ನಾಪೋಕ್ಲು ಅ.24 NEWS DESK : ಸಮಾಜದಲ್ಲಿ ಉತ್ತಮವಾಗಿ ಬದುಕಬೇಕಾದರೆ ಶಿಕ್ಷಣ ಅಗತ್ಯ. ಉತ್ತಮ ಶಿಕ್ಷಣವನ್ನು ಪಡೆಯುವ ಮೂಲಕ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು ಆಗ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಕಕ್ಕಬ್ಬೆ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ರಜಿನ ಹೇಳಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಕ್ಕಬ್ಬೆ ಕಾರ್ಯಕ್ಷೇತ್ರದ ಸ್ಫೂರ್ತಿ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಸಮೀಪದ ಕಕ್ಕಬೆ ಮಹಿಳಾ ಸಮಾಜದಲ್ಲಿ ಆಯೋಜಿಸಲಾಗಿದ್ದ ಮಾಸಿಕ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಜೀವನದ ಉತ್ತಮ ಅಂಶಗಳನ್ನು ರೂಪಿಸಿಕೊಂಡು ಮಹಿಳೆಯರು ಸದೃಢ ವನ್ನು ರೂಪಿಸಲು ಮಹಿಳೆಯರು ಮುಂದಾಗಬೇಕು. ಸಮಾಜದಿಂದ ಅನೌಪಚಾರಿಕ ಶಿಕ್ಷಣವನ್ನು ಪಡೆದುಕೊಳ್ಳಲಾಗುತ್ತಿದೆ ಇದರಿಂದ ನಾಲ್ಕು ಜನರ ನಡುವೆ ಉತ್ತಮವಾಗಿ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದರು ಹೆಣ್ಣುಮಕ್ಕಳು ಶಿಕ್ಷಣವಂತರಾಗಬೇಕು ಸರ್ಕಾರ ಕಡ್ಡಾಯ ಶಿಕ್ಷಣ ವ್ಯವಸ್ಥೆಯನ್ನು ಜಾರಿಗೊಳಿಸಿದೆ ಮಹಿಳೆಯರು ಉದ್ಯೋಗ ನಿರ್ವಹಿಸುವುದರ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಎಂದರು. ಪೂರ್ತಿ ಜ್ಞಾನವಿಕಾಸ ಕೇಂದ್ರದ ಅಧ್ಯಕ್ಷರಾದ ಲಲಿತಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಒಕ್ಕೂಟದ ಉಪಾದ್ಯಕ್ಷೆ ಸೀತಮ್ಮ, ಸೇವಾಪ್ರತಿನಿಧಿ ಉಮಾಲಕ್ಷ್ಮಿ, ಸಂಘಗಳ ಸದಸ್ಯರು ಹಾಜರಿದ್ದರು.
ವರದಿ : ದುಗ್ಗಳ ಸದಾನಂದ.