಾಪುರ ಅ.8 NEWS DESK : ನವಪಲ್ಲವ ಸಾಹಿತ್ಯ ವೇದಿಕೆ ಹಾಗೂ ನೆಲ್ಲಿಹುದಿಕೇರಿ ಕೆ.ಪಿ.ಎಸ್ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಲೇಖಕಿ ಎಂ.ಬಿ.ಜಯಲಕ್ಷ್ಮಿ ವಸಂತ್ ಹೊಸಮನೆ ಅವರು ರಚಿಸಿರುವ “ಸಾಂಚವ್ಯ” ಕವನ ಸಂಕಲನವನ್ನು ಬಿಡುಗಡೆಗೊಳಿಸಲಾಯಿತು. ನೆಲ್ಲಿಹುದಿಕೇರಿ ಪ್ರೌಢ ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ ದಾಸ್ ಪುಸ್ತಕ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಮಡಿಕೇರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೋರನ ಸರಸ್ವತಿ ಪ್ರಕಾಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜನಶಕ್ತಿ ವಾರಪತ್ರಿಕೆಯ ಸಂಪಾದಕ ಡಾ.ಎಸ್.ವೈ.ಗುರುಶಾಂತ ಪುಸ್ತಕ ಪರಿಚಯ ಮಾಡಿದರು. ಮುಖ್ಯ ಅತಿಥಿಗಳಾಗಿ ಕುಶಾಲನಗರ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಕೊಡಗು ಸಾಹಿತ್ಯ ಪರಿಷತ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೇಶವ ಕಾಮತ್, ಸೋಮವಾರಪೇಟೆ ನಿವೃತ್ತ ಉಪನ್ಯಾಸಕಿ ತಿಲೋತ್ತಮೆ ನಂದಕುಮಾರ್, ಕನ್ನಡ ಸಾಹಿತ್ಯ ಪರಿಷತ್ ನಿಕಟ ಪೂರ್ವ ಅಧ್ಯಕ್ಷ ಲೋಕೇಶ್ ಸಾಗರ್, ಗೋಣಿಕೊಪ್ಪಲಿನ ಸಂಗನಗೌಡ ಪಾಟೀಲ್ ಪಾಲ್ಗೊಂಡಿದ್ದರು. ವಸಂತ್ ಕುಮಾರ್ ಹೊಸಮನೆ ಸ್ವಾಗತಿಸಿ, ರಿಜಾ ಶ್ಯಾನ್, ಆಶಾ ನಿರೂಪಿಸಿ, ಸಾನಿಧ್ಯ ಹೊಸಮನೆ ವಂದಿಸಿದರು.
Breaking News
- *ಕೊಡಗಿನ ಆದಿವಾಸಿಗಳ ಸಮಸ್ಯೆಗಳನ್ನು ಆಲಿಸಿದ ಮುಖ್ಯಮಂತ್ರಿ : ಅಧಿಕಾರಿಗಳಿಗೆ 2 ತಿಂಗಳ ಗಡುವು*
- *ಸಿಎನ್‌ಸಿಯಿಂದ “ಕೊಡವ ನ್ಯಾಷನಲ್ ಡೇ” ಮತ್ತು ಸಂವಿಧಾನ ದಿನಾಚರಣೆ : 9 ಪ್ರಮುಖ ನಿರ್ಣಯಗಳ ಮಂಡನೆ*
- *ಮಡಿಕೇರಿ : ನ.27 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
- *ಮಡಿಕೇರಿಯಲ್ಲಿ ಮಕ್ಕಳ ದಿನಾಚರಣೆ : ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸಿ : ಸಿವಿಲ್ ನ್ಯಾಯಾಧೀಶೆ ಶುಭ*
- *ವಿರಾಜಪೇಟೆಯಲ್ಲಿ ನ.27 ರಂದು ಕಾವೇರಿ ಕಾರ್ನಿವಾಲ್ ಫೆಸ್ಟ್*
- *ಚೆಟ್ಟಳ್ಳಿ ಗ್ರಾ.ಪಂ ಉಪಚುನಾವಣೆ : ಅಯ್ಯಂಡ್ರ ಭಾಗೀರಥಿ ಗೆಲುವು*
- *ಸಹಕಾರ ತರಬೇತಿ (ಡಿಸಿಎಂ)ಗೆ ಅರ್ಜಿ ಆಹ್ವಾನ*
- *ತ್ಯಾಗರಾಜ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ : ಪರಿಸರರೊಂದಿಗೆ ಮಕ್ಕಳು ಬೆಳೆಯಬೇಕು : ಗೀತಾ ಗಿರೀಶ್*
- *ಮಡಿಕೇರಿಯಲ್ಲಿ ಸಂವಿಧಾನ ದಿನಾಚರಣೆ : ರಾಷ್ಟ್ರದ ಅಭಿವೃದ್ಧಿಗೆ ಸಂವಿಧಾನ ಪಾತ್ರ ಪ್ರಮುಖ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ*
- *ಪುತ್ತೂರು : ವಿಸಿಇಟಿಯಲ್ಲಿ ಮಂಗಳೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾವಳಿ*