ವಿರಾಜಪೇಟೆ NEWS DESK ಅ.27 : ವಿರಾಜಪೇಟೆ ಸಮೀಪದ ಪೆರುಂಬಾಡಿ ಶಂಸುಲ್ ಉಲಮಾ ಮಹಿಳಾ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ವಿವಿಧ ಕ್ರೀಡಾಕೂಟದಲ್ಲಿ ಪಾಲ್ಗೊಂಡ ರಾಜ್ಯ ಮಟ್ಟಕ್ಕೆ ಅಯ್ಕೆಯಾಗಿದ್ದಾರೆ. ಪೆರುಂಬಾಡಿ ಶಂಸುಲ್ ಉಲಮಾ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ ವ್ಯಾಸಾಂಗ ಮಾಡುತ್ತಿರುವ ಮೂವರು ವಿದ್ಯಾರ್ಥಿಗಳಾದ ಆಸಿಫಾ ಎಂ.ಎಚ್, ಫಾತಿಮತ್ ರಹಿಯಾನಾ ಹಾಗೂ ಶಂಶೀರ ವಿದ್ಯಾರ್ಥಿನಿಯರು ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ವಾಲಿಬಾಲ್ ,ಡಿಸ್ಕಸ್ ಎಸೆತದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಸಾಧನೆ ಮಾಡುವ ಮೂಲಕ ಇದೀಗ ರಾಜ್ಯ ಮಟ್ಟಕ್ಕೆ ಅಯ್ಕೆಯಾಗಿ ವಿಜಯಪುರ ಜಿಲ್ಲೆ ಮತ್ತು ತುಮಕೂರಿನಲ್ಲಿ ನಡೆಯುತ್ತಿರುವ ವಾಲಿಬಾಲ್, ಡಿಸ್ಕಸ್ ಎಸೆತ ಪಂದ್ಯಾಟದಲ್ಲಿ ಭಾಗವಹಿಸಲಿದ್ದಾರೆ.










