ಮಡಿಕೇರಿ ಅ.26 NEWS DESK : ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕತ್ತೂರು, ದೊಡ್ಡತ್ತೂರು ಗ್ರಾಮದಲ್ಲಿ ಮಳೆಯಿಂದಾಗಿ ಹಾನಿಗೊಳಗಾದ ಜಮೀನುಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜ್ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಚಿಕ್ಕತ್ತೂರು, ದೊಡ್ಡತ್ತೂರು ಗ್ರಾಮದ ರಾಮೇಗೌಡ, ಕಾಳೇಗೌಡ ಅವರ ಜಮೀನಿಗೆ ಭೇಟಿ ನೀಡಿದ ಅಧಿಕಾರಿಗಳು ಬೆಳೆಗಾರರಿಂದ ನಷ್ಟದ ಕುರಿತು ಮಾಹಿತಿ ಪಡೆದರು. ಈ ಸಂದರ್ಭ ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಉಪ ವಿಭಾಗಾಧಿಕಾರಿ ವಿನಾಯಕ್ ನರ್ವಾಡೆ, ಕುಶಾಲನಗರ ತಾಲ್ಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ, ಕಂದಾಯ ಪರಿವೀಕ್ಷಣಾಧಿಕಾರಿ ಸಂತೋಷ್, ಗ್ರಾಮ ಲೆಕ್ಕಾಧಿಕಾರಿ ಗುರುದರ್ಶನ್, ಸಿಬ್ಬಂದಿ ಲೋಕೇಶ್ ಹಾಜರಿದ್ದರು.