ಮಡಿಕೇರಿ ಅ.26 NEWS DESK : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿ ಇವರ ಸಹಯೋಗದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡ ಅವರ ಸಂಸ್ಮರಣಾ ದಿನಾಚರಣೆಯ ಪ್ರಯುಕ್ತ ಅಕ್ಟೋಬರ್, 31 ರಂದು ಬೆಳಗ್ಗೆ 9.30 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿರುವ ಗುಡ್ಡಮನೆ ಅಪ್ಪಯ್ಯ ಗೌಡರ ಸ್ಮಾರಕದಲ್ಲಿ ಪುಷ್ಪ ನಮನ ಸಲ್ಲಿಸುವ ಕಾರ್ಯಕ್ರಮ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಭಾರತೀಯ ಕಾಫಿ ಮಂಡಳಿ ಅಧ್ಯಕ್ಷರಾದ ಎಂ.ಜೆ.ದಿನೇಶ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾದ ಕೊಲ್ಯದ ಗಿರೀಶ್, ಪಿ.ಸಿ.ಜಯರಾಮ್, ಲಕ್ಷ್ಮೀನಾರಾಯಣ ಕಜೆಗದ್ದೆ, ಇತರರು ಪಾಲ್ಗೊಳ್ಳಲಿದ್ದಾರೆ.