ಮಡಿಕೇರಿ ಅ.19 NEWS DESK : ಸಂಪಾಜೆ ಗ್ರಾ.ಪಂ ಮಾಜಿ ಅಧ್ಯಕ್ಷ ಹಾಗೂ ಕೊಡಗು ಜಿಲ್ಲಾ ಬಿಜೆಪಿಯ ಮುಖಂಡ ಸಂಪಾಜೆ ನಿವಾಸಿ ಬಾಲಚಂದ್ರ ಕಳಗಿ ಅವರ ಹತ್ಯೆ ಪ್ರಕರಣದ ಆರೋಪ ಸಾಬೀತಾದ ಹಿನ್ನೆಲೆ ನ್ಯಾಯಾಲಯ ಇಬ್ಬರಿಗೆ ದಂಡ ಸಹಿತ ಜೀವಾವಧಿ ಶಿಕ್ಷೆ ವಿಧಿಸಿದೆ. ಕಲ್ಲುಗುಂಡಿ ನಿವಾಸಿ ಹರಿಪ್ರಸಾದ್ ಹಾಗೂ ಲಾರಿ ಚಾಲಕ ಮಡಿಕೇರಿಯ ಜಯನ್ ಶಿಕ್ಷೆಗೆ ಗುರಿಯಾದವರಾಗಿದ್ದಾರೆ. ಕೊಡಗು ಜಿಲ್ಲಾ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಅ.16ರಂದು ತೀರ್ಪು ನೀಡಿದ್ದು, ಶಿಕ್ಷೆ ಪ್ರಮಾಣವನ್ನು ಇಂದು ಪ್ರಕಟಿಸಿದೆ. ದಂಡದ ಮೊತ್ತವನ್ನು ಮೃತ ಬಾಲಚಂದ್ರ ಕಳಗಿ ಅವರ ಪತ್ನಿಗೆ ನೀಡುವಂತೆ ಆದೇಶಿಸಿದೆ. ಸರಕಾರದ ಪರವಾಗಿ ಸರ್ಕಾರಿ ಅಭಿಯೋಜಕ ದೇವೇಂದ್ರಪ್ಪ ವಾದ ಮಂಡಿಸಿದ್ದರು. 2019 ಮಾರ್ಚ್ 19ರಂದು ಓಮ್ನಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬಾಲಚಂದ್ರ ಕಳಗಿ ಅವರನ್ನು ಮೇಕೇರಿ-ತಾಳತ್‌ಮನೆ ಬೈಪಾಸ್ ರಸ್ತೆಯಲ್ಲಿ ಲಾರಿಯಿಂದ ಡಿಕ್ಕಿ ಪಡಿಸಿ ಹತ್ಯೆ ಮಾಡಲಾಗಿತ್ತು. ಮೇಲ್ನೋಟಕ್ಕೆ ಅಪಘಾತ ಪ್ರಕರಣ ಎಂದು ಕಂಡು ಬಂದಿತ್ತಾದರೂ, ತನಿಖೆ ನಡೆಸಿದ ಪೊಲೀಸರು ಇದೊಂದು ವ್ಯವಸ್ಥಿತ ಕೊಲೆ ಎಂದು ಸತ್ಯವನ್ನು ಬೇಧಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಾದÀ ಸಂಪಾಜೆ ಕಲ್ಲುಗುಂಡಿ ನಿವಾಸಿಗಳಾದ ಸಂಪತ್ ಕುಮಾರ್, ಹರಿಪ್ರಸಾದ್ ಮತ್ತು ಲಾರಿ ಚಾಲಕ ಮಡಿಕೇರಿಯ ಜಯನ್ ಎಂಬವರನ್ನು ಮಡಿಕೇರಿ ಪೋಲೀಸರು ಬಂಧಿಸಿದ್ದರು. ಜಾಮೀನಿನಲ್ಲಿ ಹೊರಗೆ ಬಂದಿದ್ದ ಆರೋಪಿಗಳಲ್ಲಿ ಒಬ್ಬನಾದ ಸಂಪತ್ ಕುಮಾರ್(35) ಎಂಬಾತನನ್ನು ಸುಳ್ಯದ ಶಾಂತಿನಗರದಲ್ಲಿ ಗುಂಡು ಹೊಡೆದು ಹತ್ಯೆ ಮಾಡಲಾಗಿತ್ತು.
Breaking News
- *ಕೊಡಗು ಜಿಲ್ಲೆಯಲ್ಲಿ 13 ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಕ್ರಮ : ಸಚಿವ ಕೆ.ಜೆ.ಜಾರ್ಜ್*
- *ಹುದ್ದೆಗಳ ಭರ್ತಿಗೆ ಕ್ರಮ : ಸಚಿವ ಕೆ.ಜೆ.ಜಾರ್ಜ್ ಭರವಸೆ*
- *ಕುಶಾಲನಗರ ಗಣಪತಿ ದೇವಾಲಯಕ್ಕೆ ಉದ್ಯಮಿಗಳು ಹಾಗೂ ಟಿಬೆಟಿಯನ್ ಕುಟುಂಬದಿಂದ ಬೆಳ್ಳಿ ಕವಚ ಮತ್ತು ಪೂಜಾ ಸಾಮಾಗ್ರಿ ವಿತರಣೆ*
- *ವಿರಾಜಪೇಟೆ : ಡಿಜಿಟಲ್ ಗ್ರಂಥಾಲಯದ ಮೂಲಕ ಜ್ಞಾನದ ಸಶಕ್ತೀಕರಣ ಉಪನ್ಯಾಸ ಕಾರ್ಯಕ್ರಮ*
- *ಅತಿ ಹೆಚ್ಚು ಅಂಕ ಪಡೆದವರಿಗೆ ಸನ್ಮಾನ : ಶಿಕ್ಷಣ ನೀಡಿದ ಸರ್ಕಾರಿ ಶಾಲೆಗೆ ಆದಾಯದ ಒಂದು ಭಾಗ ಮೀಸಲಿಡಿ : ಹೆಚ್.ಎಲ್.ದಿವಾಕರ್ ಕರೆ*
- *ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ನೂತನ ಪದಾಧಿಕಾರಿಗಳ ನೇಮಕ : ಜಿಲ್ಲಾಧ್ಯಕ್ಷರಾಗಿ ಡಾ.ಯಾಲದಾಳು ಮನೋಜ್ ಬೋಪಯ್ಯ ಆಯ್ಕೆ*
- *ವಾರ ಭವಿಷ್ಯ : ಯಾರಿಗೆ ಈ ವಾರ ಶುಭ… : ನ.18 ರಿಂದ 24ರ ವರೆಗೆ*
- *ಬಿ.ಡಿ.ಮಂಜುನಾಥ್ “ಕೊಡಗು ಸಹಕಾರ ರತ್ನ” ಪ್ರಶಸ್ತಿಗೆ ಭಾಜನ : ನ.20 ರಂದು ಸಹಕಾರ ಸಪ್ತಾಹ ಸಮಾರೋಪ, ಪ್ರಶಸ್ತಿ ಪ್ರದಾನ*
- *ಭಾಗಮಂಡಲದಲ್ಲಿ ಕಾವೇರಿ ಆರತಿ*
- *ಬೊಳ್ಳಮ್ಮಗೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್ಡಿ ಪದವಿ*