ಮಡಿಕೇರಿ ಅ.16 NEWS DESK : ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ದಿನಾಂಕ 04-11-2002 ರಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊಂಡ ‘ಸಾಂತ್ವನ ಮಹಿಳಾ ಸಹಾಯವಾಣಿ’ ಕೊಡಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾದ ಸಲಹೆ ಸೂಚನೆಗಳನ್ನು ನೀಡಿ ನೆರವು ಕಲ್ಪಿಸುತ್ತಾ ಬಂದಿದೆ. ಸಾಂತ್ವನ ಕೇಂದ್ರದಲ್ಲಿ ಈವರೆಗೆ 5248 ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು 5232 ಪ್ರಕರಣಗಳು ಇತ್ಯರ್ಥಗೊಂಡಿರುತ್ತದೆ. 2024-2ನೇ ಆರ್ಥಿಕ ಸಾಲಿನಲ್ಲಿ ಏಪ್ರಿಲ್ ತಿಂಗಳಿನಿಂದ 2024 ರ ಏಪ್ರಿಲ್, 01 ರಿಂದ ಸೆಪ್ಟೆಂಬರ್ ತಿಂಗಳ ಅಂತ್ಯದವರೆಗೆ, 130 ಪ್ರಕರಣಗಳು ದಾಖಲಾಗಿ 117 ಪ್ರಕರಣಗಳು ಇತ್ಯರ್ಥಗೊಂಡು ಉಳಿದ 13 ಪ್ರಕರಣಗಳು ಇತ್ಯರ್ಥದ ಹಂತದಲ್ಲಿರುತ್ತದೆ. ಹಾಗೆಯೇ ವಿವಿಧ ಸ್ವರೂಪದ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ರೂ.1,55,000 ಗಳನ್ನು ಸಾಂತ್ವನ ಕೇಂದ್ರ ಹಾಗೂ ನ್ಯಾಯಾಲಯದ ಮೂಲಕ ಫಲಾನುಭವಿಗಳಿಗೆ 2023-24ನೇ ಸಾಲಿನಲ್ಲಿ ಕೊಡಿಸಿಕೊಡಲಾಗಿದೆ. ಮಹಿಳಾ ಸಹಾಯವಾಣಿಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಾಂತ್ವನ ಕೇಂದ್ರದ ಅಧ್ಯಕ್ಷರು ಕೆ.ಎಸ್.ಪ್ರಕಾಶ್ ಹಾಗೂ ಪ್ರಧಾನ ಕಾರ್ಯದರ್ಶಿಯವರಾದ ನಮಿತ ಆರ್. ರೈ ಅವರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ದೂ.ಸಂ. 9880985939 ನ್ನು ಸಂಪರ್ಕಿಸಬಹುದು ಎಂದು ಸಾಂತ್ವನ ಕೇಂದ್ರದ ಅಧ್ಯಕ್ಷರಾದ ಕೆ.ಎಸ್.ಪ್ರಕಾಶ್ ತಿಳಿಸಿದ್ದಾರೆ.