Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
  • *ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*
  • *ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅ.25 ರಿಂದ ಅನೈರ್ಮಲ್ಯ ಶೌಚಾಲಯ ಹಾಗೂ ಮ್ಯಾನ್ಯುವೆಲ್ ಸ್ಕ್ಯಾವೆಂಜರ್‍ಗಳ ಸಮೀಕ್ಷೆ : ಕಾಲಮಿತಿಯಲ್ಲಿ ನಿಖರ ಮಾಹಿತಿ ಸಂಗ್ರಹಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅ.25 ರಿಂದ ಅನೈರ್ಮಲ್ಯ ಶೌಚಾಲಯ ಹಾಗೂ ಮ್ಯಾನ್ಯುವೆಲ್ ಸ್ಕ್ಯಾವೆಂಜರ್‍ಗಳ ಸಮೀಕ್ಷೆ : ಕಾಲಮಿತಿಯಲ್ಲಿ ನಿಖರ ಮಾಹಿತಿ ಸಂಗ್ರಹಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*

ಅಕ್ಟೋಬರ್ 23, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.23 NEWS DESK : ಕೊಡಗು ಜಿಲ್ಲೆಯಲ್ಲಿ ಅನೈರ್ಮಲ್ಯ ಶೌಚಾಲಯ ಹಾಗೂ ಮ್ಯಾನ್ಯುವೆಲ್ ಸ್ಕ್ಯಾವೆಂಜರ್‍ಗಳ ಸಮೀಕ್ಷೆಯು ಅ.25 ರಿಂದ ನ.3 ರವರೆಗೆ ನಡೆಯಲಿದ್ದು, ಸರ್ವೋಚ್ಚ ನ್ಯಾಯಾಲಯ ನಿರ್ದೇಶನ ಹಾಗೂ ಸರ್ಕಾರದ ಮಾರ್ಗಸೂಚಿಯಂತೆ ಸಮೀಕ್ಷೆ ಕಾರ್ಯವನ್ನು ವ್ಯವಸ್ಥಿತವಾಗಿ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮ್ಯಾನ್ಯುವೆಲ್ ಸ್ಕ್ಯಾವೆಂಜರ್ ಸಮೀಕ್ಷೆ ಸಂಬಂಧಿಸಿದಂತೆ ಮಾಹಿತಿ ಪಡೆದು ಅವರು ಮಾತನಾಡಿದರು. ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನೈರ್ಮಲ್ಯ ಶೌಚಾಲಯ ಹಾಗೂ ಮ್ಯಾನ್ಯುವೆಲ್ ಸ್ಕ್ಯಾವೆಂಜರ್ ಸಮೀಕ್ಷೆ ನಡೆಸಿ ಕಾಲಮಿತಿಯಲ್ಲಿ ನಿಖರ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ನಗರಾಭಿವೃದ್ಧಿ ಕೋಶ ಜೊತೆಗೆ ಪಂಚಾಯತ್ ರಾಜ್ ಇಲಾಖೆಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಸರಿಯಾಗಿ ಮಾಹಿತಿ ಸಂಗ್ರಹಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದರು. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಮಾಹಿತಿ ನೀಡಿ ಸರ್ವೋಚ್ಚ ನ್ಯಾಯಾಲಯದ ರಿಟ್ ಅರ್ಜಿ ಸಂಖ್ಯೆ 324/2020 ತೀರ್ಪಿನ ಅನ್ವಯ ರಾಜ್ಯದಲ್ಲಿ ಅನೈರ್ಮಲ್ಯ ಶೌಚಾಲಯ ಹಾಗೂ ಮ್ಯಾನ್ಯುವೆಲ್ ಸ್ಕ್ಯಾವೆಂಜರ್‍ಗಳ ಸಮೀಕ್ಷೆಯನ್ನು ಕೈಗೊಂಡು ಕೇಂದ್ರ ಸರ್ಕಾರದ `ನಮಸ್ತೆ ಪೋರ್ಟಲ್’ನ ಎಂ.