ಮಡಿಕೇರಿ NEWS DESK ಅ.11 : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಗರದ ವಿವಿಧ ದೇವಾಲಯಗಳಿಗೆ ಶುಕ್ರವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಾಡಿನಲ್ಲೆಡೆ ಆಯುಧ ಪೂಜೆ ಸಲ್ಲಿಸಲಾಗುತ್ತಿದೆ. ಹಾಗೆಯೇ ವಿಜಯದಶಮಿ ದಿನಾಚರಣೆ ಇದೆ. ನಾಡಿನ ಎಲ್ಲೆಡೆ ದಸರಾ ಹಬ್ಬವನ್ನು ವಿಶೇಷವಾಗಿ ಆಚರಿಸಲಾಗುತ್ತಿದ್ದು, ತಾಯಿ ಕಾವೇರಿ ಮಾತೆ ಎಲ್ಲರಿಗೂ ಸಮೃದ್ಧಿ ತರುವಂತಾಗಲಿ ಎಂದು ಉಪ ಮುಖ್ಯಮಂತ್ರಿ ಅವರು ಪ್ರಾರ್ಥಿಸಿದರು. ನಾಡಿನಲ್ಲಿ ಹಿಂದಿನಿಂದಲೂ ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ, ಬೆಳೆಸಿಕೊಂಡು ಬರಲಾಗಿದೆ. ದಸರಾ ಹಬ್ಬವನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ. ಈ ಬಾರಿ ಉತ್ತಮ ಮಳೆ, ಬೆಳೆಯಾಗಿದ್ದು ಎಲ್ಲರಲ್ಲಿ ಸಂತಸ ತಂದಿದೆ ಎಂದು ಉಪ ಮುಖ್ಯಮಂತ್ರಿ ಅವರು ಹೇಳಿದರು. ನಗರದ ಶಕ್ತಿ ದೇವತೆಗಳಾದ ಕುಂದೂರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ, ದಂಡಿನ ಮಾರಿಯಮ್ಮ, ಕೋಟೆ ಮಾರಿಯಮ್ಮ, ಕಂಚಿ ಕಾಮಾಕ್ಷಿ, ಶ್ರೀ ಕೋಟೆ ಗಣಪತಿ, ಪೇಟೆ ಶ್ರೀ ರಾಮಮಂದಿರ, ಶ್ರೀ ಕೊದಂಡರಾಮ ದೇವಾಲಯ, ಶ್ರೀ ಮುತ್ತಪ್ಪ ದೇವಾಲಯ, ಕರವಾಲೇ ಭಗವತಿ ದೇವಾಲಯ, ಶ್ರೀ ಚೌಡೇಶ್ವರಿ ದೇವಾಲಯ, ವಿಜಯ ವಿನಾಯಕ, ದೇಚೂರು ಶ್ರೀರಾಮ ಮಂದಿರ ಹೀಗೆ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಆಯಾ ದೇವಾಲಯದ ಬಳಿ ತೆರಳಿ ದಶಮಂಟಪ ಸಮಿತಿಗಳ ಪದಾಧಿಕಾರಿಗಳೊಂದಿಗೆ ಚರ್ಚಿಸಿದ ಡಿ.ಕೆ.ಶಿವಕುಮಾರ್ ಅವರು, ಶೋಭಾಯಾತ್ರೆಯ ಯಶಸ್ಸಿಗೆ ಪ್ರೋತ್ಸಾಹದ ಮಾತುಗಳನ್ನಾಡಿದರು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಶಾಸಕರಾದ ಡಾ.ಮಂತರ್ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್, ಡಿವೈಎಸ್ಪಿ ಮಹೇಶ್ ಕುಮಾರ್, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ದಸರಾ ಸಮಿತಿ ಕಾರ್ಯಧ್ಯಕ್ಷರಾದ ಪ್ರಕಾಶ್ ಆಚಾರ್ಯ, ದಶಮಂಟಪ ಸಮಿತಿ ಅಧ್ಯಕ್ಷರಾದ ಜಗದೀಶ್, ಪ್ರಮುಖರಾದ ಟಿ.ಪಿ.ರಮೇಶ್, ಕೆ.ಪಿ.ಚಂದ್ರಕಲಾ, ಎಚ್.ಎಸ್.ಚಂದ್ರಮೌಳಿ ಇತರರು ಇದ್ದರು.