ಬೆಂಗಳೂರು ಅ.17 NEWS DESK : ಮಹರ್ಷಿ ವಾಲ್ಮೀಕಿ ಜಯಂತಿಯ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧ ಮುಂಭಾಗದಲ್ಲಿರುವ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪ ನಮನ ಸಲ್ಲಿಸಿದರು. ವಾಲ್ಮೀಕಿ ಸಮಾಜದ ರಾಜನಹಳ್ಳಿ ಮಠದ ಪ್ರಸನ್ನಾನಂದಪುರಿ ಸ್ವಾಮೀಜಿಗಳು, ಸಚಿವರಾದ ಕೆ.ಎನ್.ರಾಜಣ್ಣ, ಸತೀಶ್ ಜಾರಕಿಹೊಳಿ, ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕ ಬಸವನಗೌಡ ದದ್ದಲ್, ಶಾಸಕರಾದ ಪ್ರಕಾಶ್ ಹುಕ್ಕೇರಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
ನಂತರ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಐದು ಮಹನೀಯರಿಗೆ ವಾಲ್ಮೀಕಿ ಪ್ರಶಸ್ತಿ ವಿತರಿಸಿ, ಶುಭ ಹಾರೈಸಿದರು. ರಾಜನಹಳ್ಳಿ ವಾಲ್ಮೀಕಿ ಸಮುದಾಯ ಮಠದ ಜಗದ್ಗುರು ಪ್ರಸನ್ನಾನಂದಪುರಿ ಶ್ರೀಗಳ ದಿವ್ಯ ಸಾನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಎನ್.ರಾಜಣ್ಣ, ಹೆಚ್.ಕೆ.ಪಾಟೀಲ್, ಮಾಜಿ ಸಂಸದರಾದ ವಿ.ಎಸ್.ಉಗ್ರಪ್ಪ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಸವನಗೌಡ ದದ್ದಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕೆಕೆಆರ್‌ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರುಗಳು ಸೇರಿದಂತೆ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.