ಮಡಿಕೇರಿ ಅ.10 NEWS DESK : ಪೊನ್ನಂಪೇಟೆ ಸಮೀಪದ ಹಳ್ಳಿಗಟ್ಟು ಶ್ರೀ ಭದ್ರಕಾಳಿ ದೇವಾಲಯದಲ್ಲಿ ನಡೆಯುತ್ತಿರುವ “ಶ್ರೀ ದುರ್ಗಾ ನಮಸ್ಕಾರ ಪೂಜೆ” ನವರಾತ್ರಿ ಉತ್ಸವದ ಕೊನೆಯ ದಿನವಾದ ಅ.12 ರಂದು ಸಂಪನ್ನಗೊಳ್ಳಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಊರಿನ ತಕ್ಕ ಮುಖ್ಯಸ್ಥರು ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ, ಭದ್ರಕಾಳಿ ಹಾಗೂ ಮಾರಮ್ಮ ದೇವರ ಅಭಿವೃದ್ಧಿ ಸಮಿತಿ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಹಳ್ಳಿಗಟ್ಟು ಶ್ರೀ ಭದ್ರಕಾಳಿ ದೇವಸ್ಥಾನದಲ್ಲಿ ಅ.3ರಿಂದ ಪ್ರತಿದಿನ ರಾತ್ರಿ ಸಾಮೂಹಿಕ ದುರ್ಗಾ ನಮಸ್ಕಾರ ಪೂಜೆ ನಡೆಯುತ್ತಿದ್ದು, ಅ.11 ರಂದುಸಂಜೆ 4 ಗಂಟೆಗೆ ಆಯುಧ ಪೂಜೆ ಸಲುವಾಗಿ ಸಾಮೂಹಿಕ ವಾಹನ ಪೂಜೆ ನಡೆಯಲಿದೆ. ಸಂಜೆ 7 ಗಂಟೆಗೆ ನವ ರಾತ್ರಿಯ ಪೂಜೆ ಸಂಪನ್ನಗೊಳ್ಳಲಿದೆ. ವಿಜಯ ದಶಮಿಯ ದಿನವಾದ ಅ.12 ರಂದು ಬೆಳಿಗ್ಗೆಯಿಂದಲೇ ವಿವಿಧ ಪೂಜಾ ವಿಧಿ ವಿಧಾನಗಳು ನಡೆಯಲಿದೆ. ಬೆಳಿಗ್ಗೆ 7 ಗಂಟೆಗೆ “ಗಣಪತಿ ಹೋಮ”, 10.30 ಗಂಟೆಗೆ ಶ್ರೀ ಭದ್ರಕಾಳಿ ದೇವರ ದರ್ಶನದ, ಬಳಿಕ ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗದ ನಂತರ ಸಾಮೂಹಿಕ ಅನ್ನಸಂತರ್ಪಣೆ ಕಾರ್ಯ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರ ಜೊತೆಗೆ ವಸ್ತ್ರ ಸಂಹಿತೆಯನ್ನು ಪಾಲನೆ ಮಾಡಬೇಕಿದೆ ಎಂದು ಮನವಿ ಮಾಡಿದರು. ಪೂಜೆಯ ಬಗ್ಗೆ ಹೆಚ್ಚಿನ ಮಾಹಿತಿಗೆ 9880967573, 9483815430 ಅಥವಾ ಅರ್ಚಕರು-94499 47810 ನ್ನು ಸಂಪರ್ಕಿಸಬಹುದಾಗಿದೆ ಎಂದು ಚಮ್ಮಟೀರ ಪ್ರವೀಣ್ ಉತ್ತಪ್ಪ ತಿಳಿಸಿದ್ದಾರೆ.