ಎಸ್.ಸರ್ವೇ ಆಪ್‍ನಲ್ಲಿ ಅಪ್‍ಲೋಡ್ ಮಾಡಬೇಕಿದೆ ಎಂದು ತಿಳಿಸಿದರು. ಅನೈರ್ಮಲ್ಯ ಶೌಚಾಲಯ ಹಾಗೂ ಮ್ಯಾನ್ಯುವೆಲ್ ಸ್ಕ್ಯಾವೆಂಜರ್‍ಗಳ ಸಮೀಕ್ಷೆ ಸಂಬಂಧ ಅ.25 ರಿಂದ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗುತ್ತದೆ. ಈ ಸಂಬಂಧ ನಗರಾಭಿವೃದ್ಧಿ, ಪೌರಾಡಳಿತ ಹಾಗೂ ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ಅಧಿಕಾರಿಗಳು ಸಹಕರಿಸುವಂತೆ ಕೋರಿದರು. ಸಮೀಕ್ಷೆ ಸಂಬಂಧಿಸಿದಂತೆ ಅರ್ಜಿಯ ಮಾನ್ಯತೆಯನ್ನು ಪರಿಶೀಲಿಸಿ ವ್ಯಾಲಿಡೇಟರ್ ಲಾಗ್‍ಇನ್‍ಗೆ ಕಳುಹಿಸಲು ಕ್ರಮವಹಿಸಬೇಕಿದೆ. ಹಾಗೆಯೇ ಸಮೀಕ್ಷಾ ಲಾಗಿನ್‍ನಿಂದ ಬಂದ ಅರ್ಜಿಯನ್ನು ಕೂಲಂಕಷವಾಗಿ ಪರಿಶೀಲಿಸಿ ಅರ್ಜಿಯ ನೈಜತೆ ಬಗ್ಗೆ ಖಾತರಿಪಡಿಸಿಕೊಂಡು ಪರಿಶೀಲಿಸಿ ಜಿಲ್ಲಾ ವ್ಯಾಲಿಡೇಟರ್ ಲಾಗಿನ್‍ಗೆ ಅರ್ಜಿಯನ್ನು ಕಳುಹಿಸಬೇಕಿದೆ. ಸಮೀಕ್ಷೆ ಕಾರ್ಯದ ಅರ್ಜಿಯು ತಪ್ಪಾಗಿದ್ದಲ್ಲಿ ತಿರಸ್ಕರಿಸಬೇಕಿದೆ ಎಂದರು.
ಜಿಲ್ಲಾ ವ್ಯಾಲಿಡೇಟರ್‍ಗೆ ಬಂದ ಅರ್ಜಿಯ ಮಾನ್ಯತೆ ಪರಿಶೀಲಿಸಿ ಸರಿ ಕಂಡುಬಂದಲ್ಲಿ ರಾಜ್ಯ ವ್ಯಾಲಿಡೇಟರ್ ಲಾಗಿನ್‍ಗೆ ಅರ್ಜಿಯನ್ನು ಕಳುಹಿಸಲು ಕ್ರಮವಹಿಸಬೇಕಿದೆ. ನಂತರ ಸ್ವೀಕೃತಗೊಂಡ ಅರ್ಜಿಯನ್ನು ಜಿಲ್ಲಾ ಮಟ್ಟದ ಮ್ಯಾನ್ಯುವೆಲ್ ಸ್ಕ್ಯಾವೆಂಜರ್ ಸಮೀಕ್ಷೆ ಸಮಿತಿ ಸಭೆಯಲ್ಲಿ ಅನುಮೋದಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ಕ್ರಮವಹಿಸಬೇಕಿದೆ ಎಂದು ಶೇಖರ್ ವಿವರಿಸಿದರು. ನಗರ ಪ್ರದೇಶ ವ್ಯಾಪ್ತಿಯಲ್ಲಿ ಸಮೀಕ್ಷೆಗಾರರಾಗಿ ನಗರ ಸ್ಥಳೀಯ ಸಂಸ್ಥೆಯ ಆರೋಗ್ಯಾಧಿಕಾರಿಗಳು, ಪರಿಶೀಲನಾ ಅಧಿಕಾರಿಗಳಾಗಿ ನಗರ ಸ್ಥಳೀಯ ಸಂಸ್ಥೆಯ ಸಹಾಯಕ ಅಭಿಯಂತರರು, ವ್ಯಾಲಿಡೇಟರಾಗಿ ಪಟ್ಟಣ ಪಂಚಾಯಿತಿ ಹಾಗೂ ಪುರಸಭೆಯ ಮುಖ್ಯಾಧಿಕಾರಿಗಳು, ಜಿಲ್ಲಾ ವ್ಯಾಲಿಡೇಟರ್ ಆಗಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಕಾರ್ಯನಿರ್ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಗ್ರಾಮೀಣ ಪ್ರದೇಶದಲ್ಲಿ ಸಮೀಕ್ಷೆಗಾರರಾಗಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪರಿಶೀಲನಾ ಅಧಿಕಾರಿಗಳಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಾಯಕ ನಿರ್ದೇಶಕರು, ವ್ಯಾಲಿಡೇಟರ್ ಆಗಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ವ್ಯಾಲಿಡೇಟರ್ ಆಗಿ ಜಿ.