Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ : ನಗರಸಭೆ ಹಾಗೂ ನಗರ ಜಿಲ್ಲಾ ಕೇಂದ್ರ ಗ್ರಂಥಾಲಯಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ*
  • *ರಾಜ್ಯ ಮಟ್ಟದ ಲೇಖನ ಸ್ಪರ್ಧೆಯಲ್ಲಿ ಸಿದ್ದರಾಜು ಬೆಳ್ಳಯ್ಯರಿಗೆ ದ್ವಿತೀಯ ಸ್ಥಾನ*
  • *ಅಗ್ನಿ ಅವಘಡ : ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಡಿಕೇರಿಯಲ್ಲಿ ಜಾಗೃತಿ ಅಣಕು ಪ್ರದರ್ಶನ*
  • *ಕೊಡಗು : ಆದಿವಾಸಿಗಳು ಮತದಾರರ ಪಟ್ಟಿಯಿಂದ ಬಿಟ್ಟುಹೋಗದಂತೆ ಎಚ್ಚರವಹಿಸಿ : ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ*
  • *ಎಸ್.ಜಾನಕಿಯವರಿಗೆ ‘ಸಮರ್ಥ ಕನ್ನಡಿಗರು’ ಕೊಡಗು ಜಿಲ್ಲಾ ಘಟಕದಿಂದ ಭಾವಪೂರ್ಣ ಶ್ರದ್ಧಾಂಜಲಿ*
  • *ಬರಪೊಳೆಯಲ್ಲಿ ಪತ್ರಕರ್ತರ ಸಾಹಸಮಯ ಜಲಕ್ರೀಡೆ*
  • *ಬಿಳಿಗೇರಿಯಲ್ಲಿ ಜು.18 ಮತ್ತು 19 ರಂದು ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ : ನೋಂದಣಿಗೆ ಜು.17 ಕೊನೆಯ ದಿನ*
  • *ಚಂದನಕೇರೆ ಹಾಡಿ ರಸ್ತೆ ಕಾಮಗಾರಿಗೆ ಚಾಲನೆ*
  • *ಮಾನವ ವನ್ಯಜೀವಿಗಳ ಸಂಘರ್ಷ : ಅರಣ್ಯ ಇಲಾಖೆಯ ಅಧಿಕಾರಿ ಹಾಗೂ ಗ್ರಾಮಸ್ಥರೊಂದಿಗೆ ಶಾಸಕ ಡಾ.ಮಂತರ್ ಗೌಡ ಸಭೆ*
  • *ಎಸ್.ವಡ್ಡಳ್ಳಿ ಗ್ರಾಮದಲ್ಲಿ ಕ್ಷೇತ್ರೋತ್ಸವ ಬೆಣ್ಣೆ ಹಣ್ಣಿನ ಕ್ಷೇತ್ರೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಡಿ.4 ರಿಂದ ವಿ.ಬಾಡಗದಲ್ಲಿ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಡಿ.4 ರಿಂದ ವಿ.ಬಾಡಗದಲ್ಲಿ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ*

