ನಾಪೋಕ್ಲು ಅ.10 NEWS DESK : ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಸಮಾಜ ವಿಜ್ಞಾನದ ಪ್ರಶ್ನೆ ಪತ್ರಿಕೆಯ ವಿನ್ಯಾಸದ ಸ್ವರೂಪದ ಬದಲಾವಣೆ ಮಾಡುವಂತೆ ಕೊಡಗು ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ರಂಗಧಾಮಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು. ಸಮಾಜ ವಿಜ್ಞಾನದ ಜಿಲ್ಲಾ ಸಂಚಾಲಕ ಎಸ್.ಪಿ ಪರಮೇಶ್, ಮಾತನಾಡಿ, ಕಲಿಕೆಯಲ್ಲಿ ಸರಾಸರಿ ಮಟ್ಟಕ್ಕಿಂತಲೂ ಕೆಳಗಿರುವ ವಿದ್ಯಾರ್ಥಿಗಳು ಸುಲಭವಾಗಿ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗುವಂತೆ ವಿದ್ಯಾರ್ಥಿ ಸ್ನೇಹಿತ ಪತ್ರಿಕೆ ರೂಪಿಸುವಂತೆ ಮನವಿ ಮಾಡಿದರು. 10ನೇ ತರಗತಿ ವಿದ್ಯಾರ್ಥಿಗಳಿಗೆ ಅಖಿಲ ಪ್ರಶ್ನೆ ಪತ್ರಿಕೆಯನ್ನು ರೂಪಿಸಲಾಗುತ್ತಿದೆ. ಎಸ್‍ಎಸ್‍ಎಲ್‍ಸಿ ಸಮಾಜ ವಿಜ್ಞಾನ ವಿಜ್ಞಾನ, ಗಣಿತ ವಿಷಯಗಳಲ್ಲಿ ಕ್ಲಿಷ್ಟಕರ ಪ್ರಶ್ನೆಗಳನ್ನು ನೀಡಲಾಗುತ್ತಿದೆ ಇದರಿಂದ ಮುತ್ತಿನತೆ ಪ್ರಮಾಣ ಕಡಿಮೆಯಾಗುತ್ತಿದೆ ಎಂದರು. ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ ಪಲಿತಾಂಶ ಸುಧಾರಣೆಗಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಈಚೆಗೆ ವಿಷಯ ಶಿಕ್ಷಕರ ಸಭೆಯಲ್ಲಿ ಚರ್ಚಿಸಲಾಗಿದೆ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಪ್ರಶ್ನೆ ಪತ್ರಿಕೆಗಳನ್ನು ಸಮಗ್ರವಾಗಿ ಅವಲೋಕಿಸಿದ್ದು, ಪ್ರಶ್ನೆಗಳ ವಿನ್ಯಾಸದ ಗಮನಹರ ವ್ಯತ್ಯಾಸ ಕಂಡುಬಂದಿದೆ. ಇದನ್ನು ಸರಿಪಡಿಸುವ ಅಗತ್ಯವಿದೆ. ರಾಜ್ಯಮಟ್ಟದ ವೇದಿಕೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದ್ದು ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಸಂಬಂಧಪಟ್ಟಂತೆ 23 ಅಂಶಗಳ ಸಲಹೆಯನ್ನು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿಗೆ ನೀಡಲಾಗಿದೆ ಎಂದರು. ಈ ಸಂದರ್ಭದಲ್ಲಿ ಸೋಮವಾರಪೇಟೆ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ, ಕೊಡಗು ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ಹೆಚ್.ಜಿ.ಕುಮಾರ್, ಸಮಾಜ ವಿಜ್ಞಾನದ ಜಿಲ್ಲಾ ಪ್ರಮುಖರಾದ ಸುರೇಶ್, ಶಿಕ್ಷಕರಾದ ಹ್ಯೂಬರ್ಟ್ ಉಪಸ್ಥಿತರಿದ್ದರು.
ವರದಿ : ದುಗ್ಗಳ ಸದಾನಂದ.