
ಬಳ್ಳಾರಿ ಅ.14 NEWS DESK : ಸಂಡೂರು ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ನಿಮಿತ್ತ ಬಳ್ಳಾರಿ ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಾರಿಹಳ್ಳ ಕಿರು ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹ್ಮದ್ ಖಾನ್, ಕಾರ್ಮಿಕ ಸಚಿವರಾದ ಸಂತೋಷ್ ಎಸ್. ಲಾಡ್, ಶಾಸಕರಾದ ಶ್ರೀನಿವಾಸ್, ಕಂಪ್ಲಿ ಗಣೇಶ್, ಲತಾ ಮಲ್ಲಿಕಾರ್ಜುನ್, ಸಂಸದರಾದ ಈ.ತುಕಾರಾಂ ಸೇರಿ ಹಲವು ಗಣ್ಯರು ಹಾಜರಿದ್ದರು. ಸಂಡೂರು ತಾಲೂಕಿನ ನಾರಿಹಳ್ಳ ಕಿರು ಜಲಾಶಯವು 0.810 ಟಿಎಂಸಿ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿದ್ದು, 615 ಕಿ.ಮೀ. ವಿಸ್ತೀರ್ಣ ಇದೆ. ಈ ಜಲಾಶಯ ಸಂಡೂರಿನ 20 ಗ್ರಾಮಗಳಿಗೆ ಕುಡಿಯುವ ನೀರಿಗೆ ಆಸರೆಯಾಗಿದೆ.