ಅಕ್ಟೋಬರ್ 24, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಪೊನ್ನಂಪೇಟೆ ಅ.24 NEWS DESK : ಬಿಟ್ಟಂಗಾಲ ಸಮೀಪದ ವಿ.ಬಾಡಗದ ಹೈ ಪ್ಲೈಯರ್ಸ್ ತಂಡದ ವತಿಯಿಂದ ಬಿಟ್ಟಂಗಾಲ, ಬಿ.ಶೆಟ್ಟಿಗೇರಿ ಮತ್ತು ಹಾತೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಐನ್ ಮನೆ ಹೊಂದಿರುವ ಕೊಡವ ಕುಟುಂಬಗಳ ತಂಡಗಳಿಗಾಗಿ 3ನೇ ವರ್ಷದ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಹೈಪ್ಲೈಯರ್ಸ್ ಕಪ್-2024ಅನ್ನು ಡಿ.4 ರಿಂದ 8ರವರೆಗೆ ಆಯೋಜಿಸಲಾಗಿದೆ ಎಂದು ಹೈಪ್ಲೈಯರ್ಸ್ ತಂಡದ ಅಧ್ಯಕ್ಷ ಅಮ್ಮಣಿಚಂಡ ರಂಜು ಪೂಣಚ್ಚ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕೌಟುಂಬಿಕ ಹಾಕಿ ಪಂದ್ಯಾವಳಿಯು ವಿ.ಬಾಡಗ ಗ್ರಾಮದಲ್ಲಿ 3ನೇ ಬಾರಿಗೆ ಜರುಗುತ್ತಿದೆ. ವಿ.ಬಾಡಗದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಒಟ್ಟು 5 ದಿನಗಳ ಕಾಲ ನಡೆಯುವ ಈ ಹಾಕಿ ಪಂದ್ಯಾವಳಿಗಾಗಿ ಈಗಾಗಲೇ ಸಿದ್ಧತೆಗಳು ಆರಂಭಗೊಂಡಿರುವುದಾಗಿ ರಂಜು ಪೂಣಚ್ಚ ಮಾಹಿತಿ ನೀಡಿದರು. ಕುಟುಂಬ ತಂಡಗಳಲ್ಲಿ ಗರಿಷ್ಠ 4 ಅತಿಥಿ ಆಟಗಾರರು ಭಾಗವಹಿಸಬಹುದಾಗಿದೆ. ಆದರೆ ಅತಿಥಿ ಆಟಗಾರರು ಕಡ್ಡಾಯವಾಗಿ ಕೊಡವ ಆಟಗಾರರಾಗಿರಬೇಕು. ವಿಜೇತ ತಂಡಗಳಿಗೆ ಆಕರ್ಷಕ ನಗದು ಬಹುಮಾನ ಮತ್ತು ಕೊಡವ ಸಾಂಪ್ರದಾಯಿಕ ಪಾರಿತೋಷಕಗಳನ್ನು ನೀಡಿ ಗೌರವಿಸಲಾಗುವುದು ಎಂದು ತಿಳಿಸಿರುವ ರಂಜು ಪೂಣಚ್ಚ, ಕ್ರೀಡಾ ಪ್ರೇಮಿಗಳ ಆರ್ಥಿಕ ನೆರವಿನಿಂದ ಕಳೆದ ಎರಡು ವರ್ಷ ಪಂದ್ಯಾವಳಿ ಯಶಸ್ವಿಯಾಗಿ ನಡೆದಿದೆ. ಈ ಬಾರಿಯೂ ಸಂಪೂರ್ಣವಾಗಿ ದಾನಿಗಳ ನೆರವಿನಿಂದಲೇ ಪಂದ್ಯಾವಳಿ ಜರುಗಲಿದ್ದು, ಗ್ರಾಮಸ್ಥರು ಮತ್ತು ಪ್ರಾಯೋಜಕರು ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಹೇಳಿದರು. ಗ್ರಾಮೀಣ ಪ್ರದೇಶಗಳಲ್ಲಿ ಹಾಕಿ ಪಂದ್ಯಾವಳಿಗೆ ಒತ್ತು ನೀಡುವ ಹಿನ್ನೆಲೆಯಲ್ಲಿ ಈ ಹಾಕಿ ಪಂದ್ಯಾವಳಿಯನ್ನು ಆಯೋಜಿಸಲಾಗುತ್ತಿದೆ. ಈ ಕಾರಣಕ್ಕಾಗಿ ಹೈ ಫ್ಲೈಯರ್ಸ್ ಎಂಬ ಕ್ರೀಡಾ ಸಂಸ್ಥೆಯನ್ನು ಕಳೆದ ಎರಡು ವರ್ಷಗಳ ಹಿಂದೆ ಹುಟ್ಟು ಹಾಕಲಾಗಿದೆ ಎಂದು ವಿವರಿಸಿರುವ ರಂಜು ಪೂಣಚ್ಚ, ಹಾಕಿ ಕೂರ್ಗ್ ಸಂಸ್ಥೆಯ ಅಧೀನದಲ್ಲಿ ನಡೆಯಲಿರುವ ಈ ಹಾಕಿ ಪಂದ್ಯಾವಳಿಯು ಹಾಕಿ ಕರ್ನಾಟಕ ಸಂಸ್ಥೆಯ ನಿಯಮಾವಳಿಗೆ ಬದ್ಧವಾಗಿ ನಾಕ್ ಔಟ್ ಮಾದರಿಯಲ್ಲಿ ನಡೆಯಲಿದೆ. ಆಸಕ್ತ ಕುಟುಂಬ ತಂಡಗಳು ಪಂದ್ಯಾವಳಿಗೆ ಹೆಸರು ನೋಂದಾಯಿಸಲು ನವೆಂಬರ್ 20 ಕೊನೆಯ ದಿನವಾಗಿರುತ್ತದೆ. ಪಂದ್ಯಾವಳಿಯ ಕುರಿತ ಹೆಚ್ಚಿನ ಮಾಹಿತಿಗಾಗಿ 9481883738/ 9448306340 ಅನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು. ಸಂಸ್ಥೆಯ ಕ್ರೀಡಾ ಕಾರ್ಯದರ್ಶಿಗಳಾದ ಕುಪ್ಪಂಡ ದಿಲನ್ ಬೋಪಣ್ಣ ಮಾತನಾಡಿ, ಗ್ರಾಮಾಂತರ ಪ್ರದೇಶದಲ್ಲಿ ಹಾಕಿ ಪಂದ್ಯಾವಳಿಯನ್ನು ನಿರಂತರವಾಗಿ ಆಯೋಜಿಸುವುದರಿಂದ ಹಾಕಿ ಕ್ರೀಡೆಗೆ ಮತ್ತಷ್ಟು ಉತ್ತೇಜನ ದೊರೆತಂತಾಗುತ್ತದೆ. ಗ್ರಾಮೀಣ ಮಟ್ಟದ ಕ್ರೀಡಾಕೂಟಗಳಿಂದ ಸಾಕಷ್ಟು ಹೊಸ ಪ್ರತಿಭೆಗಳಿಗೆ ಅವಕಾಶ ದೊರೆತಂತಾಗುತ್ತದೆ. ಕಳೆದ ಬಾರಿ ಆಯೋಜಿಸಿದ್ದ ಈ ಕೌಟುಂಬಿಕ ಹಾಕಿ ಪಂದ್ಯಾವಳಿಯಲ್ಲಿ ಒಟ್ಟು 19 ಕುಟುಂಬ ತಂಡಗಳು ಭಾಗವಹಿಸಿದ್ದವು. ಈ ಬಾರಿ 25 ತಂಡಗಳನ್ನು ನಿರೀಕ್ಷಿಸಲಾಗಿದೆ ಎಂದು ಹೇಳಿದರು. ಗೋಷ್ಠಿಯಲ್ಲಿ ಸಂಸ್ಥೆಯ ಸಲಹಾ ಸಮಿತಿ ನಿರ್ದೇಶಕರಾದ ಕೊಂಗಂಡ ಕಾಶಿ ಕಾರ್ಯಪ್ಪ, ಉಪಾಧ್ಯಕ್ಷರಾದ ಕಂಜಿತಂಡ ವಿಕ್ರಾಂತ್ ಮತ್ತು ಸ್ವಾಗತ ಸಮಿತಿ ಸಂಚಾಲಕರಾದ ಚೇಮಿರ ಪ್ರಭು ಪೂವಯ್ಯ ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ : ನಗರಸಭೆ ಹಾಗೂ ನಗರ ಜಿಲ್ಲಾ ಕೇಂದ್ರ ಗ್ರಂಥಾಲಯಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ*

