ಮಡಿಕೇರಿ NEWS DESK ಅ.18 : ಇದೇ ನ.1 ರಂದು ನಡೆಯುವ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು. ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಕಳೆದ ಬಾರಿಯಂತೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸುವಂತೆ ವಿವಿಧ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ದಸರಾ ಸಂದರ್ಭದಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿತ್ತು, ಜೊತೆಗೆ ಹೆಚ್ಚಿನ ಮಳೆ ಆಗಿರುವುದರಿಂದ ಮರಳು ಅಳವಡಿಸಿ ಸುಸ್ಥಿತಿಯಲ್ಲಿಡುವಂತೆ ಪೌರಾಯುಕ್ತರು ಹಾಗೂ ಕ್ರೀಡಾ ಇಲಾಖೆ ಅಧಿಕಾರಿಗೆ ಸೂಚಿಸಿದರು. ವೇದಿಕೆಯನ್ನು ನಿರ್ಮಾಣ ಮಾಡುವ ಸಂದರ್ಭದಲ್ಲಿ ಸ್ವಲ್ಪ ಎತ್ತರ ಮಾಡುವಂತಾಗಬೇಕು. ಗಣ್ಯರು, ಅತಿಥಿಗಳು, ಮಾಧ್ಯಮದವರು ಇತರರು ಕುಳಿತುಕೊಳ್ಳಲು ಸೂಕ್ತ ಚೇರ್‌ಗಳನ್ನು ಅಳವಡಿಸಿ ಪೆಂಡಾಲ್ ನಿರ್ಮಾಣ ಮಾಡುವಂತೆ ಜಿಲ್ಲಾಧಿಕಾರಿ ಅವರು ಸಂಬಂಧಪಟ್ಟ ಎಂಜಿನಿಯರ್‌ಗಳಿಗೆ ಸೂಚಿಸಿದರು. ಸಾಂಸ್ಕೃತಿಕ ಕಾರ್ಯಕ್ರಮ ಸಂಬಂಧಿಸಿದಂತೆ ಬೇರೆ ಬೇರೆ ಶಾಲೆಗಳಿಗೆ ಅವಕಾಶ ಮಾಡಬೇಕು. ಕನ್ನಡ ರಾಜ್ಯೋತ್ಸವ ಸಂಬಂಧ ಹಾಡುಗಳನ್ನು ಒಳಗೊಂಡಿರಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.
ಸಾಂಸ್ಕೃತಿಕ ಕಾಯಕ್ರಮ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪೂರ್ವ ತಯಾರಿಯನ್ನು ವೀಕ್ಷಿಸಿ ಸರಿಯಾದದ್ದನ್ನು ಆಯ್ಕೆ ಮಾಡಬೇಕು. ಕನ್ನಡ ರಾಜ್ಯೋತ್ಸವ ಸಂದರ್ಭಕ್ಕೆ ತಕ್ಕಂತೆ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಬೇಕು ಎಂದು ಹೇಳಿದರು. ಸ್ವಾಗತ, ಮೆರವಣಿಗೆ, ಸ್ತಬ್ಧಚಿತ್ರ, ಧ್ಜಜಾರೋಹಣ ಮತ್ತು ವೇದಿಕೆ, ಪಥ ಸಂಚಲನ, ಸಾಂಸ್ಕೃತಿಕ, ಉಪಾಹಾರ, ಬಹುಮಾನ, ಸ್ವಚ್ಚತೆ ಹಾಗೂ ಕುಡಿಯುವ ನೀರು ಹೀಗೆ ವಿವಿಧ ಉಪ ಸಮಿತಿಗಳು ತಮ್ಮ ತಮ್ಮ ಹಂತದಲ್ಲಿ ಸಮಾಲೋಚನೆ ನಡೆಸಿ ಅಕ್ಟೋಬರ್, 25 ರೊಳಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಪಷ್ಟ ನಿರ್ದೇಶನ ನೀಡಿದರು. ವಿವಿಧ ಕ್ಷೇತ್ರದಲ್ಲಿ ರಾಜ್ಯ, ರಾಷ್ಟç ಹಾಗೂ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವವರನ್ನು ಗುರುತಿಸಿ ಗೌರವಿಸುವಂತಾಗಲು ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಮಾತನಾಡಿ ಕಳೆದ ಬಾರಿಯಂತೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಎಲ್ಲರೂ ಶ್ರಮಿಸಬೇಕು. ಕನ್ನಡ ಮಯ ವಾತಾವರಣ ನಿರ್ಮಾಣ ಮಾಡಬೇಕು ಎಂದು ಅವರು ಹೇಳಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್ ಅವರು ಮಾತನಾಡಿ ಪೊಲೀಸ್ ಇಲಾಖೆಯಿಂದ ಪಥ ಸಂಚಲನ ಸೇರಿದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುವುದು. ಜಿಲ್ಲಾಡಳಿತದ ಜೊತೆ ಸದಾ ಕೈಜೋಡಿಸಲಿದೆ ಎಂದು ಹೇಳಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರಾದ ಸಿ.