ಪಂ.ಉಪ ಕಾರ್ಯದರ್ಶಿ ಅವರು ಕಾರ್ಯನಿರ್ವಹಿಸಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಮಾಹಿತಿ ನೀಡಿದರು. ತಮ್ಮ ತಮ್ಮ ವ್ಯಾಪ್ತಿಯಲ್ಲಿ ಸ್ಥಳೀಯ ಮಟ್ಟದಲ್ಲಿ ಹೆಚ್ಚಿನ ಮಾಹಿತಿ ನೀಡುವುದರ ಜೊತೆಗೆ ಅನೈರ್ಮಲ್ಯ ಶೌಚಾಲಯ ಹಾಗೂ ಮ್ಯಾನ್ಯುವೆಲ್ ಸ್ಕ್ಯಾವೆಂಜರ್‍ಗಳ ಅರ್ಜಿಯನ್ನು ನಮಸ್ತೆ ಪೋರ್ಟಲ್‍ನಲ್ಲಿ ನಮೂದಿಸಲು ಕ್ರಮವಹಿಸಬೇಕಿದೆ ಎಂದು ಶೇಖರ್ ಮನವಿ ಮಾಡಿದರು. ಸಮಿತಿ ಸದಸ್ಯರಾದ ರಂಗಸ್ವಾಮಿ ಅವರು ಮಾತನಾಡಿ ಅನೈರ್ಮಲ್ಯ ಶೌಚಾಲಯ ಹಾಗೂ ಮ್ಯಾನ್ಯುವೆಲ್ ಸ್ಕ್ಯಾವೆಂಜರ್ ಪದ್ಧತಿ ಇನ್ನೂ ಸಹ ಜೀವಂತವಾಗಿದೆ. ಈ ಸಂಬಂಧ ಪರಿಶೀಲಿಸಿ ಅರ್ಹರನ್ನು ಗುರುತಿಸುವಂತೆ ಕೋರಿದರು. ಮತ್ತೊರ್ವ ಸದಸ್ಯರಾದ ಆರ್ಮೂಗಂ ಮಾತನಾಡಿ, ಅನೈರ್ಮಲ್ಯ ಶೌಚಾಲಯ ಹಾಗೂ ಮ್ಯಾನ್ಯುವೆಲ್ ಸ್ಕ್ಯಾವೆಂಜರ್ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ಅಗತ್ಯ ಕ್ರಮವಹಿಸಬೇಕಿದೆ ಎಂದರು. ಸದಸ್ಯರಾದ ಓಬಳಿ, ಜಿ.ಪಂ. ಉಪ ಕಾರ್ಯದರ್ಶಿ ಧನರಾಜ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ಡಿವೈಎಸ್‍ಪಿ ರವಿ, ತಾ.ಪಂ.ಇಒ ಅಪ್ಪಣ್ಣ, ಪರಮೇಶ್ ಕುಮಾರ್, ಜಿ.ಪಂ.ಸಹಾಯಕ ನಿರ್ದೇಶಕರಾದ ಶ್ರೀನಿವಾಸ್, ಪೌರಾಯುಕ್ತ ಎಚ್.ಆರ್.ರಮೇಶ್, ಪುರಸಭೆ ಮುಖ್ಯಾಧಿಕಾರಿಗಳಾದ ಕೃಷ್ಷಪ್ರಸಾದ್, ಪಿ.ಕೆ.ನಾಚಪ್ಪ, ರೀತು ಸಿಂಗ್ ಇತರರು ಇದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 9 NEWS DESK  : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ…

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026

*ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*

ಮೇ 9, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ “ಕಲಾ ವೈಭವ” ಉದ್ಘಾಟನೆ : ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಲೆ ಸಹಕಾರಿ : ಮೇ.ಪ್ರೊ.ರಾಘವ ಬಿ. ಅಭಿಮತ*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.