ಮಡಿಕೇರಿ NEWS DESK ಅ.25 : ಕರ್ತವ್ಯನಿರತ ಸಂಚಾರಿ ಪೊಲೀಸ್ ಸಿಬ್ಬಂದಿಯ ಸೂಚನೆಯನ್ನು ನಿರ್ಲಕ್ಷಿಸಿ ಕಾರು ಚಲಾಯಿಸುವ ಮೂಲಕ ಗಾಯಗೊಳಿಸಿ ಪರಾರಿಯಾದ ಆರೋಪದಡಿ ಕೊಡಗು ಪೊಲೀಸರು ಬಂಟ್ವಾಳದ ಚಾಲಕನನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಮುನ್ನೂರು ಗ್ರಾಮದ ನಂದವಾರಕೋಟೆ ನಿವಾಸಿ ನಝೀರ್ (27) ಬಂಧಿತ ಆರೋಪಿ. ಕೃತ್ಯಕ್ಕೆ ಬಳಸಿದÀ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಅ.20 ರಂದು ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದ ಬಳಿ ಎರಡು ವಾಹನಗಳ ನಡುವೆ ಡಿಕ್ಕಿಯಾಗಿ ವಾಹನದಟ್ಟಣೆ ಹೆಚ್ಚಾಗಿತ್ತು. ಈ ಸಂದರ್ಭ ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಸಂಜು.ಎ.ಜಿ (27) ಅವರು ಡಿಕ್ಕಿಪಡಿಸಿದ ನಝೀರ್ ನ ಕಾರನ್ನು ಪಕ್ಕಕ್ಕೆ ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಇದನ್ನು ನಿರ್ಲಕ್ಷಿಸಿದ ನಝೀರ್ ಕಾರನ್ನು ಚಲಾಯಿಸಿ ಪರಾರಿಯಾಗಿದ್ದಾನೆ. ಈ ಸಂದರ್ಭ ಸಂಜು ಅವರ ಬಲಗಾಲಿಗೆ ಗಾಯವಾಗಿದೆ. ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಡಿಕೇರಿ ಉಪವಿಭಾಗದ ಡಿವೈಎಸ್‌ಪಿ ಮಹೇಶ್ ಕುಮಾರ್, ಮಡಿಕೇರಿ ನಗರ ಸಿಪಿಐ ರಾಜು.ಪಿ.ಕೆ, ಪಿಎಸ್‌ಐ ಲೋಕೇಶ್ ಹಾಗೂ ಸಿಬ್ಬಂದಿಗಳ ತನಿಖಾ ತಂಡ ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಪೊಲೀಸ್ ಅಧಿಕಾರಿಗಳ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.
Breaking News
- *ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹೆಗ್ಗಳಕ್ಕೆ ಸುವರ್ಣ ಕರ್ನಾಟಕ ರಾಜ್ಯೋತ್ಸವದ ಪ್ರಶಸ್ತಿ*
- *ನ.19 ರಂದು ಮಡಿಕೇರಿ ತಲುಪಲಿರುವ ಮದ್ರಾಸ್ ಎಂಜಿನಿಯರಿಂಗ್ ಆರ್ಮಿ ಗ್ರೂಪ್ನ ಬೈಕ್ ರ್ಯಾಲಿ*
- *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕನಕದಾಸ ಜಯಂತಿಯ ಅರ್ಥಪೂರ್ಣ ಆಚರಣೆ : ದಾಸ ಸಾಹಿತ್ಯಕ್ಕೆ ಮಹತ್ವದ ಕೊಡುಗೆ ನೀಡಿದ ಕನಕದಾಸರು : ಮೇಜರ್ ಡಾ.ರಾಘವ ಶ್ಲಾಘನೆ*
- *ನ.21 ರಂದು ಮಡಿಕೇರಿಯಲ್ಲಿ ರಕ್ತದಾನ ಮತ್ತು ಕಣ್ಣು ತಪಾಸಣಾ ಶಿಬಿರ*
- *ಮಡಿಕೇರಿಯಲ್ಲಿ ವಕೀಲರ ಕ್ರೀಡಾಕೂಟ : ಕ್ರೀಡಾ ಸ್ಫೂರ್ತಿ ಜೀವನಕ್ಕೂ ಸ್ಫೂರ್ತಿಯಾಗಲಿ : ಶಾಸಕ ಡಾ.ಮಂತರ್ ಗೌಡ*
- ಕನಾ೯ಟಕ ಪ್ಲಾಂಟಸ್೯ ಅಸೋಸಿಯೇಷನ್ ನ ವಾಷಿ೯ಕ ಸಮ್ಮೇಳನ : ಕಾಫಿ ಕೃಷಿಕರ ನೆರವಿಗೆ ಸಕಾ೯ರ ಧಾವಿಸಬೇಕು : ಮ್ಯಾಥ್ಯು ಅಬ್ರಾಹಂ*
- *ಡಾ.ಸೂರ್ಯ ಕುಮಾರ್ ಅವರ “ಮಂಗಳಿ” ಪುಸ್ತಕ ಬಿಡುಗಡೆ*
- *ಸಿದ್ದಾಪುರದಲ್ಲಿ ನೃತ್ಯ ಸಂಭ್ರಮ : ಗಮನ ಸೆಳೆದ ನೃತ್ಯ ವೈಭವ*
- *ಎಸ್.ಕೆ.ಎಸ್.ಎಸ್.ಎಫ್ ವಿರಾಜಪೇಟೆ ವಲಯ ಇಸ್ಲಾಮಿಕ್ ಕಲೋತ್ಸವ : ವಿರಾಜಪೇಟೆ ಯೂನಿಟ್ ಚಾಂಪಿಯನ್*
- *ಸುಂಟಿಕೊಪ್ಪ : ಸಂತಮೇರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ*