ಮಡಿಕೇರಿ ಅ.22 NEWS DESK : ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕರ್ನಾಟಕ ಸಂಭ್ರಮ-50ರ ಅಭಿಯಾನದ ಅಂಗವಾಗಿ ಬೆಂಗಳೂರು, ಮೈಸೂರು, ಬೆಳಗಾವಿ ಹಾಗೂ ಕಲಬುರಗಿ ವಿಭಾಗಗಳಲ್ಲಿ ವಿಭಾಗಾವಾರು ‘ಯುವಕವಿ ಗೋಷ್ಠಿಗಳನ್ನು ಆಯೋಜಿಸುತ್ತಿದ್ದು, ಆಸಕ್ತ 20 ರಿಂದ 40 ವರ್ಷ ವಯಸ್ಸಿನ ಯುವಕವಿಗಳಿಂದ ಕವಿತೆಗಳನ್ನು ಆಹ್ವಾನಿಸಲಾಗಿದೆ. ರಾಜ್ಯದ ಎಲ್ಲಾ ಭಾಗದ ಆಸಕ್ತ ಕವಿಗಳು ಕನಿಷ್ಠ 3 ಕವಿತೆಗಳನ್ನು ಕಳುಹಿಸಿಕೊಡಬಹುದಾಗಿದೆ. ಕವಿತೆಗಳನ್ನು ಕಳುಹಿಸಲು ಅ.30 ಕೊನೆಯ ದಿನವಾಗಿದೆ. ಆಸಕ್ತ ಕವಿಗಳು ಕವಿತೆಗಳನ್ನು ಸಲ್ಲಿಸುವಾಗ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಜಾಲತಾಣ http://karnatakasahithyaacademy.org ನಿಂದ ಮಾಹಿತಿ ಪಡೆದುಕೊಳ್ಳಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ತಿಳಿಸಿದ್ದಾರೆ.










