Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*
  • *ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*
  • *ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*
  • *ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*
  • *ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*
  • *ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*
  • *ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*
  • *ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*
  • *ಮಾನವ–ಪ್ರಾಣಿ ಸಂಘರ್ಷ, ಜಮ್ಮಾಮಲೆ ಸಮಸ್ಯೆ : ಅರಣ್ಯ ಸಚಿವರೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಚರ್ಚೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸ್ಮಶಾನದ ಹೋರಾಟದಿಂದ ಹಿಂದೆ ಸರಿಯುವುದಿಲ್ಲ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸ್ಮಶಾನದ ಹೋರಾಟದಿಂದ ಹಿಂದೆ ಸರಿಯುವುದಿಲ್ಲ*

ಅಕ್ಟೋಬರ್ 25, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.25 NEWS DESK : ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಮಶಾನಕ್ಕಾಗಿ ಒತ್ತಾಯಿಸಿ ಭಾರತ ಮಾಕ್ರ್ಸ್‍ವಾದಿ ಕಮ್ಯುನಿಸ್ಟ್ ಪಕ್ಷ ನಡೆಸುತ್ತಿರುವ ಹೋರಾಟ ನ್ಯಾಯ ಸಮ್ಮತವಾಗಿದ್ದು, ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲವೆಂದು ಪಕ್ಷದ ನೆಲ್ಲಿಹುದಿಕೇರಿ ಶಾಖಾ ಕಾರ್ಯದರ್ಶಿ ಪಿ.ಆರ್.ಭರತ್ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಮಾರು 12 ಸಾವಿರ ಜನಸಂಖ್ಯೆ ಹೊಂದಿರುವ ನೆಲ್ಲಿಹುದಿಕೇರಿಗೆ ಸಾರ್ವಜನಿಕ ಸ್ಮಶಾನದ ಅಗತ್ಯವಿದ್ದು, ಸಿಪಿಐಎಂ ಪಕ್ಷ ಜನಪರವಾಗಿ ಹೋರಾಟ ನಡೆಸುತ್ತಿದೆ. ಆದರೆ ಕೆಲವರು ದೇವಾಲಯದ ಹೆಸರು ಹೇಳಿಕೊಂಡು ಹೋರಾಟಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದು, ಇದು ಸರಿಯಾದ ಕ್ರಮವಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು. ಜನಸಾಮಾನ್ಯರಿಗೆ ನ್ಯಾಯ ಕೊಡಿಸುವ ಕಾರ್ಯದಲ್ಲಿ ತೊಡಗಿರುವ ಸಿಪಿಐಎಂ ಪಕ್ಷ ಯಾವುದೇ ದೇವಾಲಯ ಅಥವಾ ಇನ್ನಿತರ ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟು ಜನರನ್ನು ಕೆರಳಿಸುವ ಕೆಲಸ ಮಾಡುತ್ತಿಲ್ಲ. ಭೂಮಿಯಿಲ್ಲದ ಬಡವರಿಗೆ ಭೂಮಿ, ಸೂರು, ನಿರುದ್ಯೋಗಿಗಳಿಗೆ ಉದ್ಯೋಗ ಸೇರಿದಂತೆ ನ್ಯಾಯ ಸಮ್ಮತವಾದ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಹೋರಾಟ ನಡೆಸುತ್ತಿದೆ. ಸ್ಮಶಾನದ ಹೋರಾಟದ ದಿಕ್ಕು ತಪ್ಪಿಸಲು ಕೆಲವರು ದೇವಾಲಯದ ಹೆಸರನ್ನು ಹೇಳಿ ಸಿಪಿಐಎಂ ಪಕ್ಷದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ನಮ್ಮ ಹೋರಾಟಕ್ಕೂ, ದೇವಾಲಯಕ್ಕೂ ಯಾವುದೇ ಸಂಬಂಧವಿಲ್ಲ. ದೇವಾಲಯದ ಆಸ್ತಿಯ ಬಗ್ಗೆ ನಾವು ಎಲ್ಲಿಯೂ ಮಾತನಾಡಿಲ್ಲ, ಮಾತನಾಡುವುದೂ ಇಲ್ಲ. ಅದು ಆಡಳಿತ ಮಂಡಳಿಗೆ ಮತ್ತು ಸರಕಾರಕ್ಕೆ ಬಿಟ್ಟ ವಿಚಾರ. ಸ್ಮಶಾನಕ್ಕೆಂದು ಆರ್.ಟಿ.ಸಿ., ಮೂಲ ಜಮಾಬಂದಿ ಆಗಿದೆ. ಈಗ ಗುರುತಿಸಿರುವ ಜಾಗವನ್ನು ಸ್ಮಶಾನಕ್ಕೆ ನೀಡಲು ಸಾಧ್ಯವಾಗದಿದ್ದರೆ ಪರ್ಯಾಯ ಜಾಗವನ್ನಾದರು ಸರಕಾರ ಮಂಜೂರು ಮಾಡಬೇಕು ಎಂದು ಪಿ.ಆರ್.ಭರತ್ ಒತ್ತಾಯಿಸಿದರು. ಪಕ್ಷದ ಜಿಲ್ಲಾ ಕಾರ್ಯದರ್ಶಿ ಹೆಚ್.ಬಿ.ರಮೇಶ್ ಮಾತನಾಡಿ ನೆಲ್ಯಹುದಿಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಮಶಾನವಿಲ್ಲದೆ ಸಾರ್ವಜನಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾವೇರಿ ನದಿ ದಡದಲ್ಲಿ ಅರ್ಧ ಏಕರೆಯಷ್ಟು ಜಾಗದಲ್ಲಿ ಶವ ಸಂಸ್ಕಾರ ಮಾಡಲಾಗುತ್ತಿದ್ದು, ಕಳೆದ ಹಲವು ವರ್ಷಗಳಿಂದ ಒಂದೇ ಜಾಗವನ್ನು ಅವಲಂಬಿಸಲಾಗಿದೆ. ಇಕ್ಕಟ್ಟಿನಲ್ಲಿ ಶವಸಂಸ್ಕಾರ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಸರಕಾರ ಮಧ್ಯಪ್ರವೇಶ ಮಾಡಿ ಸ್ಮಶಾನದ ಜಾಗದ ಸಮಸ್ಯೆ ಇತ್ಯರ್ಥಪಡಿಸಬೇಕು. ದೇವಸ್ಥಾನದ ಜಾಗ ಕಬಳಿಕೆಯಾಗಿದ್ದರೆ ಸರಕಾರವಿದೆ, ಕಬಳಿಕೆದಾರರು ಇದ್ದಾರೆ. ಈ ಬಗ್ಗೆ ಸಿಪಿಐಎಂ ಪಕ್ಷ ಯಾವುದೇ ಅಭಿಪ್ರಾಯ ವ್ಯಕ್ತಪಡಿಸುವುದಿಲ್ಲ. ಸ್ಮಶಾನಕ್ಕಾಗಿ ನಡೆಸುತ್ತಿರುವ ಹೋರಾಟ ಮುಂದುವರೆಯಲಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಪಕ್ಷದ ಸದಸ್ಯರಾದ ಟಿ.ಟಿ.ಉದಯಕುಮಾರ್, ಕೆ.ಕೆ.ಚಂದ್ರನ್ ಹಾಗೂ ಕೆ.ಶಿವರಾಮನ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 19, 2026

*ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*

ಆಗಷ್ಟ್ 19, 2026

*ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.19 : ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಅವ್ಯವಹಾರ ಪ್ರಕರಣಕ್ಕೆ ಸಂಬoಧಿಸಿದoತೆ ಆರೋಪ ಎದುರಿಸುತ್ತಿರುವ ಬಿ.ನಾಗೇಂದ್ರ…

*ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*

ಆಗಷ್ಟ್ 19, 2026

*ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*

ಆಗಷ್ಟ್ 18, 2026

*ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*

ಆಗಷ್ಟ್ 18, 2026

*ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*

ಆಗಷ್ಟ್ 18, 2026

*ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*

ಆಗಷ್ಟ್ 18, 2026

*ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*

ಆಗಷ್ಟ್ 18, 2026

*ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*

ಆಗಷ್ಟ್ 18, 2026

*ಮಾನವ–ಪ್ರಾಣಿ ಸಂಘರ್ಷ, ಜಮ್ಮಾಮಲೆ ಸಮಸ್ಯೆ : ಅರಣ್ಯ ಸಚಿವರೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಚರ್ಚೆ*

ಆಗಷ್ಟ್ 18, 2026

*ಅಪ್ರಾಪ್ತ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಶಿಕ್ಷಾರ್ಹ ಅಪರಾಧ : ಮಧು*

ಆಗಷ್ಟ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.