ಜುಲೈ 15, 2026

*ರಾಜ್ಯ ಮಟ್ಟದ ಲೇಖನ ಸ್ಪರ್ಧೆಯಲ್ಲಿ ಸಿದ್ದರಾಜು ಬೆಳ್ಳಯ್ಯರಿಗೆ ದ್ವಿತೀಯ ಸ್ಥಾನ*

ಜುಲೈ 15, 2026

*ಅಗ್ನಿ ಅವಘಡ : ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಡಿಕೇರಿಯಲ್ಲಿ ಜಾಗೃತಿ ಅಣಕು ಪ್ರದರ್ಶನ*

ಜುಲೈ 15, 2026

*ರಾಜ್ಯ ಮಟ್ಟದ ಲೇಖನ ಸ್ಪರ್ಧೆಯಲ್ಲಿ ಸಿದ್ದರಾಜು ಬೆಳ್ಳಯ್ಯರಿಗೆ ದ್ವಿತೀಯ ಸ್ಥಾನ*

ಜುಲೈ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜು.15 NEWS DESK : ಮೈಸೂರು ದೇಸಿರಂಗ ಸಾಂಸ್ಕøತಿಕ ಸಂಸ್ಥೆ ಇವರು ವಿಚಾರವಾದಿ ಪ್ರೊ.ಕೆ.ರಾಮದಾಸ್ ಅವರ ನೆನಪಿನಲ್ಲಿ ಇತ್ತೀಚೆಗೆ…

*ಅಗ್ನಿ ಅವಘಡ : ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಡಿಕೇರಿಯಲ್ಲಿ ಜಾಗೃತಿ ಅಣಕು ಪ್ರದರ್ಶನ*

ಜುಲೈ 15, 2026

*ಕೊಡಗು : ಆದಿವಾಸಿಗಳು ಮತದಾರರ ಪಟ್ಟಿಯಿಂದ ಬಿಟ್ಟುಹೋಗದಂತೆ ಎಚ್ಚರವಹಿಸಿ : ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ*

ಜುಲೈ 15, 2026

*ಎಸ್.ಜಾನಕಿಯವರಿಗೆ ‘ಸಮರ್ಥ ಕನ್ನಡಿಗರು’ ಕೊಡಗು ಜಿಲ್ಲಾ ಘಟಕದಿಂದ ಭಾವಪೂರ್ಣ ಶ್ರದ್ಧಾಂಜಲಿ*

ಜುಲೈ 15, 2026

*ಬರಪೊಳೆಯಲ್ಲಿ ಪತ್ರಕರ್ತರ ಸಾಹಸಮಯ ಜಲಕ್ರೀಡೆ*

ಜುಲೈ 15, 2026

*ಬಿಳಿಗೇರಿಯಲ್ಲಿ ಜು.18 ಮತ್ತು 19 ರಂದು ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ : ನೋಂದಣಿಗೆ ಜು.17 ಕೊನೆಯ ದಿನ*

ಜುಲೈ 15, 2026

*ಚಂದನಕೇರೆ ಹಾಡಿ ರಸ್ತೆ ಕಾಮಗಾರಿಗೆ ಚಾಲನೆ*

ಜುಲೈ 15, 2026

*ಮಾನವ ವನ್ಯಜೀವಿಗಳ ಸಂಘರ್ಷ : ಅರಣ್ಯ ಇಲಾಖೆಯ ಅಧಿಕಾರಿ ಹಾಗೂ ಗ್ರಾಮಸ್ಥರೊಂದಿಗೆ ಶಾಸಕ ಡಾ.ಮಂತರ್ ಗೌಡ ಸಭೆ*

ಜುಲೈ 15, 2026

*ಎಸ್.ವಡ್ಡಳ್ಳಿ ಗ್ರಾಮದಲ್ಲಿ ಕ್ಷೇತ್ರೋತ್ಸವ ಬೆಣ್ಣೆ ಹಣ್ಣಿನ ಕ್ಷೇತ್ರೋತ್ಸವ*

ಜುಲೈ 15, 2026

*ಬಿ.ಕೆ.ಹರಿಪ್ರಸಾದ್ ರನ್ನು ಭೇಟಿಯಾದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ : ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಯ ಕುರಿತು ಚರ್ಚೆ*

ಜುಲೈ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.