ರಂಗಧಾಮಪ್ಪ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕನ್ನಡ ಭಾಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮ ಸಂಬಂಧಿಸಿದಂತೆ ಎಲ್ಲಾ ರೀತಿಯ ಪೂರ್ವತಯಾರಿ ನಡೆಸಿ ಅಂತಿಮಗೊಳಿಸಲಾಗುವುದು ಎಂದು ಹೇಳಿದರು. ಜಿ.ಪಂ.ಉಪ ಕಾರ್ಯದರ್ಶಿ ಧನರಾಜ್, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಬಿ.ಆರ್.ಶೆಟ್ಟಿ, ಜಿ.ಪಂ.ಎಂಜಿನಿಯರ್ ಜಿ.ಕೆ.ನಾಯಕ್, ಡಿವೈಎಸ್‌ಪಿ ಮಹೇಶ್ ಕುಮಾರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳ, ಡಾ.ಮಧುಸೂದನ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರಾದ ಅನಿತಾ ಭಾಸ್ಕರ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಯೋಗೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜು, ಜಿಲ್ಲಾ ಸಾಂಖ್ಯಿಕ ಅಧಿಕಾರಿ ನಾರಾಯಣ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಗಾಯತ್ರಿ, ತಹಶೀಲ್ದಾರ್ ಪ್ರವೀಣ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಪೌರಾಯುಕ್ತರಾದ ಎಚ್.ಆರ್.ರಮೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯವಸ್ಥಾಪಕರಾದ ಶಿವಶಂಕರ, ಸ್ಕೌಟ್ಸ್ ಮತ್ತು ಗೈಡ್ಸ್ನ ಸಮನ್ವಯಾಧಿಕಾರಿ ದಮಯಂತಿ ಇತರರು ಇದ್ದರು.
Breaking News
- *ಕೊಡಗಿನ ಬಸವೇಶ್ವರ, ಪೇಟೆ ರಾಮ ಮಂದಿರ, ವಿಜಯ ವಿನಾಯಕ ದೇವಾಲಯಗಳಲ್ಲಿ ಕಳ್ಳತನ : ಅಂತರ್ ಜಿಲ್ಲಾ ಆರೋಪಿಯ ಬಂಧನ*
- *ಕನಕದಾಸರು ಕೀರ್ತನೆಗಳ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಿದರು : ಶಾಸಕ ಡಾ.ಮಂತರ್ ಗೌಡ*
- *ಜೋಡುಬೀಟಿ- ಕುಂದ ಸಂಪರ್ಕ ರಸ್ತೆಗೆ ನಾಯಕ್ ಕೂಕಂಡ ಎನ್.ಪೊನ್ನಪ್ಪ ನಾಮಕರಣ : ಎಲ್ಲೆಡೆ ವೀರಯೋಧರಿಗೆ ಗೌರವಸಲ್ಲಿಸುವ ಕಾರ್ಯವಾಗಬೇಕು : ಕೊಟ್ಟುಕತ್ತಿರ ಸೋಮಣ್ಣ*
- *ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹೆಗ್ಗಳಕ್ಕೆ ಸುವರ್ಣ ಕರ್ನಾಟಕ ರಾಜ್ಯೋತ್ಸವದ ಪ್ರಶಸ್ತಿ*
- *ನ.19 ರಂದು ಮಡಿಕೇರಿ ತಲುಪಲಿದೆ ಮದ್ರಾಸ್ ಎಂಜಿನಿಯರಿಂಗ್ ಆರ್ಮಿ ಗ್ರೂಪ್ನ ಬೈಕ್ ರ್ಯಾಲಿ*
- *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕನಕದಾಸ ಜಯಂತಿಯ ಅರ್ಥಪೂರ್ಣ ಆಚರಣೆ : ದಾಸ ಸಾಹಿತ್ಯಕ್ಕೆ ಮಹತ್ವದ ಕೊಡುಗೆ ನೀಡಿದ ಕನಕದಾಸರು : ಮೇಜರ್ ಡಾ.ರಾಘವ ಶ್ಲಾಘನೆ*
- *ನ.21 ರಂದು ಮಡಿಕೇರಿಯಲ್ಲಿ ರಕ್ತದಾನ ಮತ್ತು ಕಣ್ಣು ತಪಾಸಣಾ ಶಿಬಿರ*
- *ಮಡಿಕೇರಿಯಲ್ಲಿ ವಕೀಲರ ಕ್ರೀಡಾಕೂಟ : ಕ್ರೀಡಾ ಸ್ಫೂರ್ತಿ ಜೀವನಕ್ಕೂ ಸ್ಫೂರ್ತಿಯಾಗಲಿ : ಶಾಸಕ ಡಾ.ಮಂತರ್ ಗೌಡ*
- ಕನಾ೯ಟಕ ಪ್ಲಾಂಟಸ್೯ ಅಸೋಸಿಯೇಷನ್ ನ ವಾಷಿ೯ಕ ಸಮ್ಮೇಳನ : ಕಾಫಿ ಕೃಷಿಕರ ನೆರವಿಗೆ ಸಕಾ೯ರ ಧಾವಿಸಬೇಕು : ಮ್ಯಾಥ್ಯು ಅಬ್ರಾಹಂ*
- *ಡಾ.ಸೂರ್ಯ ಕುಮಾರ್ ಅವರ “ಮಂಗಳಿ” ಪುಸ್ತಕ ಬಿಡುಗಡೆ*