ಮಡಿಕೇರಿ NEWS DESK ಅ.27 : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಮಡಿಕೇರಿಯಲ್ಲಿ ಪಥಸಂಚಲನ ನಡೆಯಿತು. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಿಂದ ಗಾಂಧಿ ಮೈದಾನದವರೆಗೆ ಸಾಗಿದ ಪಥಸಂಚಲನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಿರಿಯರು, ಯುವಕರು ಹಾಗೂ ಮಕ್ಕಳು ಪಾಲ್ಗೊಂಡಿದ್ದರು. ಮಾರ್ಗದುದ್ದಕ್ಕೂ ಭಾರತಾಂಬೆಯ ಭಾವಚಿತ್ರಕ್ಕೆ ಸ್ಥಳೀಯರು ಹೂಮಳೆಗರೆದರು.











