Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
  • *ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*
  • *ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*
  • *ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*
  • *ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*
  • *ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*
  • *ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*
  • *ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*
  • *ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಲಮುರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಕಾವೇರಿ ಉತ್ಸವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಲಮುರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಕಾವೇರಿ ಉತ್ಸವ*

ಅಕ್ಟೋಬರ್ 19, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಅ.19 NEWS DESK  : ಶ್ರೀ ಕ್ಷೇತ್ರ ತಲಕಾವೇರಿಯಲ್ಲಿ ತೀರ್ಥೋದ್ಭವದ ಎರಡನೇ ದಿನ ಇತಿಹಾಸ ಪ್ರಸಿದ್ಧ ಬಲಮುರಿ ಅಗಸ್ತ್ಯೇಶ್ವರ ಹಾಗೂ ಶ್ರೀ ಕಣ್ವ ಮುನೀಶ್ವರ ದೇವಾಲಗಳಲ್ಲಿ ತುಲ ಸಂಕ್ರಮಣದ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನೆರವೇರಿತು. ತಲಕಾವೇರಿಯಂತೆ ಬಲಮುರಿಯೂ ಸಹ ಬಲು ಪಾವಿತ್ರ್ಯದ ಸ್ಥಳವಾಗಿದ್ದು ಶುಕ್ರವಾರ ಮಧ್ಯಾಹ್ನ ದೇವಾಲಯದಲ್ಲಿ ಮಹಾಪೂಜೆ ನೆರವೇರಿತು. ಇದಕ್ಕೂ ಮುನ್ನ ಅರ್ಚಕವೃಂದ ಸಾಮೂಹಿಕ ಸತ್ಯನಾರಾಯಣ ಪೂಜೆಯನ್ನು ನೆರವೇರಿಸಿದರು. ಕಣ್ವ ಮುನೇಶ್ವರ ದೇವಾಲಯದಲ್ಲಿ ಅರ್ಚಕ ರವಿ ಕಲ್ಲುರಾಯ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ನೆರವಂಡ ಉತ್ತಪ್ಪ, ಕಾರ್ಯದರ್ಶಿ ಚೈಯಂಡ ತಿಮ್ಮಯ್ಯ, ಆಡಳಿತ ಮಂಡಳಿ ಸದಸ್ಯರು, ಊರಿನ ತಕ್ಕ ಮುಖ್ಯಸ್ಥರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಚುನಾಯಿತ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಅರ್ಚಕ ರವಿ ಕಲ್ಲುರಾಯ ಮಾತನಾಡಿ, ದೇವಾಲಯದಲ್ಲಿ ಕಾವೇರಿ ತೀರ್ಥವನ್ನು ತಂದು ವಿವಿಧ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು. ಮಧ್ಯಾಹ್ನ ಮಹಾಪೂಜೆ ನೆರವೇರಿಸಿ ಭಕ್ತರಿಗೆ ಅನ್ನ ಸಂತರ್ಪಣೆ ಕೈಗೊಳ್ಳಲಾಯಿತು ಎಂದರು. ದೇವಾಲಯಕ್ಕೆ ಆಗಮಿಸಿದ ಭಕ್ತರಾದ ಚೆಟ್ಟಿಮಾಡ ಬಾಲಕೃಷ್ಣ ಮಾತನಾಡಿ, ಜಾತ್ರೆಗೆ ತಾನು ಕುಟುಂಬ ಸಮೇತ ಆಗಮಿಸಿದ್ದೇನೆ. ತುಲಾಸಂಕ್ರಮಣದ ಸಂದರ್ಭದಲ್ಲಿ ಕಾವೇರಿಯ ಉಗಮಸ್ಥಾನವಾದ ತಲಕಾವೇರಿಗೆ ತೆರಳಲು ಸಾಧ್ಯವಾಗದ ಭಕ್ತರು ಅಧಿಕ ಸಂಖ್ಯೆಯಲ್ಲಿ ಬಲಮುರಿಗೆ ಬಂದು ಕಾವೇರಿ ತೀರ್ಥಸ್ನಾನ ಮಾಡಿ ಪುನೀತರಾಗಿ ತೆರಳುವರು. ಪ್ರತೀ ವರ್ಷ ಕಾವೇರಿ ತೀರ್ಥೋದ್ಭವದ ಮರುದಿನ ಬಲಮುರಿ ಜಾತ್ರೆ ನಡೆಯುವುದು. ತಲಕಾವೇರಿಯಂತೆ ಬಲಮುರಿಯೂ ಸಹ ಬಲು ಪಾವಿತ್ರ್ಯದ ಪುಣ್ಯಸ್ಥಳ. ಇಲ್ಲಿ ಪಿಂಡ ಪ್ರದಾನ ಮಾಡಿದರೆ ತಲಕಾವೇರಿಯಲ್ಲಿ ಮಾಡಿದಷ್ಟೇ ಪುಣ್ಯ ಬರುತ್ತದೆ ಎಂಬುದು ಇಲ್ಲಿನ ನಂಬಿಕೆ ಎಂದರು.

ವರದಿ : ದುಗ್ಗಳ ಸದಾನಂದ. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*

ಆಗಷ್ಟ್ 19, 2026

*ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 19, 2026

*ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*

ಆಗಷ್ಟ್ 19, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.19 : ಮಡಿಕೇರಿಯ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ವಿಧಾನಸಭೆಯ ಕಲಾಪ ವೀಕ್ಷಿಸಿದರು.…

*ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 19, 2026

*ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*

ಆಗಷ್ಟ್ 19, 2026

*ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*

ಆಗಷ್ಟ್ 18, 2026

*ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*

ಆಗಷ್ಟ್ 18, 2026

*ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*

ಆಗಷ್ಟ್ 18, 2026

*ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*

ಆಗಷ್ಟ್ 18, 2026

*ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*

ಆಗಷ್ಟ್ 18, 2026

*ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*

ಆಗಷ್ಟ್ 18, 2026

*ಮಾನವ–ಪ್ರಾಣಿ ಸಂಘರ್ಷ, ಜಮ್ಮಾಮಲೆ ಸಮಸ್ಯೆ : ಅರಣ್ಯ ಸಚಿವರೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಚರ್ಚೆ*

ಆಗಷ್ಟ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.