ಸೋಮವಾರಪೇಟೆ ಅ.15 NEWS DESK : ಸಮಾಜದಲ್ಲಿ ನಕಾರಾತ್ಮಕ ಭಾವನೆಗಳು ಮಿತಿಮೀರಿ ಬೆಳೆಯುತ್ತಿರುವುದರಿಂದ ಜೀವನದಲ್ಲಿ ಅನಾರೋಗ್ಯ ಹೆಚ್ಚುತ್ತಿದೆ ಎಂದು ಶಾಸಕ ಡಾ.ಮಂತರ್‍ಗೌಡ ಅಭಿಪ್ರಾಯಿಸಿದರು. ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ವತಿಯಿಂದ ನವರಾತ್ರಿ ಪ್ರಯುಕ್ತ ಪಟ್ಟಣದ ಆಟಲ್‍ಜೀ ಸಭಾಂಗಣದಲ್ಲಿ ಆಯೋಜಿಸಿರುವ ಜ್ಯೋತಿರ್ಲಿಂಗಗಳ ಪುಣ್ಯ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಅಜ್ಞಾನ, ಮೂಡನಂಬಿಕೆಗಳು ಹೆಚ್ಚುತ್ತಿರುವುದರಿಂದ ಸಮಾಜದಲ್ಲಿ ಅಹಿತಕರ ಘಟನೆಗಳು ನಡೆಯುತ್ತಿವೆ. ಯುವ ಜನಾಂಗ ವೈಜ್ಞಾನಿಕತೆಯತ್ತ ಮರಳಬೇಕು ಎಂದು ಕಿವಿಮಾತು ಹೇಳಿದರು. ಪ್ರವಚನಗಳು ಜೀವನ ಮೌಲ್ಯವನ್ನು ಪ್ರತಿಪಾದಿಸುತ್ತವೆ. ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಒತ್ತಡಗಳಿಂದ ದೂರವಾಗಿ ಮಾನಸಿಕ ನೆಮ್ಮದಿ ಕಾಣಲು ಸಾಧ್ಯ ಎಂದು ಶಾಸಕರು ಹೇಳಿದರು. ಕಾರ್ಯಕ್ರಮದಲ್ಲಿ ನೀತಿ ಶಿಕ್ಷಣದ ಜೊತೆಗೆ ವ್ಯಸನಮುಕ್ತ ಆಂದೋಲನ ಕಾರ್ಯಕ್ರಮ ನಡೆಸುತ್ತಿರುವುದು ಶ್ಲಾಘನೀಯ ಎಂದರು. ಸಂಸ್ಥೆಯ ಮುಖ್ಯಸ್ಥರಾದ ಪ್ರಾಣೇಶ್, ಪಟ್ಟಣ ಪಂಚಾಯಿತಿ ಸದಸ್ಯ ಡಿ.ಯು.ಕಿರಣ್ ಈಶ್ವರೀಯ ವಿಶ್ವವಿದ್ಯಾನಿಲಯದ ಭಕ್ತಾದಿಗಳು ಇದ್ದರು.